Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರ:...

ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರ: ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ20 April 2018 11:28 PM IST
share
ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರ: ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಬೆಂಗಳೂರು, ಎ.20: ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ಸರಕಾರದ ಆದೇಶ ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸರಕಾರದ ವರ್ಗಾವಣೆ ಆದೇಶ ಮತ್ತು ಆ ಆದೇಶ ಎತ್ತಿಹಿಡಿದ ಕೇಂದ್ರಆಡಳಿತಾತ್ಮ ನ್ಯಾಯಮಂಡಳಿ (ಸಿಎಟಿ) ತೀರ್ಪು ರದ್ದುಪಡಿಸುವಂತೆ ಕೋರಿ ರೋಹಿಣಿ ಸಿಂಧೂರಿ ದಾಸರಿ ಶುಕ್ರವಾರ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ಅರ್ಜಿ ಇತ್ಯರ್ಥವಾಗುವರೆಗೂ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ. ಈ ಅರ್ಜಿ ಸೋಮವಾರ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬರುವ ನಿರೀಕ್ಷೆ ಇದೆ.

ಈ ಮಧ್ಯೆ ಹಾಲಿ ಹಾಸನ ಜಿಲ್ಲಾಧಿಕಾರಿಯಾಗಿರುವ ರಂದೀಪ್ ಸಹ, ಹೈಕೋರ್ಟ್‌ಗೆ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಾದ ಆಲಿಸದೇ ರೋಹಿಣಿ ಅರ್ಜಿ ಕುರಿತು ಯಾವುದೇ ಆದೇಶ ಹೊರಡಿಸಬಾರದು ಎಂದು ರಂದೀಪ್ ತಮ್ಮ ಕೇವಿಯಟ್ ಅರ್ಜಿಯಲ್ಲಿ ಕೋರಿದ್ದಾರೆ. ಇದರಿಂದ ತಮ್ಮ ವರ್ಗಾವಣೆ ಮಾಡಿದ ಸರಕಾರದ ವಿರುದ್ಧ ರೋಹಿಣಿ ಅವರು ಹೈಕೋರ್ಟ್ ಮತ್ತೊಂದು ಸುತ್ತಿನ ಕಾನೂನು ಸಮರ ನಡೆಸುತ್ತಿದ್ದು, ಪ್ರಕರಣ ಕುತೂಹಲ ಕೆರಳಿಸಿದೆ.

ಹಿನ್ನೆಲೆ ಏನು: ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಿಂದ ಹುದ್ದೆಯಿಂದ, ಕೈಗಾರಿಕಾ ಉದ್ಯೋಗ ಮತ್ತು ತರಬೇತಿ ನಿರ್ದೇಶನಾಲಯಕ್ಕೆ ವ್ಯವಸ್ಥಾಪಕ ನಿರ್ದೇಶರ ಹುದ್ದೆಗೆ ವರ್ಗಾವಣೆ ಮಾಡಿ ಮಾ.3ರಂದು ರಾಜ್ಯ ಸರಕಾರ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಸಿಎಟಿಗೆ ಅರ್ಜಿ ಸಲ್ಲಿಸಿದ್ದ ರೋಹಿಣಿ, ಭಾರತೀಯ ಆಡಳಿತಾತ್ಮಕ ಸೇವೆಗಳ (ಐಎಎಸ್) ತಿದ್ದುಪಡಿ ನಿಯಮ-2014ರನ್ವಯ ಅಧಿಕಾರಿಯನ್ನು ಒಂದು ಹುದ್ದೆಗೆ ವರ್ಗಾವಣೆ ಮಾಡಿದರೆ, ಅಲ್ಲಿಂದ ಕನಿಷ್ಟ ಎರಡು ವರ್ಷಗಳ ಕಾಲ ವರ್ಗಾವಣೆ ಮಾಡುವಂತಿಲ್ಲ. ಆದರೆ, ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ಅವಧಿಗೂ ಮುನ್ನ ಸರಕಾರ ವರ್ಗಾವಣೆ ಮಾಡಿದೆ ಎಂದು ದೂರಿದ್ದರು.

ಹಾಗೆಯೇ, ಹಾಸನದ ಗಣಿ ಮಾಫಿಯ ವಿರುದ್ಧ ಕ್ರಮ ಕೈಗೊಂಡಿದ್ದ ಕಾರಣಕ್ಕೆ ತಮ್ಮನ್ನು ರಾಜಕೀಯ ಒತ್ತಡದಿಂದ ಅವಧಿಗೂ ಮುನ್ನ ವರ್ಗಾಯಿಸಲಾಗಿದೆ ಎಂದು ಆರೋಪಿಸಿದ್ದ ರೋಹಿಣಿ ಸಿಂಧೂರಿ, ತಮ್ಮ ವರ್ಗಾವಣೆ ಆದೇಶ ರದ್ದಪಡಿಸಬೇಕು ಎಂದು ಕೋರಿದ್ದರು. ಆದರೆ, ಅವರ ಅರ್ಜಿಯನ್ನು ಎ.17ರಂದು ವಜಾಗೊಳಿಸಿದ್ದ ಸಿಎಟಿ, ರೋಹಿಣಿ ಅವರ ವರ್ಗಾವಣೆಯಲ್ಲಿ ಸರಕಾರ ಸಂವಿಧಾನದ ವ್ಯಾಪ್ತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿಲ್ಲ. ವರ್ಗಾವಣೆ ಆದೇಶ ನ್ಯಾಯ ಸಮ್ಮತವಾಗಿದೆ. ಸರಕಾರದ ಆಡಳಿತದಲ್ಲಿ ನ್ಯಾಯಾಂಗ ಮಧ್ಯಪ್ರವೇಶಿಸಲಾಗದು ಎಂದು ಅಭಿಪ್ರಾಯಪಟ್ಟಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಕರಾರು ಅರ್ಜಿ ಸಲ್ಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X