ಕ್ರೀಡಾಪಟು ಗುರುರಾಜ್ ಪೂಜಾರಿಗೆ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಸನ್ಮಾನ

ಉಡುಪಿ, ಎ.21: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ಕಾಮನ್ ವೆಲ್ತ್ ಕ್ರೀಡಾಕೂಟದ ವೈಟ್ ಲೀಫ್ಟಿಂಗ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಉಡುಪಿಯ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಗುರುರಾಜ್ ಪೂಜಾರಿ, ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಏಷ್ಯನ್ ಗೇಮ್ಸ್ಗೆ ಸಿದ್ಧನಾಗಿದ್ದು, ಮುಂದಿನ ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಗುರಿ ಹೊಂದಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಉಡುಪಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.
Next Story





