Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಿಡಿ ಪ್ರಕರಣ ಮುಗಿದ ಅಧ್ಯಾಯ: ರಘುಪತಿ...

ಸಿಡಿ ಪ್ರಕರಣ ಮುಗಿದ ಅಧ್ಯಾಯ: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ21 April 2018 9:55 PM IST
share
ಸಿಡಿ ಪ್ರಕರಣ ಮುಗಿದ ಅಧ್ಯಾಯ: ರಘುಪತಿ ಭಟ್

ಉಡುಪಿ, ಎ.21: ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಡುಗಡೆ ಮಾಡಿರುವ ಸಿಡಿಯು ನನ್ನ ವಿರುದ್ಧ ಗೆಲ್ಲಲು ಆಗದವರು ಮಾಡಿರುವ ಷಡ್ಯಂತರ. ಅದು ದೊಡ್ಡ ವಿಷಯವೇ ಅಲ್ಲ. ಈ ಬಗ್ಗೆ ಯಾವುದೇ ಪ್ರಕರಣ ಕೂಡ ದಾಖಲಾಗಿರಲಿಲ್ಲ. ಇದರಿಂದ ಜನರಿಗೆ ಯಾವುದೇ ಸಮಸ್ಯೆ ಕೂಡ ಆಗಿರಲಿಲ್ಲ. ಆದುದರಿಂದ ಅದು ಮುಗಿದ ಅಧ್ಯಾಯ. ಅದನ್ನು ಮತ್ತೆ ಮತ್ತೆ ಕೆದಕುವುದು ಸರಿಯಲ್ಲ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.

ಉಡುಪಿಯ ಪಕ್ಷದ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಘೋಷಣೆ ವಿಳಂಬ ಆಗಲು ಪಕ್ಷದ ಒಳಗಿನ ತಾಂತ್ರಿಕ ಕಾರಣವೇ ಹೊರತು ಯಾವುದೇ ವಿರೋಧ ಅಲ್ಲ. ನನಗೆ ಟಿಕೆಟ್ ನೀಡುವುದಕ್ಕೆ ಯಾರು ವಿರೋಧ ಮಾಡಿಲ್ಲ. ಯಾರು ಕೂಡ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲ್ಲ. ಎಲ್ಲರೂ ಪ್ರಚಾರ ಕಾರ್ಯಕ್ಕೆ ಬರುತ್ತಾರೆ. ಯಾವುದೇ ಸಂಶಯ ಬೇಡ. ಟಿಕೆಟ್ ವಿಳಂಬದಿಂದ ಕಾರ್ಯಕರ್ತರ ಉತ್ಸಾಹ ಹೆಚ್ಚಾಗಿ, ನನಗೆ ಲಾಭವೇ ಆಗಿದೆ. ಈ ಬಾರಿ 100ಕ್ಕೆ 100 ಗೆಲ್ಲುವ ವಿಶ್ವಾಸ ಇದೆ ಎಂದರು.

ಶಿರೂರು ಸ್ವಾಮೀಜಿ ಸೇರಿದಂತೆ ಅಷ್ಟಮಠಾಧೀಶರ ಆಶೀರ್ವಾದ ಪಡೆದು ಕೊಳ್ಳುತ್ತೇನೆ. ಆ ಸಂದರ್ಭದಲ್ಲಿ ಶಿರೂರು ಸ್ವಾಮೀಜಿಯವರಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡುತ್ತೇನೆ. ಈಗಾಗಲೇ ಅವರನ್ನು ಪಕ್ಷದ ನಾಯಕರು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಅವರು ವಾಪಾಸ್ಸು ಪಡೆದು ಕೊಳ್ಳುತ್ತಾರೆ ಎಂಬ ವಿಶ್ವಾಸ ನಮಗೆ ಇದೆ. ಶಿರೂರು ಸ್ವಾಮೀಜಿ ಸ್ಪರ್ಧಿಸಿದರೆ ಪ್ರಮೋದ್ ಮಧ್ವರಾಜ್ ಅವರಿಗೆ ಲಾಭ ಆಗುತ್ತದೆ ಎಂಬುದು ಸುಳ್ಳು. ಉಡುಪಿ ಕ್ಷೇತ್ರದ ಮತದಾರರು ಬುದ್ದಿವಂರೆಂದು ಅವರು ತಿಳಿಸಿದರು.

ಎ.23ಕ್ಕೆ ನಾಮಪತ್ರ ಸಲ್ಲಿಕೆ

ಬಿಜೆಪಿ ಪಕ್ಷ ಮತ್ತೆ ನನಗೆ ಅವಕಾಶ ನೀಡಿದೆ. ಪಕ್ಷದ ಮುಖಂಡರು ಹಾಗೂ ಕ್ಷೇತ್ರದ ಜನತೆಯ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ. ಎ. 23ರಂದು ಬೆಳಗ್ಗೆ 10ಗಂಟೆಗೆ ನಗರದ ಚಿತ್ತರಂಜನ್ ಸರ್ಕಲ್‌ನಲ್ಲಿ ಸಭೆ ನಡೆಸಿ ಬಳಿಕ ಪಾದಯಾತ್ರೆಯ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ರಘುಪತಿ ಭಟ್ ಹೇಳಿದರು.

ಮೇ 1ರಂದು ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿರುವರು. ನಾನು 2004 ಮತ್ತು 2008ರಲ್ಲಿ ಸ್ಪರ್ಧಿಸಿದ್ದ ಸಂದರ್ಭದಲ್ಲಿ ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಪ್ರಚಾರ ಕಾರ್ಯಕ್ಕೆ ಉಡುಪಿಗೆ ಆಗಮಿಸಿದ್ದರು. ಆ ಎರಡು ಸಂದರ್ಭದಲ್ಲೂ ನಾನು ಜಯಗಳಿಸಿದ್ದೆ. ಇದೀಗ ಮತ್ತೆ ಅವರು ಉಡುಪಿಗೆ ಆಗಮಿಸುತ್ತಿದ್ದಾರೆ ಎಂದು ಅವರು ಜಯದ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪ್ರಭಾಕರ ಪೂಜಾರಿ, ದಿನಕರ ಬಾಬು, ರವಿ ಅಮೀನ್, ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಶ್ರೀಶ ನಾಯಕ್, ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

‘ರೇವ್‌ಪಾರ್ಟಿಗೂ ನನಗೂ ಸಂಬಂಧವಿಲ್ಲ’

ಮಲ್ಪೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮಾಡಿದ್ದೇನೆ ಹೊರತು ರೇವ್ ಪಾರ್ಟಿಯನ್ನು ನಾನು ಮಾಡಿಲ್ಲ. ನನ್ನ ಶಾಸಕ ಅವಧಿಯಲ್ಲಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದಿರುವುದು ರೇವ್ ಪಾರ್ಟಿ ಅಲ್ಲ. ಅದು ಇವೆಂಟ್ ಮೆನೇಜ್‌ಮೆಂಟ್. ನಾನು ಅಲ್ಲಿಗೆ ಶಾಸಕನಾಗಿ ಹೋಗಿದ್ದೇನೆ ಹೊರತು ಅದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಸ್ಪಷ್ಟಪಡಿಸಿದರು.

ಅಜ್ಞಾತ ಸ್ಥಳದಲ್ಲಿ ಔತಣ ಕೂಟ ನಡೆಸಿ ಡ್ರಗ್ಸ್ ಸೇವಿಸುವುದು ರೇವ್ ಪಾರ್ಟಿ. ಆದರೆ ಇಲ್ಲಿ ಅಂತಹದ್ದು ಯಾವುದೂ ನಡೆದಿಲ್ಲ. ನಾನು ಮಾಡಿದ ಒಳ್ಳೆಯ ಕೆಲಸದ ಬಗ್ಗೆ ಚರ್ಚೆ ನಡೆಯದೆ, ನನಗೆ ಸಂಬಂಧ ಇಲ್ಲದ ವಿಚಾರವನ್ನೇ ಹೆಚ್ಚು ಚರ್ಚಿಸಲಾಗುತ್ತಿದೆ. ಇದು ನನಗೆ ತುಂಬಾ ಬೇಸರ ನೀಡಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X