ಎ.23ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಉಡುಪಿಗೆ
ಉಡುಪಿ, ಎ.23: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎ.23ರಂದು ಉಡುಪಿ ಭೇಟಿ ಪ್ರಯುಕ್ತ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಮಣಿಪಾಲ ಕಂಟ್ರಿ ಇನ್ ಹೋಟೆಲ್ನಲ್ಲಿ ಸಂಜೆ 4 ಗಂಟೆಗೆ ಚಿಂತಕರ ಮಂಥನ ಎಂಬ ಕಾಯರ್ಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ವಿವಿಧ ಜನಪರ ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸುವ ಅವಕಾಶವಿದ್ದು ಪ್ರಚಲಿತ ರಾಷ್ಟ್ರೀಯ ಮತ್ತು ಸ್ಥಳೀಯ ವಿದ್ಯಾಮಾನಗಳಿಗೆ ಬೆಳಕು ಚೆಲ್ಲುವ ಸಂವಾದ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಆಸಕ್ತ ಸಂಘಟನೆಯ ಪ್ರಮುಖರು ಭಾಗವಹಿಸಬಹುದು ಎಂದು ಕಾರ್ಯಕ್ರಮ ಸಂಯೋಜಕ ಮಹೇಶ್ ಠಾಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





