ಹಸಿದವರಿಗೆ ಅನ್ನ ಕೊಡವರು ರಾಜ್ಯದ ಜನತೆಗೆ ಮುಖ್ಯ: ಐವನ್ ಡಿಸೋಜ

ಕುಂದಾಪುರ, ಎ.21: ರಾಜ್ಯದ ಜನತೆಗೆ ಹಸಿದ ಹೊಟ್ಟೆಗೆ ಅನ್ನ ಕೊಡವರು ಮುಖ್ಯವೇ ಹೊರತು, ಉಪದೇಶ ನೀಡುವವರಲ್ಲ. ಹಾಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಜನಪರ ಆಡಳಿತದ ಎದುರು ಬಿಜೆಪಿಯ ಯಾವ ತಂತ್ರಗಳು ಕೂಡ ಲಿಸುಲವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಟೀಕಿಸಿದ್ದಾರೆ.
ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಶಾಸ್ತ್ರಿ ಸರ್ಕಲ್ ಬಳಿ ಶನಿವಾರ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ, ಕೆಪಿಸಿಸಿ ಕಾರ್ಯದರ್ಶಿಗಳಾದ ಎಂ.ಎ.ಗೂರ್, ಮಮತಾ ಗಟ್ಟಿ, ಮಾಜಿ ಶಾಸಕ ಎನ್.ಎಂ.ಅಡ್ಯಂತಾಯ ಮಾತನಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ ಅಧ್ಯಕ್ಷತೆ ವಹಿಸಿದ್ದರು. ಎಐಸಿಸಿ ಸದಸ್ಯ ಅಮೃತ್ ಶೆಣೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಟದ ಶಂಕರ್ ಕುಂದರ್, ಹಿರಿಯ ನಾಯಕ ಮಾಣಿ ಗೋಪಾಲ, ಕೆದೂರು ಸದಾನಂದ ಶೆಟ್ಟಿ, ರೋಶನಿ ಒಲಿವೆರಾ, ಮುಖಂಡರಾದ ಕಿಶನ್ ಹೆಗ್ಡೆ ಕೊಳ್ಕೆ ಬೈಲು, ವಿಕಾಸ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ವಿನೋದ್ ಕಾರ್ಯ ಕ್ರಮ ನಿರೂಪಿಸಿದರು.







