ಶಿರ್ವ: ಕಾಂಗ್ರೆಸ್ ಗ್ರಾಮೀಣ ಸಮಿತಿ ಕಚೇರಿ ಉದ್ಘಾಟನೆ
ಶಿರ್ವ, ಎ.22: ಕಾಪು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಶಿರ್ವ ಗ್ರಾಮೀಣ ಕಾಂಗ್ರೆಸ್ ಕಚೇರಿಯನ್ನು ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಶನಿವಾರ ಉದ್ಘಾಟಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಕಾಪು ದಿವಾಕರ ಶೆಟ್ಟಿ, ಅಶೋಕ್ಕುಮಾರ್ ಕೊಡವೂರು, ವಿಲ್ಸನ್ ರೊಡ್ರಿಗಸ್, ರಾಜಶೇಖರ ಕೋಟ್ಯಾನ್, ಗೀತಾ ವಾಗ್ಲೆ, ಪ್ರಭಾವತಿ, ಅಬ್ದುಲ್ ಅಝೀಝ್, ಮೆಲ್ವಿನ್ ಉಪಸ್ಥಿತರಿದ್ದರು. ಜಿಪಂ ಸದಸ್ಯ ವಿಲ್ಸನ್ ರೊಡ್ರಿಗಸ್ ಸ್ವಾಗತಿಸಿ, ಆರ್.ಪಾಟ್ಕರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Next Story