ಮನೆಯಿಂದಲೇ ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ
ಜೀವನ್ಮರಣ ಸ್ಥಿತಿಯಲ್ಲಿ ಅಪ್ರಾಪ್ತೆ
ಜಾರ್ಖಂಡ್, ಎ.23: ಇಲ್ಲಿನ ಡುಮ್ಕಾ ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಬಾಲಕಿಯೊಬ್ಬಳನ್ನು ಮನೆಯಿಂದ ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದಿದ್ದು, ಅಪ್ರಾಪ್ತೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಮನೆಯ ಬಾಗಿಲನ್ನು ಮುಚ್ಚುತ್ತಿದ್ದ ಸಂದರ್ಭ ಬಾಲಕಿಯನ್ನು ಮೂವರು ದುಷ್ಕರ್ಮಿಗಳು ಅಪಹರಿಸಿದ್ದರು. ಮನೆಯಿಂದ ನಿರ್ಮಾಣ ಹಂತದಲ್ಲಿದ್ದ ಕಟ್ಟಡಕ್ಕೆ ಬಾಲಕಿಯನ್ನು ಎಳೆದೊಯ್ದ ದುಷ್ಕರ್ಮಿಗಳು ಅಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲಕಿ ಕಾಣದೇ ಇದ್ದಾಗ ಮನೆಯಲ್ಲಿದ್ದವರು ಹುಡುಕಾಟದಲ್ಲಿ ತೊಡಗಿದ್ದಾರೆ. ಪಾಕುರ್ ಜಿಲ್ಲೆಯ ನಿವಾಸಿಯಾದ ಬಾಲಕಿ ಸಂಬಂಧಿಯೊಬ್ಬರ ಮನೆಯಲ್ಲಿದ್ದಳು. ಸೋಮವಾರ ಊರವರು ಬಾಲಕಿಯನ್ನು ಪತ್ತೆಹಚ್ಚಿದ್ದಾರೆ. ನೆಲದ ಮೇಲೆ ಬಿದ್ದುಕೊಂಡಿದ್ದ ಆಕೆಯ ಕಾಲುಗಳನ್ನು ಬೆಲ್ಟ್ ನಿಂದ ಕಟ್ಟಲಾಗಿತ್ತು. ಬಾಯಿಗೆ ಮರಳನ್ನು ತುಂಬಿಸಲಾಗಿತ್ತು ಎನ್ನಲಾಗಿದೆ. ಕೂಡಲೇ ಊರವರು ಪೊಲೀಸರಿಗೆ ಮಾಹಿತಿ ನೀಡದ್ದಾರೆ. ಪ್ರಜ್ಞಾಹೀನಳಾಗಿದ್ದ ಬಾಲಕಿಯನ್ನು ಸಾದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನದ ನಂತರ ಬಾಲಕಿಗೆ ಪ್ರಜ್ಞೆ ಮರಳಿದೆ ಎನ್ನಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ.