Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.28ರಂದು ಬಂಟರ ಮಾತೃ ಸಂಘದ ಬಹಿರಂಗ...

ಎ.28ರಂದು ಬಂಟರ ಮಾತೃ ಸಂಘದ ಬಹಿರಂಗ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ24 April 2018 11:28 PM IST
share
ಎ.28ರಂದು ಬಂಟರ ಮಾತೃ ಸಂಘದ ಬಹಿರಂಗ ಅಧಿವೇಶನ

ಮಂಗಳೂರು, ಎ.24: ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ ಎ. 28ರಂದು ಅಡ್ಯಾರ್‌ನ ವಿ.ಕೆ ಶೆಟ್ಟಿ ಸಭಾಭವನ ಅಡ್ಯಾರ್ ಗಾರ್ಡನ್ಸ್‌ನಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಹಿಂದೆ ಅಧಿವೇಶನವನ್ನು ಬಂಟ್ಸ್ ಹಾಸ್ಟೆಲ್‌ನ ವಠಾರದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಚುನಾವಣಾ ಪ್ರಕ್ರಿಯೆಗಳಿಗೆ ಈ ಜಾಗವನ್ನು ಮೀಸಲಿಟ್ಟಿರುವುದರಿಂದ ಕಾರ್ಯಕ್ರಮ ಸ್ಥಳಾಂತರಿಸಲಾಗಿದೆ ಎಂದರು. ಬೆಳಗ್ಗೆ 10 ಗಂಟೆಗೆ ನಡೆಯುವ ಅಧಿವೇಶನದ ಅಧ್ಯಕ್ಷತೆಯನ್ನು ನ್ಯಾ. ಎನ್. ಸಂತೋಷ್ ಹೆಗ್ಡೆ ವಹಿಸಲಿದ್ದಾರೆ.

ಇದೇ ಸಂದರ್ಭ 2016-17ನೆ ಸಾಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಚಿನ್ನದ ಪದಕ, ಪ್ರಶಸ್ತಿ ವಿತರಣೆ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ ಎಂದರು.

ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸೇವೆಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮೆಡಿಕಲ್ ಸರ್ವಿಸಸ್‌ನ ಮುಖ್ಯಸ್ಥ ಡಾ. ಸಂಜೀವ ರೈ, ಮಣಿಪಾಲ ವಿವಿಯ ಪಿಎಚ್‌ಡಿ ಪಿಡಿಎಫ್ ಎಂಎಂಎಂಸಿ ಫಿಸಿಯೋಲಜಿ ವಿಭಾಗದ ಮುಖ್ಯಸ್ಥೆ ಡಾ.ಕಿರಣ್ಮಯಿ ಎಸ್. ರೈ, ದೇಶ ಸೇವಾ ವಿಭಾಗದಲ್ಲಿ ಬ್ರಿಗೇಡಿಯರ್ ಐ.ಎನ್.ರೈ, ಹೊಟೇಲ್ ಉದ್ಯಮದಲ್ಲಿದ್ದು ಉತ್ತಮ ಸಮಾಜ ಸೇವೆಗೆ ಪುಣೆ ಹೊಟೇಲ್ ಉದ್ಯಮಿ ಜಗನ್ನಾಥ ಶೆಟ್ಟಿ ಪುಣೆ, ಉತ್ತಮ ಕೈಗಾರಿಕೋದ್ಯಮಿಯಾಗಿ ವಿ.ಕೆ. ಗ್ರೂಪ್ ಆಫ್ ಕಂಪನಿ ಮುಂಬೈನ ಅಧ್ಯಕ್ಷ ಮದ್ಯಗುತ್ತು ಕರುಣಾಕರ ಶೆಟ್ಟಿ ಮುಂಬೈ, ಜೀವಮಾನದ ಶ್ರೇಷ್ಠ ಸಾಧನೆಗೆ ಎಸ್‌ಕೆಎಸ್ ಗ್ರೂಪ್‌ನ ಸನತ್ ಕುಮಾರ್ ಶೆಟ್ಟಿ, ಉತ್ತಮ ಕೃಷಿಕ ಸಾಧನೆಗೆ ಕೆ.ಎನ್. ಪ್ರಫುಲ್ಲ ಆರ್. ರೈ, ನಡುಹಿತ್ಲು ಮಹಾಬಲ ಶೆಟ್ಟಿ, ಮೋನಪ್ಪ ಆಳ್ವ ವಿ. ಮುಳ್ಳೇರಿಯಾ, ಮೊಗರುಗುತ್ತು ರಾಜೇಂದ್ರ ಮೇಂಡ, ಸಾಹಿತ ಕ್ಷೇತ್ರದಲ್ಲಿ ಡಾ. ನಾಗವೇಣಿ ಹೊಸಬೆಟ್ಟು, ಉತ್ತಮ ಶಿಕ್ಷಕ ಪ್ರೊ. ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ, ಉಷಾ ಎಚ್. ಬಲ್ಲಾಳ್, ಕರುಣಾಕರ ಶೆಟ್ಟಿ ಕೊಲ್ಲೂರು, ಉತ್ತಮ ಸಮಾಜ ಸೇವೆಗೆ ಸಿಎ ಎಚ್.ಆರ್. ಶೆಟ್ಟಿ, ಕಲಾ ಕ್ಷೇತ್ರದಲ್ಲಿ ಶಶಿ ವಿ. ಶೆಟ್ಟಿ, 2017ರ ಸಾಲಿನಲ್ಲಿ ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ಉತ್ತಮ ಕ್ರೀಡಾಪಟು ಅರ್ಜುನ ಪ್ರಶಸ್ತಿ ಪುರಸ್ಕೃತ ಸತೀಶ್ ರೈ ಪುತ್ತೂರು, ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ, ಶೈಕ್ಷಣಿಕ ಸಾಧನೆಗೆ ನಿತೇಶ್ ಶೆಟ್ಟಿ ಅವರಿಗೆ ಚಿನ್ನದ ಪದಕ, ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಭಿಷೇಕ್ ಶೆಟ್ಟಿ ನೆಲ್ಯಾಡಿ, ಶಿಬಾನಿ ಜಿ. ಶೆಟ್ಟಿ, ಅದ್ವಿತ್ ಡಿ. ಶೆಟ್ಟಿ, ಸಾನ್ಯಾ ಡಿ. ಶೆಟ್ಟಿ, ಆಯುಷ್ ಆರ್. ಶೆಟ್ಟಿ ಹಾಗೂ ಯುವ ವಿಜ್ಞಾನಿಗಳಾದ ಪ್ರಖ್ಯಾತ್ ಭಂಡಾರಿ ಮತ್ತು ಪ್ರಣವ್ ಭಂಡಾರಿ ಪುತ್ತೂರು ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುವುದು. ಅದೇ ದಿನ ಅಪರಾಹ್ನ 2:30ಕ್ಕೆ ಸರ್ವ ಸದಸ್ಯರ ಸಭೆ ನಡೆಯಲಿದೆ ಎಂದು ಅವರು ಹೇಳಿದರು.

50 ವಿಶೇಷ ಚೇತನರ ದತ್ತು

ಬಂಟರ ಯಾನೆ ನಾಡವರ ಮಾತೃ ಸಂಘವು ಪ್ರಸಕ್ತ ಸಾಲಿನಿಂದ 50 ಮಂದಿ ವಿಶೇಷ ಚೇತನರ ದತ್ತು ಪಡೆಯಲು ನಿರ್ಧರಿಸಿದೆ. ಇದಕ್ಕಾಗಿ ಸಂಘದ ಸಮಿತಿಯು ಅರ್ಹರನ್ನು ಆಯ್ಕೆ ಮಾಡಿ ಅವರಿಗೆ ಅಗತ್ಯ ನೆರವನ್ನು ಕಲ್ಪಿಸಲಿದೆ ಎಂದು ಅಜಿತ್ ಕುಮಾರ್ ರೈ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X