ಮಡಿಕೇರಿ: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಸಾವು

ಮಡಿಕೇರಿ,ಎ.25: ಮಡಿಕೇರಿಯ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಖೈದಿಯೊಬ್ಬ ಮೃತಪಟ್ಟಿರುವ ಘಟನೆ ಎ.24 ರಂದು ಸಂಜೆ ನಡೆದಿದೆ.
ಬಾಳೆಲೆಯ ದೇವನೂರು ಗ್ರಾಮದ ನಿವಾಸಿ ಪಂಜಿರಿಎರವರ ಮುತ್ತ(32) ಎಂಬಾತನೆ ಮೃತಪಟ್ಟ ವಿಚಾರಣಾಧೀನ ಖೈದಿಯಾಗಿದ್ದಾನೆ.
ಎ.24 ರ ಸಂಜೆ ಜೈಲಿನಲ್ಲಿ ಮುತ್ತನಿಗೆ ಎದೆ ನೋವು ಕಾಣಿಸಿಕೊಂಡ ಕಾರಣ ಜೈಲು ಸಿಬ್ಬಂದಿಗಳು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಹೇಳಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಮುತ್ತ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





