Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ಗೆ...

ಬಹರೈನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ಗೆ ಅದ್ದೂರಿ ತೆರೆ: ಇಂಟೆಕ್ಸ್ ಲಯನ್ಸ್ ತಂಡ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ25 April 2018 5:00 PM IST
share
ಬಹರೈನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ಗೆ ಅದ್ದೂರಿ ತೆರೆ: ಇಂಟೆಕ್ಸ್ ಲಯನ್ಸ್ ತಂಡ ಚಾಂಪಿಯನ್

ಬಹರೈನ್, ಎ.25: ಆರು ತಂಡಗಳು, ತೊಂಬತ್ತು ಆಟಗಾರರು ಸುಮಾರು ಒಂದು ತಿಂಗಳ ಕಾಲ ದ್ವೀಪದ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣವನ್ನು ಸೃಷ್ಟಿಸಿ ಮನರಂಜಿಸಿದ ‘ಬಹರೈನ್ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾಟದ ಪ್ರಥಮ ಆವೃತ್ತಿ ಇತ್ತೀಚೆಗೆ ಇಲ್ಲಿನ ಇಸಾ ಟೌನಿನಲ್ಲಿರುವ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಮಾಪನಗೊಂಡಿತು.

ಫೈನಲ್ ಪಂದ್ಯಾಟದಲ್ಲಿ ಕನ್ನಡಿಗ ಉದ್ಯಮಿ ಶಶಿಧರ್ ಶೆಟ್ಟಿ ಮಾಲಕತ್ವದ ಇಂಟೆಕ್ಸ್ ಲಯನ್ಸ್ ತಂಡವು ‘ಬಹರೈನ್ ಪ್ರೀಮಿಯರ್ ಲೀಗ್’ನ ಪ್ರಥಮ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿತು. ಅವಾನ್ ವಾರಿಯರ್ಸ್ ತಂಡ ರನ್ನರ್ ಅಪ್ ಆಯಿತು.

ಸಮಾರೋಪ ಸಮಾರಂಭವು ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರ ಕಲಾ ಪ್ರದರ್ಶನ ಹಾಗೂ ಬಹುಮಾನ ವಿತರಣೆಯೊಂದಿಗೆ ವರ್ಣರಂಜಿತ ಮುಕ್ತಾಯ ಕಂಡಿತು. ಬಾಲಿವುಡ್ ನಟ ಸುನೀಲ್ ಶೆಟ್ಟಿ, ಖ್ಯಾತ ಭಾರತೀಯ ಕ್ರಿಕೆಟ್ ಪಟು ಆಕಾಶ್ ಚೋಪ್ರಾ ಮುಂತಾದವರು ಪಾಲ್ಗೊಂಡಿದ್ದರು.

ಅನಿವಾಸಿ ಕನ್ನಡಿಗ ಉದ್ಯಮಿ, ಸಾರಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮುಹಮ್ಮದ್ ಮನ್ಸೂರ್ ಅವರ ಕನಸಿನ ಕೂಸಾಗಿರುವ ‘ಬಹರೈನ್ ಪ್ರೀಮಿಯರ್‌ಲೀಗ್’ ಕ್ರಿಕೆಟ್ ಪಂದ್ಯಾವಳಿ ತನ್ನ ಪ್ರಥಮ ಆವೃತ್ತಿಯಲ್ಲೇ ಜನಪ್ರಿಯಗೊಂಡು ಅಪಾರ ಜನಮನ್ನಣೆಗೆ ಪಾತ್ರವಾಯಿತು.

ಬಹರೈನ್ ಅಥ್ಲೆಟಿಕ್ಸ್ ಅಸೋಸಿಯೇಶನ್‌ನ ಅಧ್ಯಕ್ಷ, ಸುಪ್ರೀಂ ಕೌನ್ಸಿಲ್ ಆಫ್ ಯೂತ್ ಆ್ಯಂಡ್ ಸ್ಪೋರ್ಟ್ಸ್‌ನ ಉಪಾಧ್ಯಕ್ಷರೂ ಆಗಿರುವ ಇಲ್ಲಿನ ರಾಜಮನೆತನದ ಶೇಕ್ ಖಾಲಿದ್ ಬಿನ್ ಹಮದ್ ಅಲ್ ಖಲೀಫಾರ ಆಶ್ರಯದಲ್ಲಿ ಕೆ.ಎಚ್.ಕೆ. ಸ್ಪೋರ್ಟ್ಸ್ ಹಾಗೂ ಎಕ್ಸೆಲೊನ್ ಸಂಸ್ಥೆಯ ಸಹಯೋಗದಲ್ಲಿ ಈ ಪಂದ್ಯಾಟ ಆಯೋಜಿಸಲಾಗಿತ್ತು. ಮುಹಮ್ಮದ್ ಮನ್ಸೂರ್ ‘ಬಹರೈನ್ ಪ್ರೀಮಿಯರ್ ಲೀಗ್’ ಅಧ್ಯಕ್ಷರಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮಾದರಿಯಲ್ಲೇ ಆಯೋಜಿಸಲಾಗಿರುವ ಈ ಪಂದ್ಯಾವಳಿಯಲ್ಲಿ ತಂಡಗಳ ಖರೀದಿಯ ನಂತರ ಆಟಗಾರರ ಹರಾಜು ಪ್ರಕ್ರಿಯೆ ಕೂಡ ನಡೆದಿತ್ತು. ಬಹರೈನ್‌ನಲ್ಲಿ ನೆಲೆಸಿರುವ ಭಾರತ, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಮೂಲದ ಅತ್ಯುತ್ತಮ ಕ್ರಿಕೆಟ್ ಪಟುಗಳು ಈ ಪಂದ್ಯಾಟದಲ್ಲಿ ಪಾಲ್ಗೊಂಡಿದ್ದರು.

ಪಂದ್ಯಾಟಗಳ ಪೂರ್ವಭಾವಿಯಾಗಿ ಈ ಲೀಗ್‌ನ ಹೆಚ್ಚಿನ ಜನಜಾಗೃತಿ ಮೂಡಿಸಲು ಶಾಲಾ ಮಕ್ಕಳಿಗೆ ಕ್ರಿಕೆಟ್ ಬಗ್ಗೆ ಕ್ವಿಝ್ ಆಯೋಜಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ತಂಡಗಳ ಸಮವಸ್ತ್ರ ಬಿಡುಗಡೆ ಕಾರ್ಯಕ್ರಮ ಆಕರ್ಷಕವಾಗಿ ಜರುಗಿದರೆ, ಪಂದ್ಯಾಟಕ್ಕೆ ಅದ್ಧೂರಿಯಾಗಿಯೇ ಚಾಲನೆ ನೀಡಲಾಗಿತ್ತು.

ಫೈನಲ್ ಪಂದ್ಯದಲ್ಲಿ ಇಂಟೆಕ್ಸ್ ಲಯನ್ಸ್ ತಂಡ ಮತ್ತು ಅವಾನ್ ವಾರಿಯರ್ಸ್ ಮುಖಾಮುಖಿಯಾದವು. ಪಂದ್ಯದಲ್ಲಿ ಸರ್ವಾಂಗೀಣ ಆಟದ ಪ್ರದರ್ಶನ ನೀಡಿದ ಇಂಟೆಕ್ಸ್ ಲಯನ್ಸ್ ಗೆಲುವು ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಫೈನಲ್ ಪಂದ್ಯದ ನಾಣ್ಯ ಚಿಮ್ಮುವಿಕೆಯನ್ನು ಗೆದ್ದುಕೊಂಡ ‘ಅವಾನ್ ವಾರಿಯರ್ಸ್’ ಬ್ಯಾಟಿಂಗನ್ನು ಆಯ್ದುಕೊಂಡಿತು. ನಿಗದಿತ 20 ಓವರುಗಳಲ್ಲಿ 142 ರನ್‌ಗಳ ಬೃಹತ್ ಮೊತ್ತವನ್ನೇ ಪೇರಿಸಿತು. ಇದಕುತ್ತರವಾಗಿ ಬಿರುಸಿನ ಆಟ ಆರಂಭಿಸಿದ ‘ಇಂಟೆಕ್ಸ್ ಲಯನ್ಸ್‌‘ ತಂಡ ಒಂದು ಹಂತದಲ್ಲಿ ಕೇವಲ 13 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಆತಂಕದ ಕ್ಷಣಗಳನ್ನು ಎದುರಿಸಿತು. ಈ ಹಂತದಲ್ಲಿ ಜೊತೆಯಾದ ತಂಡದ ನಾಯಕ ತಾಹಿರ್ ಹಾಗೂ ಪ್ರಶಾಂತ್ ಅವರ ಜವಾಬ್ದಾರಿಯುತ ಹಾಗೂ ಸ್ಫೋಟಕ ಬ್ಯಾಟಿಂಗಿನ ನೆರವಿನಿಂದ ಇನ್ನೂ 14 ಎಸೆತಗಳು ಬಾಕಿಯಿರುವಾಗಲೇ ‘ಇಂಟೆಕ್ಸ್ ಲಯನ್ಸ್‌‘ ಗೆಲುವಿನ ನಗೆ ಬೀರಿತು.

ಇದಕ್ಕೂ ಮೊದಲು ನಡೆದ ಸೆಮಿಫೈನಲ್ ಹಂತದ ಪಂದ್ಯಾಟದಲ್ಲಿ ಅವನ್ ವಾರಿಯರ್ಸ್ ತಂಡವು ಬಲಿಷ್ಠ ಬಹರೈನ್ ಸೂಪರ್ ಜಯಂಟ್ಸ್ ತಂಡವನ್ನು ಮಣಿಸಿ ಅಂತಿಮ ಹಂತಕ್ಕೆರಿದರೆ, ಇಂಟೆಕ್ಸ್ ಲಯನ್ಸ್ ತಂಡವು ಫೋರ್ ಸ್ಕ್ವಾರ್ ಚಾಲೆಂಜರ್ಸ್‌ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು.

ಬಹರೈನ್ ಪ್ರೀಮಿಯರ್ ಲೀಗ್‌ನ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಉಪಸ್ಥಿತಿಯಲ್ಲಿ ಫೈನಲ್ ಪಂದ್ಯಾಟಕ್ಕೆ ಖ್ಯಾತ ಭಾರತೀಯ ಕ್ರಿಕೆಟ್ ಪಟು ಆಕಾಶ್ ಚೋಪ್ರಾ ನಾಣ್ಯವನ್ನು ಚಿಮ್ಮಿಸಿದರು. ಬಾಲಿವುಡ್‌ನ ಖ್ಯಾತ ನಟ ಸುನೀಲ್ ಶೆಟ್ಟಿ ಬೌಲಿಂಗ್ ಮಾಡಿ ವಿದ್ಯುಕ್ತ ಚಾಲನೆ ನೀಡಿದರು.

ಸಾವಿರಾರು ಕ್ರಿಕೆಟ್ ಪ್ರೇಮಿಗಳ ಜೊತೆಗೆ ಅಂತಿಮ ಹಂತದ ಪಂದ್ಯಾಟವನ್ನು ಸಂಪೂರ್ಣವಾಗಿ ವೀಕ್ಷಿಸಿದ ಇವರು ಪಂದ್ಯಾಟದ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪಂದ್ಯಾಟದ ನಂತರ ಜರುಗಿದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಖ್ಯಾತ ಅಂತಾರಾಷ್ಟ್ರೀಯ ಕಲಾವಿದರಿಂದ ವೇದಿಕೆಯ ಮೇಲೆ ಪ್ರದರ್ಶನಗೊಂಡ ನೃತ್ಯ ಹಾಗೂ ಮೈನವಿರೇಳಿಸುವ ಸಾಹಸ ಪ್ರದರ್ಶನಗಳು ಸಮಾರೋಪ ಸಮಾರಂಭಕ್ಕೆ ಹೆಚ್ಚಿನ ಮೆರುಗು ನೀಡಿದವು.

 ತನ್ನ ಪ್ರಥಮ ಆವೃತ್ತಿಯಲ್ಲೇ ಅಭೂತಪೂರ್ವ ಯಶಸ್ಸು ಕಂಡ ಬಗ್ಗೆ ಅತೀವ ಹರ್ಷ ವ್ಯಕ್ತಪಡಿಸಿದ ಬಹರೈನ್ ಪ್ರೀಮಿಯರ್ ಲೀಗ್ ಅಧ್ಯಕ್ಷ ಕನ್ನಡಿಗ ಮುಹಮ್ಮದ್‌ಮನ್ಸೂರ್ ಪಂದ್ಯಾಟಕ್ಕೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಚಿತ್ರ-ವರದಿ: ಕಮಲಾಕ್ಷ ಅಮೀನ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X