Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಂಗಾವತಿ: ಕಾಂಗ್ರೆಸ್ ಅಭ್ಯರ್ಥಿ ಶಾಸಕ...

ಗಂಗಾವತಿ: ಕಾಂಗ್ರೆಸ್ ಅಭ್ಯರ್ಥಿ ಶಾಸಕ ಇಕ್ಬಾಲ್ ಅನ್ಸಾರಿ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ25 April 2018 5:08 PM IST
share
ಗಂಗಾವತಿ: ಕಾಂಗ್ರೆಸ್ ಅಭ್ಯರ್ಥಿ ಶಾಸಕ ಇಕ್ಬಾಲ್ ಅನ್ಸಾರಿ ನಾಮಪತ್ರ ಸಲ್ಲಿಕೆ

ಗಂಗಾವತಿ,ಎ.25: ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಇಕ್ಬಾಲ್ ಅನ್ಸಾರಿ ಅಪಾರ ಸಂಖ್ಯೆಯ ಕಾರ್ಯ ಕರ್ತರು ಮತ್ತು ಅಭಿಮಾನಗಳ ರೋಡ್ ಶೋ ಮಧ್ಯೆ ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. 

ಕೊಪ್ಪಳ ರಸ್ತೆಯಲ್ಲಿರುವ ಪಕ್ಷದ ಕಾರ್ಯಾಲಯದಿಂದ ಪ್ರಚಾರ ವಾಹನದಲ್ಲಿ ಕಾರ್ಯಕರ್ತರೊಂದಿಗೆ ಸಿಬಿಎಸ್‍ವೃತ್ತ, ಇಸ್ಲಾಂಪುರ, ಮಹಾವೀರ ಸರ್ಕಲ್, ಗಾಂಧಿ ಸರ್ಕಲ್, ಮಲ್ಲಿಕಾರ್ಜುನ ಮಠ, ದುರ್ಗಮ್ಮ ದೇವಸ್ಥಾನ ಮಾರ್ಗವಾಗಿ ಬಸ್-ನಿಲ್ದಾಣ ರಸ್ತೆ ಶ್ರೀ ಕೃಷ್ಣದೇವರಾಯ ವೃತ್ತದ ಮುಖಾಂತರ ಬಸವೇಶ್ವರ ಸರ್ಕಲ್‍ನಿಂದ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಮಾತನಾಡಿ, ನಾಮಪತ್ರ ಸಲ್ಲಿಕೆ ವೇಳೆ ನಿರೀಕ್ಷೆಗೂ ಮೀರಿ ಜನ ಬೆಂಬಲ ದೊರೆತಿದ್ದು, ಗೆಲುವು ಖಚಿತ ಎಂದರು. ಕ್ಷೇತ್ರದಲ್ಲಿ ಈ ಭಾರಿ ತಮ್ಮ ಅಭಿವೃದ್ಧಿ ಕೆಲಸಗಳನ್ನು ನೋಡಿ ಅತ್ಯಧಿಕ ಸಂಖ್ಯೆಯಿಂದ ನನ್ನನ್ನು ಆಯ್ಕೆ ಮಾಡಲು ಜನ ಬಯಸಿದ್ದಾರೆ . ಮುಖ್ಯಮಂತ್ರಿಗಳು ಜಾರಿ ಮಾಡಿದ ಯೋಜನೆಗಳು ಜನರನ್ನು ತಲುಪಿವೆ. ತಮ್ಮ ಗೆಲುವಿಗೆ ಸರಕಾರದ ಯೋಜನೆ ಮತ್ತು ಗಂಗಾವತಿ ಕ್ಷೇತ್ರದಲ್ಲಿ ಆಗಿರುವ ಪ್ರಗತಿ ಪ್ರಮುಖ ಕಾರಣವಾಗಿವೆ. ತಾನು ಎಂದಿಗೂ ಜಾತಿ ಧರ್ಮದ ನಡುವೆ ಬೇಧ ಮಾಡಿಲ್ಲ. ಸರ್ವ ಜನರಿಗೆ ಅನುಕೂಲ ವಾಗುವಂತ ಯೋಜನೆ ರೂಪಿಸಿ ಅನುಷ್ಠಾನ ಮಾಡಲಾಗಿದೆ. ಕ್ಷೇತ್ರದ ಜನರು ಬಿಜೆಪಿ ಸಂಘ ಪರಿವಾರ ಸೇರಿ ಪಟ್ಟಭದ್ರ ಹಿತಾಸಕ್ತಿಗಳ ಮಾತು ಕೇಳದೇ ಮತ್ತೊಮ್ಮೆ ತನಗೆ ಆಶೀರ್ವಾದ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹೆಸರನ್ನು ಉತ್ತುಂಗಕ್ಕೇರಿಸಿದ್ದಾರೆ. ಕನ್ನಡ ಭಾಷೆ ನೆಲ ಜಲ ವಿಷಯದಲ್ಲಿ ಮುಖ್ಯಮಂತ್ರಿಗಳು ಉತ್ತಮ ನಿರ್ಣಯಕೈಗೊಳ್ಳುವ ಮೂಲಕ ಕನ್ನಡ ಭಾಷೆ ಮೇಲಿನ ಪ್ರೀತಿ ಮೆರೆದಿದ್ದಾರೆ. ಇಡೀ ರಾಜ್ಯದ ಜನರು ಸಿದ್ದರಾಮಯ್ಯ ನವರ ಸರಕಾರವನ್ನು ಮತ್ತೊಮ್ಮೆ ನೋಡಲಿಚ್ಚಿಸಿದ್ದಾರೆ. ರೋಡ್ ಶೋ ಗೆ ಆಗಮಿಸಿದ ಕಾರ್ಯಕರ್ತ ರು ಮತ್ತು ಅಭಿಮಾನಿಗಳನ್ನು ಗಮನಿಸಿದರೆ ಕಾಂಗ್ರೆಸ್‍ಗೆ ಉತ್ತಮ ಬೆಂಬಲವಿದೆ ಎಂದು ಗೊತ್ತಾಗುತ್ತದೆ ಎಂದರು. 

ಈ ವೇಳೆ ಕೆಪಿಸಿಸಿ ವೀಕ್ಷಕ ಜಿ.ರಮೇಶ, ಮುಖಂಡರಾದ ಲಲಿತಾರಾಣಿರಾಯಲು, ಬಸವರಾಜ ಪೆದ್ದಲ್, ಫಕೀರಪ್ಪ ಎಮ್ಮಿ, ನರಸಪ್ಪ ಅಮರಜ್ಯೋತಿ, ಗಾಳೆಪ್ಪ ಘಂಟಿ, ಹನುಮಂತಪ್ಪ ಅರಸಿನಕೇರಿ, ಮುದ್ದಾಪ್ಪ ಆರ್ಹಾಳ ಮತ್ತು ಶಾಮೀದ್ ಮನಿಯಾರ್, ಇಮ್ತೀಯಾಜ್ ಅನ್ಸಾರಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X