Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾವನಾತ್ಮಕ ವಿಷಯಗಳನ್ನು ಕೆದಕಿ ಅಧಿಕಾರ...

ಭಾವನಾತ್ಮಕ ವಿಷಯಗಳನ್ನು ಕೆದಕಿ ಅಧಿಕಾರ ಗಿಟ್ಟಿಸುವುದೇ ಬಿಜೆಪಿ ಅಜೆಂಡಾ: ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ25 April 2018 5:52 PM IST
share
ಭಾವನಾತ್ಮಕ ವಿಷಯಗಳನ್ನು ಕೆದಕಿ ಅಧಿಕಾರ ಗಿಟ್ಟಿಸುವುದೇ ಬಿಜೆಪಿ ಅಜೆಂಡಾ: ಬಿ.ಕೆ.ಹರಿಪ್ರಸಾದ್

ಕೊಪ್ಪ, ಎ.25: ದೇಶದಲ್ಲಿ ಶಾಂತಿ, ನೆಮ್ಮದಿಯಿಂದ ಇರುವ ಪ್ರಗತಿಪರ ರಾಜ್ಯ ಯಾವುದಾದರೂ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇರುವ ಕರ್ನಾಟಕ ಮಾತ್ರ. ಶಾಂತಿ ಸಾಮರಸ್ಯದ ಜೀವನಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡರಿಗೆ ಮತನೀಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಕರೆಕೊಟ್ಟರು.

ಕಾಂಗ್ರೆಸ್ ಪಕ್ಷದ ವತಿಯಿಂದ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರೀ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಡ ಪರವಾಗಿ ಮತಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕುವೆಂಪುರವರ ಕವಿವಾಣಿಯಂತೆ ಇಲ್ಲಿ ಎಲ್ಲಾ ಧರ್ಮ, ಜಾತಿ, ವರ್ಗದ ಜನ ಸಹಸ್ರಾರು ವರ್ಷಗಳಿಂದ ಶಾಂತಿ ಸಾಮರಸ್ಯದಿಂದ ಬಾಳುವೆ ನಡೆಸುತ್ತಿದ್ದಾರೆ. ಆದರೆ ಕೋಮುವಾದಿ ಬಿಜೆಪಿ, ಸಂಘಪರಿವಾರದವರು ಜಾತಿ ಜಾತಿಗಳ ಮಧ್ಯೆ, ಮನಸ್ಸು ಮನಸ್ಸುಗಳ ಮಧ್ಯೆ ವಿಷಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಭಾವನಾತ್ಮಕ ವಿಚಾರಗಳ ಮೂಲಕ ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ. ಸಮಾಜವನ್ನು ವಿಭಜಿಸಿ, ಶಾಂತಿ ಕದಡುವ ಕೋಮುವಾದಿ ಬಿಜೆಪಿ ಪಕ್ಷವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಎಂದರು. 

5000 ವರ್ಷ ಇತಿಹಾಸವಿರುವ ನಮ್ಮ ದೇಶದಲ್ಲಿ ಎಲ್ಲಾ ವರ್ಗದ ಜನ ಇದ್ದಾರೆ. ದೇಶದಲ್ಲಿ ಜೈಲಿಗೆ ಹೋದ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಬಿಜೆಪಿಯ ಬಿ.ಎಸ್.ಯಡಿಯೂರಪ್ಪ ಮಾತ್ರ. ಸ್ವಾತಂತ್ರ್ಯ ನಂತರದ 70 ವರ್ಷಗಳಲ್ಲಿ ಮೋದಿ ಸರ್ಕಾರದಂತ ಕೆಟ್ಟ ಸರ್ಕಾರ ಬಂದಿಲ್ಲ. ಅಧಿಕಾರಕ್ಕೆ ಬಂದ ಕೂಡಲೇ ಜನತೆಯ ಕೈಗೆ ಪೊರಕೆ ಕೊಟ್ಟದ್ದೇ ಈ ಸರ್ಕಾರದ ಸಾಧನೆ. ಇದಕ್ಕಾಗಿ 4000 ಕೋಟಿ ಹಣ ಖರ್ಚು ಮಾಡಿದ್ದೇ ಬಂತು, ವಿನಃ ಪ್ರಯೋಜನವೇನು ಆಗಿಲ್ಲ. ಈ ಬಿಜೆಪಿಯವರು ಎಲ್ಲದಕ್ಕೂ ಗುಜರಾತ್ ಮಾದರಿ ಅಂತ ಹೇಳುತ್ತಾರೆ. ನಮ್ಮ ರಾಜ್ಯದಲ್ಲಿ 1.2 ಲಕ್ಷ ಇಂಜಿನಿಯರ್ ಸೀಟುಗಳಿದ್ದರೆ ಗುಜರಾತ್‍ನಲ್ಲಿ ಕೇವಲ 9000 ಮಾತ್ರ, ಕರ್ನಾಟಕದಲ್ಲಿ ಜಿಲ್ಲೆಗೊಂದು ಮೆಡಿಕಲ್, ಇಂಜಿನೀಯರಿಂಗ್ ಕಾಲೇಜುಗಳಿವೆ. ಆದರೆ ಗುಜರಾತ್‍ನಲ್ಲಿ ಇಡೀ ರಾಜ್ಯದಲ್ಲಿ ಇರುವುದು 4-5 ಜಲ್ಲೆಗಳಲ್ಲಿ 9 ಮೆಡಿಕಲ್ ಕಾಲೇಜುಗಳು. ಈ ಹಿಂದೆ 70 ವರ್ಷದಲ್ಲಿ ದೇಶದಲ್ಲಿ ನಡೆದ ನಕಲಿ ಎನ್‍ಕೌಂಟರ್ ಗಳು 100 ಆದರೆ ಕಳೆದ 1 ವರ್ಷದಲ್ಲಿ ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ 1000 ಆಗಿದೆ. ಆದರೆ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರು, ವಯಸ್ಕರು, ಕಾರ್ಮಿಕರು, ರೈತರು, ವಿದ್ಯಾರ್ಥಿಗಳೂ ಒಳಗೊಂಡಂತೆ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಯೋಜನೆಗಳು ರೂಪಿಸಿದೆ. ಬಿಜೆಪಿಯಿಂದ ಶಾಂತಿ ನೆಮ್ಮದಿ ತರಲು ಸಾಧ್ಯವಿಲ್ಲ. ಮಲೆನಾಡು ಶಾಂತಿ-ಸೌಹಾರ್ಧತೆಗೆ ಹೆಸರುವಾಸಿ. ಇಂತಹ ಪ್ರದೇಶದಲ್ಲಿ ಬಿಜೆಪಿಯನ್ನು ಗೆಲ್ಲಿಸಿದರೆ ಇಲ್ಲಿ ಸಾಮರಸ್ಯದಿಂದ ಬಾಳುವುದು ಕಷ್ಟವಾಗುತ್ತದೆ ಎಂದರು.

ಪಕ್ಷದ ಅಭ್ಯರ್ಥಿ ಟಿ.ಡಿ. ರಾಜೇಗೌಡ ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ದೇಶಕ್ಕೆ ಏನು ಮಾಡಿದೆ ಎಂದು ಬಿಜೆಪಿಯವರು ಕೇಳುತ್ತಿದ್ದಾರೆ. ಅದನ್ನು ನಿಮ್ಮ ಹಿರಿಯರ ಬಳಿ ಕೇಳಿ, ಉತ್ತರಿಸುತ್ತಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದಾಗ ಎಲ್ಲಾ ಕ್ಷೇತ್ರದಲ್ಲೂ ಹಿಂದಿತ್ತು. ಆರೋಗ್ಯ, ಶಿಕ್ಷಣ, ಆಹಾರ, ಕೈಗಾರಿಕೆ, ಉದ್ಯಮ, ವಿಜ್ಞಾನ, ತಂತ್ರಜ್ಞಾನ, ಕೃಷಿ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಇಂದು ಭಾರತ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದ್ದಾರೆ ಅದಕ್ಕೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ವಿಚಾರ ಮತ್ತು ಸಿದ್ದಾಂತದ ಮೇಲೆ ಕೆಲಸ ಮಾಡುತ್ತದೆ. ದೇವರಾಜ ಅರಸು, ಬಂಗಾರಪ್ಪ, ಸಿದ್ದರಾಮಯ್ಯ ಮುಂತಾದವರು ತುಳಿತಕ್ಕೊಳಗಾದ ಜನರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ಐಟಿಬಿಟಿ ತಂದು ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡಿದ ಶ್ರೇಯಸ್ಸು ಕಾಂಗ್ರೆಸ್ ಸರ್ಕಾರದ್ದು. ಕಾಗೋಡು ತಿಮ್ಮಪ್ಪನಂತಹ ಜನಪರ, ರೈತಪರ ಕಾಳಜಿಯ ಸಚಿವರಿಂದಾಗಿ ಇಂದು ಸಾವಿರಾರು ಮಂದಿ ರೈತರಿಗೆ ಅಕ್ರಮ ಸಕ್ರಮದಡಿ ಸಾಗುವಳಿ ಪತ್ರ ಸಿಕ್ಕಿ ನೆಮ್ಮದಿ ಹೊಂದಿದ್ದಾರೆ. ಅನ್ನಭಾಗ್ಯದಂತ ಯೋಜನೆಯಿಂದ ಹಸಿವು ಮುಕ್ತ ರಾಜ್ಯ ಮಾಡಿದ್ದು ಕಾಂಗ್ರೆಸ್. ಲೀಟರ್ ಹಾಲಿಗೆ ರು.5 ಬೋನಸ್ ನೀಡುವ ಮೂಲಕ ಹೈನುಗಾರಿಕೆಗೆ ಉತ್ತೇಜನ, ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ, ಮನಸ್ವಿನಿ, ವಿದ್ಯಾಸಿರಿ, ರೈತರ ಸಾಲಮನ್ನಾ ಮೂಲಕ ರಾಜ್ಯದ ಜನತೆಗೆ ನೆಮ್ಮದಿಯ ಜೀವನ ನೀಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ಕಳೆದ ಬಾರಿ ನನ್ನ ಬಗ್ಗೆ ಅಪಪ್ರಚಾರದ ಮೂಲಕ ಜನರ ಮನಸ್ಸನ್ನು ಕೆಡಿಸಿದ್ದರಿಂದ ನಾನು ಕೆಲವೇ ಮತಗಳ ಅಂತರದಲ್ಲಿ ಸೋಲುವಂತಾಯಿತು. ಸೋತರೂ ಮನೆಯಲ್ಲಿ ಕೂರದೇ ಕ್ಷೇತ್ರದ ಎಲ್ಲಾ ಕಡೆ ಓಡಾಡಿ ಸಾಂಸ್ಕ್ರತಿಕ, ಸಾಮಾಜಿಕ, ಧಾರ್ಮಿಕ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೆ. ಪಕ್ಷದ ಸಂಘಟನೆ ಜೊತೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಕಳೆದ ಆರೂವರೆ ವರ್ಷಗಳಿಂದ ಕ್ಷೇತ್ರದ ಜನತೆಯ ಮನ-ಮನಗಳ ಮಧ್ಯೆ ಸೌಹಾರ್ಧದ ಭಾಂದವ್ಯ ನಿರ್ಮಾಣ ಮಾಡಿದ್ದೇನೆ. ಮುಂದೆಯೂ ಹಗಲು ರಾತ್ರಿ ಕ್ಷೇತ್ರದ ಜನತೆಯ ಜೀತದಾಳಾಗಿ ದುಡಿಯುತ್ತೇನೆ. ಆಶೀರ್ವಾದ ಮಾಡಿ ಎಂದರು.

ಸಭೆಯಲ್ಲಿ ಪಕ್ಷದ ಮುಖಂಡರಾದ ಬಿ.ಸಿ. ಗೀತಾ, ಸಚಿನ್ ಮೀಗ, ಡಾ.ಅಂಶುಮಂತ್, ಕಡ್ತೂರು ದಿನೇಶ್, ಎಚ್.ಎಂ. ನಟರಾಜ್, ಎ.ಎಸ್. ನಾಗೇಶ್, ನವೀನ್ ಮಾವಿನಕಟ್ಟೆ, ಮಾರನಕೊಡಿಗೆ ನಟರಾಜ್, ನೀಲೇಶ್, ಸುಧೀರ್ ಕುಮಾರ್, ಎಚ್.ಎಂ. ಸತೀಶ್, ಕೆ.ಜಿ. ಶೋಭಿಂತ್ ಇದ್ದರು. ಸಮಾವೇಶದಲ್ಲಿ ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಸೇರಿದ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಸಮಾವೇಶಕ್ಕೂ ಮುನ್ನ ಪಟ್ಟಣದ ಶ್ರೀವೀರಭದ್ರ ದೇವಸ್ಥಾನದಿಂದ ಲಾಲ್‍ಬಹದ್ದೂರ್ ಶಾಸ್ತ್ರೀ ಕ್ರೀಡಾಂಗಣದವರಗೆ ಸ್ವಾಭಿಮಾನಿ ಮೆರವಣಿಗೆ ಏರ್ಪಡಿಸಲಾಗಿತ್ತು. ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X