ಬಂಟ್ವಾಳ ವಿಧಾನ ಸಭಾ ಕ್ಷೇತ್ರ: ಎರಡು ನಾಮಪತ್ರಗಳು ತಿರಸ್ಕೃತ

ಬಂಟ್ವಾಳ, ಎ. 25: ರಾಜ್ಯ ವಿಧಾನಸಭಾ ಚುನಾವಣೆಯ ನಾಮಪತ್ರ ಪರಿಶೀಲನೆ ಬುಧವಾರ ನಡೆದಿದ್ದು, ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ 13 ನಾಮಪತ್ರಗಳ ಪೈಕಿ ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ.
ಜೆಡಿಎಸ್ ಅಭ್ಯರ್ಥಿಯಾಗಿದ್ದ ಇಬ್ರಾಹೀಂ ಕೈಲಾರ್ ಹಾಗೂ ಬಿಜೆಪಿಯ ಡಮ್ಮಿ ಅ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ತುಂಗಪ್ಪಬಂಗೇರ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಉಳಿದಂತೆ ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಬಂಟ್ವಾಳ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಶುಕ್ರವಾರ(ಎ.27) ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ.
ವೀಕ್ಷಕರ ನಿಯೋಜನೆ:
ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಪ್ರಕ್ರಿಯೆಯ ಮೇಲುಸ್ತುವಾರಿಯಾಗಿ ವಿಕಾಸ್ ಯಾದವ್ ಐಎಎಸ್-(ಮೊ.8277807205) ಹಾಗೂ ಸಮನ್ವಯ ಅಧಿಕಾರಿಯಾಗಿ ಜೋಯಿ ಪ್ರದೀಪ್ ಡಿಸೋಜ(9448206393) ಅವರನ್ನು ಕೇಂದ್ರ ಚುನಾವಣಾ ಆಯೋಗ ನಿಯೋಜಿಸಿದೆ.
ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ ಇವರನ್ನು ಸಂಪರ್ಕಿಸಬಹುದು ಎಂದು ಬಂಟ್ವಾಳ ಕ್ಷೇತ್ರ ಚುನಾವಣಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story







