ಉಡುಪಿ ನಗರಸಭೆ: ಎ.30ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಿಯಾಯಿತಿ
ಉಡುಪಿ, ಎ.25: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಟ್ಟಡಗಳ ಮತ್ತು ಕೃಷಿಯೇತರ ನಿವೇಶನಗಳ ಮಾಲಕರು/ಅನುಭೋಗದಾರರು 2018-19ನೇ ಸಾಲಿನ ಆಸ್ತಿ ತೆರಿಗೆಯನ್ನು ಎ.30ರೊಳಗೆ ಪಾವತಿಸಿದ್ದಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಂತೆ ಶೇ.5ರಷ್ಟು ರಿಯಾಯಿತಿ ಪಡೆಯಲಿದ್ದಾರೆ.
ಆದ್ದರಿಂದ ತೆರಿಗೆದಾರರು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಆಸ್ತಿ ತೆರಿಗೆ ಲೆಕ್ಕಾಚಾರದಂತೆ ಪಾವತಿಸಿ ರಿಯಾಯಿತಿಯನ್ನು ಪಡೆಯುವಂತೆ ತಿಳಿಸಲಾಗಿದೆ. 2017-18ನೇ ಸಾಲಿನವರೆಗಿನ ತೆರಿಗೆ ಪಾವತಿಸದೇ ಬಾಕಿ ಇರುವವರು ದಂಡನೆ ಸಮೇತ ಕೂಡಲೇ ಪಾವತಿಸಿ, ನಗರಸಭೆಯೊದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





