ಬಂದೂಕು ತೋರಿಸಿ ಬೆದರಿಸಿ 15 ವರ್ಷದ ಬಾಲಕಿಯ ಅತ್ಯಾಚಾರ
ಮುಝಫ್ಫರನಗರ್, ಎ. 26: ಹದಿನೈದು ವರ್ಷ ವಯಸ್ಸಿನ ಬಾಲಕಿಯನ್ನು ಯುವಕನೋರ್ವ ಬಂದೂಕು ತೋರಿಸಿ ಬೆದರಿಸಿ ಅತ್ಯಾಚಾರಗೈದ ಘಟನೆ ಜಿಲ್ಲೆಯ ರಾಹೆಖೇಡಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಗ್ರಾಮದ ಸಮೀಪದ ಕಾಡಿನಲ್ಲಿ ಬುಧವಾರ ನಡೆದಿದೆ. ಆರೋಪಿ ಕಲ್ಲುನನ್ನು ಬಂಧಿಸಲಾಗಿದೆ ಎಂದು ಭೋಪಾ ಪೊಲೀಸ್ ಠಾಣೆಯ ಅಧಿಕಾರಿ ಬಿ.ಪಿ. ಸಿಂಗ್ ಹೇಳಿದ್ದಾರೆ. ಸಂತ್ರಸ್ತ ಬಾಲಕಿ ಕಾಡಿನಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿರುವುದನ್ನು ಬಿದ್ದಿರುವುದನ್ನು ಕುಟುಂಬದವರು ಪತ್ತೆ ಹಚ್ಚಿದ್ದರು ಎಂದು ಅವರು ತಿಳಿಸಿದ್ದಾರೆ. ಬಾಲಕಿಯ ಮಾವ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ ಹಾಗೂ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story