ಗಿಳಿಯಾರು: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ; ಸವಾರ ಮೃತ್ಯು

ಕೋಟ, ಎ.27: ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗಿಳಿಯಾರು ಗ್ರಾಮ ಕವಿತಾ ಎಂಟರ್‌ಪ್ರೈಸಸ್ ಎದುರುಗಡೆ ಗುರುವಾರ ತಡರಾತ್ರಿ 11:45ರ ಸುಮಾರಿಗೆ ನಡೆದಿದೆ.
ಮೃತರನ್ನು ವಿನಯ ಭಂಡಾರಿ ಎಂದು ಗುರುತಿಸಲಾಗಿದೆ. ಕೋಟ ಪೇಟೆ ಕಡೆಯಿಂದ ಕೋಟತಟ್ಟು ಪಡುಕೆರೆ ಕಡೆಗೆ ಬೈಕಿನಲ್ಲಿ ಹೋಗುತ್ತಿದ್ದ ಬೈಕ್ ನಿಯಂತ್ರಣ ತಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ವಿನಯ ಭಂಡಾರಿ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





