Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯರಂತಹ ಜಾತಿ ಬೀಜ ಬಿತ್ತುವ...

ಸಿದ್ದರಾಮಯ್ಯರಂತಹ ಜಾತಿ ಬೀಜ ಬಿತ್ತುವ ಭ್ರಷ್ಟನನ್ನು ಕಂಡಿಲ್ಲ: ಬಿ.ಎಸ್ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ27 April 2018 10:35 PM IST
share
ಸಿದ್ದರಾಮಯ್ಯರಂತಹ ಜಾತಿ ಬೀಜ ಬಿತ್ತುವ ಭ್ರಷ್ಟನನ್ನು ಕಂಡಿಲ್ಲ: ಬಿ.ಎಸ್ ಯಡಿಯೂರಪ್ಪ

ಹಾಸನ,ಎ.27: ಮುಖ್ಯಮಂತ್ರಿ ಸಿದ್ದರಾಮಯ್ಯನಂತಹ ಜಾತಿ ಬೀಜ ಬಿತ್ತುವ ಭ್ರಷ್ಟನನ್ನು ನಾನು ಕಂಡಿಲ್ಲ. ರಾಜ್ಯದೆಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಮೂರರಿಂದ ನಾಲ್ಕು ಸೀಟು ಗೆಲ್ಲುವುದು ನಿಶ್ಚಿತ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಸಾಲಗಾಮೆಯಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿದ್ದ ಸಭೆಯನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾರ್ಥದಿಂದ ಹಗಲು ಲೂಟಿ ಮಾಡಿ ವೀರಶೈವ ಸಮಾಜಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ದೂರಿದರು. ಈ ರಾಜ್ಯದಲ್ಲಿ ಸಿದ್ದರಾಮಯ್ಯನಂತಹ ಜಾತಿ ಬೀಜ ಬಿತ್ತುವ ಭ್ರಷ್ಟನನ್ನು ನಾನು ಎಲ್ಲೂ ಕಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹಾಸನ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ನಾಗೇಗೌಡ ಅವರು 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆಂದು. ಪ್ರೀತಂ ನಾಮಪತ್ರ ಸಲ್ಲಿಸಲು ಸೇರಿದ್ದ ಬೃಹತ್ ಜನಸ್ತೋಮ ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಅವರು,  ಮೇ.18 ರಂದು ನಾನು ಈ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ. ಮತ್ತೆ ಇದೆ ಸ್ಥಳಕ್ಕೆ ಬಂದು ಆಗ 1 ಲಕ್ಷ ಜನ ಸೇರಿಸಿ ಈ ಭಾಗದಲ್ಲಿ ಸಂಭ್ರಮಾಚರಣೆ ಮಾಡೋಣವೆಂದು ಕಾರ್ಯಕರ್ತರನ್ನು ಹುರಿದುಂಬಿಸಿದರು. ತಾವು ಅಧಿಕಾರಕ್ಕೆ ಬಂದರೆ ಹಾಸನ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ವಿಶೇಷ ಯೋಜನೆ ಕೈಗೊಳ್ಳುವುದಾಗಿ ಹೇಳಿದ ಅವರು ಸಾಲಗಾಮೆ ಹೋಬಳಿಯನ್ನು ಮಾದರಿ ಹೋಬಳಿಯನ್ನಾಗಿ ಮಾಡುವ ಭರವಸೆ ನೀಡಿದರು. ಹಾಗೆಯೇ ಈ ಭಾಗದ ಸೀಗೆ ಗುಡ್ಡದ ಅಭಿವೃದ್ಧಿಗೆ ಒತ್ತು ನೀಡುವುದಾಗಿ ಅವರು ಆಶ್ವಾಸನೆ ನೀಡಿದರು.

ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರೀತಂ ಜೆ. ಗೌಡ ಮಾತನಾಡಿ, ರೈತರು ಸ್ವಾವಲಂಬಿಗಳು. ಜೀವನ ಮಾಡಲು ಭೂಮಿ ಬೇಕು. ಬೆಳೆ ಬೆಳೆಯಲು ನೀರು ಅವಶ್ಯಕವಾಗಿದೆ. ಸಾಲಗಾಮೆ ಹೋಬಳಿ ಸುತ್ತ ಒಟ್ಟು 46 ಕೆರೆಗಳಿದ್ದು, ಈ ಭಾಗದಲ್ಲಿ ನೀರು ತುಂಬಿಸಬೇಕೆಂಬುದು ದೊಡ್ಡ ನಾಯಕರಿಗೆ ಇದು ಕೇಳಿಸುತ್ತಿಲ್ಲ ಎಂದು ದೂರಿದರು. ಇನ್ನು 15 ದಿನಗಳಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿ ಮತ್ತೆ ಇದೆ ಜಾಗಕ್ಕೆ ಬಂದು ಎಲ್ಲಾ ಕೆರೆಗೆ ನೀರು ತುಂಬಿಸುವ ವಿಶೇಷ ಯೋಜನೆಯನು ಜಾರಿಗೆ ತರುವುದಾಗಿ ವಿಶ್ವಾಸವ್ಯಕ್ತಪಡಿಸಿದರು.

ಸಾಲಗಾಮೆಗೆ ಆಗಮಿಸುವ ಮೊದಲು ಬೂವನಹಳ್ಳಿ ಮತ್ತು ದಾಸರಕೊಪ್ಪಲು ಭಾಗದ ರಸ್ತೆಯಲ್ಲಿ ಕಾದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಜೈಕಾರ ಹಾಕಿದರು. ಇದೆ ವೇಳೆ ಶಾಲು ಹೊದಿಸಿ, ಹಾರ ಹಾಕಿ ಸ್ವಾಗತ ಕೋರಿದರು.

ಕಾರ್ಯಕ್ರಮದಲ್ಲಿ ಹಾಸನ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಅಗಿಲೆ ಯೋಗಿಶ್, ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರೀತಮ್ ಜೆ. ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಮಾಜಿ ಶಾಸಕ ಬಿ.ವಿ. ಕರೀಗೌಡ, ಹಿರಿಯ ಮುಖಂಡರು ಭುವನಾಕ್ಷ, ಲಲಾಟ್ ಮೂರ್ತಿ, ಹೆಚ್.ಎನ್. ನಾಗೇಶ್, ಪುಟ್ಟಸ್ವಾಮಿ, ಅಮಿತ್ ಶೆಟ್ಟಿ, ಸೋಮಸೇಖರ್, ಸಾದಿಕ್, ಲೋಹಿತ್ ಕುಂದೂರು, ಈಶ್ವರಪ್ಪ, ಪ್ರಸನ್ನಕುಮಾರ್ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X