ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಭೇಟಿ

ಮಂಗಳೂರು, ಎ. 29: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ರವಿವಾರ ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು.
ಅವರನ್ನು ದರ್ಗಾ ಸಮಿತಿಯ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭ ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಕಾರ್ಪೊರೇಟರ್ ಅಬ್ದುರ್ರವೂಫ್, ಯು.ಬಿ.ಸಲೀಂ, ಕೆಪಿಸಿಸಿ ಕಾರ್ಯದರ್ಶಿ ಪುರುಷೋತ್ತಮ ಚಿತ್ರಾಪುರ, ಲುಕ್ಮಾನ್ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.
Next Story





