ಜನಾರ್ದನ ರೆಡ್ಡಿ ಅಧಿಕೃತ ಪ್ರಚಾರ ಮಾಡುವುದಿಲ್ಲ: ಶ್ರೀರಾಮುಲು ಸ್ಪಷ್ಟನೆ

ಬೆಂಗಳೂರು, ಎ. 29: ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷದ ಪರವಾಗಿ ಅಧಿಕೃತ ಪ್ರಚಾರ ಮಾಡುತ್ತಿಲ್ಲ. ಆದರೆ, ನನ್ನ ಆಪ್ತಮಿತ್ರನಾಗಿ ಈ ವಿಧಾನಸಭೆ ಚುನಾವಣೆಯಲ್ಲಿ ನನ್ನ ಪರ ಪ್ರಚಾರ ನಡೆಸುತ್ತಿದ್ದಾರೆಂದು ಮೊಳಕಾಲ್ಮೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಸ್ಪಷ್ಟಣೆ ನೀಡಿದ್ದಾರೆ.
ರವಿವಾರ ಬಳ್ಳಾರಿಯಲ್ಲಿ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಆರೋಪ ಮೇಲೆ ಕಾರಾಗೃಹ ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಹೊರಬಂದಿದ್ದು, ಪಕ್ಷದ ಮುಖಂಡರ ಸೂಚನೆಯನ್ನು ಅನುಸರಿಸುತ್ತೇವೆ ಎಂದರು.
ಜನಾರ್ದನ ರೆಡ್ಡಿ ನನ್ನ ಬಹುಕಾಲದ ಸ್ನೇಹಿತನಾಗಿರುವ ಕಾರಣ ನನ್ನ ಪರ ಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಮೊಳಕಾಲ್ಮೂರು ಕ್ಷೇತ್ರ ಹಾಗೂ ಬಾದಾಮಿ ಕ್ಷೇತ್ರದ ಜನತೆ ನನ್ನ ಕೈ ಹಿಡಿಯಲಿದ್ದಾರೆಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Next Story





