ಮೋದಿ ಕಾರ್ಯಕ್ರಮ ರದ್ದುಗೊಳಿಸಿ: ಕಾಂಗ್ರೆಸ್ ಆಗ್ರಹ
ಉಡುಪಿ, ಎ.29: ಪೆರ್ಡೂರು ಅಪಘಾತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವುದನ್ನು ಪರಿಗಣಿಸಿ ಬಿಜೆಪಿ ಸಮಾವೇಶವನ್ನು ರದುಡಿಸುವುದೇ ಪರಿಹಾರ ವೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.
ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಇಂಗು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ ಅಧ್ಯಕ್ಷತೆಯಲ್ಲಿ ಕರೆದ ತುರ್ತು ಸಭೆಯಲ್ಲಿ ಮೃತ ಕಾರ್ಮಿಕ ರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೃತ ಬಡ ಕಾರ್ಮಿಕರ ಕುಟುಂಬಕ್ಕೆ ಬಿಜೆಪಿ ಭದ್ರತೆ ಒದಗಿಸ ಬೇಕಾಗಿದೆ. ಪ್ರಧಾನಿ ಮೋದಿಯವರ ಸಮಾವೇಶ ಪ್ರಯುಕ್ತ ಪೂರ್ವಭಾವಿ ತಯಾರಿ ನಡೆಸುತ್ತಿರುವಾಗಲೇ ಅವಘಡ ನಡೆದಿರು ವುದು ದುರಂತವೆನ್ನಬೇಕು. ಸಮಾವೇಶವನ್ನು ರದ್ದು ಪಡಿಸುವುದೇ ಇದಕ್ಕೆ ಸೂಕ್ತ ಪರಿಹಾರ ಎಂದು ಕಾಂಗ್ರೆಸ್ ತಿಳಿಸಿದೆ.
ಸಭೆಯಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಬಿ.ನರಸಿಂಹ ಮೂರ್ತಿ, ಹರೀಶ್ ಕಿಣಿ, ದಿವಾಕರ ಕುಂದರ್, ಜನಾರ್ದನ ಭಂಡಾರ್ಕಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಮೇಶ್ ಕಾಂಚನ್, ನಿತ್ಯಾನಂದ ಶೆಟ್ಟಿ, ಸತೀಶ್ ಅಮೀನ್ ಪಡುಕರೆ, ಭಾಸ್ಕರ್ ರಾವ್ ಕಿದಿಯೂರು ಉಪಸ್ಥಿತರಿದ್ದರು.





