Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‍ನ ಇತಿಹಾಸವೇ ದೇಶದ ಇತಿಹಾಸ:...

ಕಾಂಗ್ರೆಸ್‍ನ ಇತಿಹಾಸವೇ ದೇಶದ ಇತಿಹಾಸ: ಡಿ.ಕೆ.ಶಿವಕುಮಾರ್

ಮೋಟಮ್ಮ ಪರ ಕಾಂಗ್ರೆಸ್ ಚುನಾವಣಾ ಪ್ರಚಾರಸಭೆ

ವಾರ್ತಾಭಾರತಿವಾರ್ತಾಭಾರತಿ29 April 2018 10:57 PM IST
share
ಕಾಂಗ್ರೆಸ್‍ನ ಇತಿಹಾಸವೇ ದೇಶದ ಇತಿಹಾಸ: ಡಿ.ಕೆ.ಶಿವಕುಮಾರ್

ಮೂಡಿಗೆರೆ, ಎ.29: ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪ. ಕಾಂಗ್ರೆಸ್‍ 60 ವರ್ಷಗಳ ಸುಧೀರ್ಘ ಆಡಳಿತದಿಂದಾಗಿ ಭಾರತ ದೇಶ ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ. ಶೋಷಿತರು, ಅಲ್ಪಸಂಖ್ಯಾತರಿಗೆ, ಹಿಂದುಳಿದ ವರ್ಗಗಳ ಏಳಿಗೆಗೆ ಕಲ್ಯಾಣ ಯೋಜನೆಗಳು, ಕಾನೂನುಗಳ ಮೂಲಕ ಮುಖ್ಯವಾಹಿನಿಗೆ ಬರುವಂತೆ ಮಾಡುವಲ್ಲಿ ಪಕ್ಷದ ಕೊಡುಗೆ ಅಪಾರವಾಗಿದೆ. ಆದರೆ ಕಾಂಗ್ರೆಸ್ ದೇಶಕ್ಕೇನು ಮಾಡಿದೆ ಎಂದು ಕೇಳವವರಿಂದಾಗಿಯೇ ಪ್ರಸಕ್ತ ದೇಶದ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗುತ್ತಿದ್ದು, ರಾಷ್ಟ್ರಕ್ಕೆ ಕಾಂಗ್ರೆಸ್ ಅನಿವಾರ್ಯ. ಕಾಂಗ್ರೆಸ್‍ನ ಇತಿಹಾಸವೇ ದೇಶದ ಇತಿಹಾಸ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ರವಿವಾರ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಕಾಂಗ್ರೆಸ್‍ನ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಗೆ ಭವಿಷ್ಯವಿಲ್ಲ. ಆ ಪಕ್ಷಕ್ಕೆ ಮತ ನೀಡಿ ಮತವನ್ನು ಹಾಳು ಮಾಡಿಕೊಳ್ಳಬೇಡಿ. ಕಾಂಗ್ರೆಸ್‍ನ ಭೂಮಿ ಫಲವತ್ತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‍ನ್ನು ಚುನಾಯಿಸಿದರೆ ಇಡೀ ದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು. 

ಬಿಜೆಪಿ ಭ್ರಷ್ಟ ಸರಕಾರ ಎಂದು ಅಮಿತ್ ಶಾ ಅವರೇ ಹೇಳಿಲ್ಲವೇ? ನಾವೇನಾದರೂ ಬ್ಲೂ ಫಿಲಂ ನೋಡಿ, ಜೈಲಿಗೆ ಹೋಗಿ ಎಂದು ಹೇಳಿದೇವಾ? ಇದೆಲ್ಲಾ ಬಿಜೆಪಿಯ ಅನಾಹುತ. ಬಿಜೆಪಿಯಿಂದ ಕೆಜಿಪಿಗೆ ಹೋದ ಮೇಲೆ ಅವರ ನುಡಿಮುತ್ತು ನೆನೆಸಿಕೊಂಡರೆ ಅಸಹ್ಯವಾಗುತ್ತದೆ. ರಾಜ್ಯದ 28 ಮಂದಿ ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದರು. ನಾವೇ ಬೇಡವೆಂದು ತಡೆದಿದ್ದೇವೆ. ಅವರ ಪೈಕಿ 7 ಮಂದಿ ಸೇರ್ಪಡೆಗೊಂಡಿದ್ದಾರೆ. ಇಂದು ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಮೆಚ್ಚಿ ಇತರೇ ಪಕ್ಷದಿಂದ ಕಾಂಗ್ರೆಸ್‍ಗೆ ಸೇರ್ಪಡೆಯಾಗುವ ಸಂಖ್ಯೆ ಹೆಚ್ಚಾಗಿದೆ. ಜೆಡೆಎಸ್‍ನಲ್ಲಿ ಪ್ರಧಾನಿ ಮುಖ್ಯಮಂತ್ರಿಯಾಗಿದ್ದರು. ಈಗ ಬಿ.ಬಿ.ನಿಂಗಯ್ಯ ಶಾಸಕರಾಗಿದ್ದಾರೆ. ಈ ಕ್ಷೇತ್ರಕ್ಕೆ ಆ ಪಕ್ಷದ ಕೊಡುಗೆ ಏನು? ಎಂದು ಪ್ರಶ್ನಿಸಿದರು.  

ರಾಜ್ಯದಲ್ಲಿ ಪ್ರತೀ ವರ್ಷಕ್ಕೆ 28 ಸಾವಿರ ಕೋಟಿ ರೂ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಅನ್ನಭಾಗ್ಯ ಯೋಜನೆಯನ್ನು ಸಂವಿಧಾನ ತಿದ್ದುಪಡಿ ಮಾಡಿ ಜಾರಿಗೆ ತರಲಾಗಿದೆ. ಬಡವರಿಗೆ ನಿವೇಶನಕ್ಕಾಗಿ ಜಮೀನು ಮಂಜೂರಾತಿ ಕಾನೂನು ಬದ್ಧವಾಗಿ ಮಾಡಿದ್ದೇವೆ ಎಂದರು. ಶೇ.30ರಷ್ಟು ತೆರಿಗೆ ಹಣ ಕರ್ನಾಟಕದಿಂದ ಕೇಂದ್ರ ಸರ್ಕಾರಕ್ಕೆ ನೀಡುತ್ತಿದ್ದರೂ ಜನರ ಹಿತಾಸಕ್ತಿಯಂತೆ ಆಡಳಿತ ನಡೆಸಲಿಲ್ಲ. ಬದಲಾಗಿ ಇತಿಹಾಸ ಪ್ರಸಿದ್ಧ ಕೆಂಪುಕೋಟೆಯನ್ನೇ ಅಡಮಾನ ಮಾಡಲು ಹೊರಟಿದ್ದಾರೆ. ಸಂವಿಧಾನವನ್ನೇ ಅಡವಿಟ್ಟು ಆಡಳಿತ ನಡೆಸುವ ಚಿಂತನೆಯ ಬಿಜೆಪಿಯನ್ನು ಜನತೆ ತಿರಸ್ಕರಿಸಲಿದ್ದಾರೆ ಎಂದರು. 

ಮುಖ್ಯಮಂತ್ರಿ ಚಂದ್ರು ಮಾತನಾಡಿ, 30 ಕಾಂಗ್ರೆಸನ್ನು ಸೋಲಿಸಲು ಪ್ರಧಾನಿ ನರೇಂದ್ರರ ಮೋದಿ ಯಾದಿಯಾಗಿ 30 ಮಂದಿ ಕೇಂದ್ರ ಸಚಿವರು ರಾಜ್ಯಕ್ಕೆ ಪ್ರಚಾರಕ್ಕೆ ಬಂದಿದ್ದಾರೆ. ಅವರ ತಂತ್ರ ಫಲಿಸದು. ಕಾಂಗ್ರೆಸ್ ಗೆಲುವು ನಿಶ್ಚಿತ. ಕಳೆದ 5 ವರ್ಷದಲ್ಲಿ ಸಿದ್ದರಾಮಯ್ಯದ ನೇತೃತ್ವದ ಸರಕಾರ ಜನರಿಗೆ ಕೊಟ್ಟ ಭರವಸೆ ಈಡೇರಿಸಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮನೆ ಬಾಗಿಲಿಗೆ ಪ್ರಧಾನ ಮಂತ್ರಿ ಸ್ಥಾನ ಹುಡುಕಿಕೊಂಡು ಬಂದಿದ್ದರೂ ಅದನ್ನು ತಿರಸ್ಕರಿಸಿ ಪಕ್ಷವನ್ನು ಮುನ್ನಡೆಸಲು ಮುಂದಾದರು. ಕಾಂಗ್ರೆಸ್ ಮುಕ್ತ ಭಾರತ ಮಾಡುವ ಕನಸನ್ನು ಬಿಜೆಪಿ ಹೊಂದಿದೆ. ಬಿಜೆಪಿ ಬದುಕಿರುವುದೇ ಹೆಚ್ಚು. ಈ ಚುನಾವಣೆಯಲ್ಲಿ ಬಿಜೆಪಿಯ ಪತನ ಕರ್ನಾಟಕದಿಂದ ಪ್ರಾರಂಭವಾಗಲಿದೆ. ಪಾವಡದಲ್ಲಿ ವಿದ್ಯುತ್ ಸ್ಥಾವರ ಪ್ರಾರಂಭಿಸಿ, ವಿಶ್ವದಲ್ಲೇ ನಂ ಒನ್ ಸ್ಥಾನದಲ್ಲಿ ವಿದ್ಯುತ್ ನೀಡಿದ ಏಕೈಕ ಸರಕಾರವಾಗಿದೆ. ಹಿಂದೆ ಬ್ರಿಟೀಷರೇ ದೇಶ ಬಿಟ್ಟು ತೊಲಗಿ ಎಂಬ ಆಂದೋಲನ ಇತ್ತು. ಈಗ ಬಿಜೆಪಿಯವರೇ ಅಧಿಕಾರ ಬಿಟ್ಟು ತೊಲಗಿ ಎಂಬ ಆಂದೋಲನ ಈ ಚುನಾವಣೆಯಲ್ಲಿ ರಾಜ್ಯದಿಂದ ಪ್ರಾರಂಭವಾಗಲಿದೆ. ರಾಜ್ಯ ಸರಕಾರದ ಸಾಧನೆ ಕಣ್ಮುಂದೆ ಇದೆ. ಹಿಂದೆ ಆಡಳಿತ ನಡೆಸಿದ ಬಿಜೆಪಿ ಭ್ರಷ್ಟಚಾರ, ದರೋಡೆಯನ್ನು ಮತ್ತೆ ಮಾಡುತ್ತೇವೆ. ಅಧಿಕಾರ ಕೊಡಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಅವರಿಂದ ದೇಶವನ್ನು ಉಳಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ, ಮತ್ತು ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಸಚಿವ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು.

ಪ್ರಾರಂಭದಲ್ಲಿ ಹೊಯ್ಸಳ ಕ್ರೀಡಾಂಗಣದಿಂದ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾವಿರಾರು ಬೈಕ್‍ಗಳು ರ್ಯಾಲಿ ಮೂಲಕ ಮೆರವಣಿಗೆ ನಡೆಸಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ವೇದಿಕೆಗೆ ಕರೆ ತರಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಮೋಟಮ್ಮ, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಜಿ.ಪಂ. ಸದಸ್ಯ ಪ್ರಭಾಕರ್, ಪ.ಪಂ.ಅಧ್ಯಕ್ಷೆ ರಮೀಬಾಭಿ, ಮಾಜಿ ಡಿಸಿಸಿ ಅಧ್ಯಕ್ಷ ಎಂ.ಎಲ್.ಮೂರ್ತಿ, ಸಿಪಿಐ ಮುಖಂಡರಾದ ರವಿಕುಮಾರ್, ಎಂ.ಎಸ್.ಹರೀಶ್, ಕೆಪಿಸಿಸಿ ವೀಕ್ಷಕ ಪಟೇಲ್ ಶಿವಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಶೇಖರ್, ಮುಖಂಡರಾದ ಸವಿತಾ ರಮೇಶ್, ಬಿ.ಎಸ್.ಜಯರಾಂ, ವಿನಯ್ ಕುಮಾರ್, ಎನ್.ಆರ್.ನಾಗರತ್ನ, ನಯನ ಮೋಟಮ್ಮ, ಸಿ.ಕೆ.ಇಬ್ರಾಹಿಂ, ಎಂ.ಸಿ.ಹೂವಪ್ಪ, ಕಮಲಾಕ್ಷಿ, ಟಿ.ಎ.ಮದೀಶ್, ಡಿ.ಎಸ್.ರಘು, ಶ್ರೀನಿವಾಸ್ ಹೆಬ್ಬಾರ್, ಕೃಷ್ಣೇಗೌಡ, ಎಂ.ಎಸ್.ಅನಂತ್ ಮತ್ತಿತರರಿದ್ದರು. 

ಮೋದಿ ಅಧಿಕಾರಕ್ಕೆ ಅಂತ್ಯ ಹಾಡಲು ಈ ಚುನಾವಣೆಯೇ ಸೆಮಿಫೈನಲ್:
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಚುನಾವಣೆಯೇ ನಡೆದಿಲ್ಲ ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಹಿಂದೊಮ್ಮೆ ನಿಮ್ಮನ್ನು ಬಿಜೆಪಿಯಿಂದ ಹೊರಗೆ ಹಾಕಿದ್ದು ಯಾಕೆ?, ನಿಮ್ಮ ಭ್ರಷ್ಟಾಚಾರ ಮಿತಿ ಮೀರಿದೆ. ಅದನ್ನು ನಿಮ್ಮ ಪಕ್ಷದ ನಾಯಕರೆ ಹೇಳಿಕೊಂಡಿದ್ದಾರೆ. ಕೆಜೆಪಿ ಕಟ್ಟಿದಾಗ ಶೋಭಾ ಕರಂದ್ಲಾಜೆ ಅವರು ಬಿಜೆಪಿಯನ್ನೇ ಮುಗಿಸುವುದೇ ನಮ್ಮ ಕೆಲಸ ಎಂದಿದ್ದರು. ನಿಮ್ಮ ಮಾತಿನ ಮೇಲೆ ನಿಮಗೆ ಬದ್ಧತೆಯಿದೆಯೇ ಎಂದು ಯಡಿಯೂರಪ್ಪ ಅವರಿಗೆ ಪ್ರಶ್ನೆ ಹಾಕಿದ ಡಿಕೆ ಶಿವಕುಮಾರ್ ಕೇಂದ್ರದ ಬಿಜೆಪಿ ಸರಕಾರವನ್ನು ಕಿತ್ತೊಗೆಯಲು ಈ ಚುನಾವಣೆ ಸಮಿಪೈನಲ್ ಎಂದು ಹೇಳಿದರು. 

ಮೋದಿ, ಅಮಿತ್ ಶಾ ಆಧುನಿಕ ಹಿಟ್ಲರ್ ಗಳು: 
ಸಾವಿರ ಮೋದಿ ಮತ್ತು ಅಮಿತ್‍ಶಾಗಳು ಬಂದರೂ ಕಾಂಗ್ರೆಸ್ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಮತ್ತು ಜ್ಯಾತ್ಯಾತೀತ , ಸಮಾಜಿಕ ನ್ಯಾಯ, ಅಂಬೇಡ್ಕರ್ ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಬೆಂಬಲಿಸಲು ನಾವು ತೀರ್ಮಾನ ಮಾಡಬೇಕು, ಮೋದಿ, ಅಮಿತ್‍ಶಾ ಮುಕ್ತ ಮಾಡಬೇಕು. ಮೋದಿ ಮತ್ತು ಅಮಿತ್‍ಶಾ ಆಧುನಿಕ ಹಿಟ್ಲರ್ ಗಳು ಎಂದು ಜನರು ಅರ್ಥಮಾಡಿಕೊಳ್ಳಬೇಕು. ವಿದೇಶದಲ್ಲಿರುವ ಕಪ್ಪುಹಣವನ್ನು ತಂದು ಭಾರತೀಯರ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ ಹಾಕುತ್ತೇವೆ ಎಂದು ಮೋದಿ ಅಮಿತ್ ಶಾ ಹೇಳಿದ್ದರು. ಆದರೆ 15 ಪೈಸೆ ಕೂಡ ಹಾಕಿಲ್ಲ. ಸುಳ್ಳು ಹೇಳುವುದಕ್ಕೆ ಗ್ಲೋಬಲ್ ಪ್ರಶಸ್ತಿ ಕೊಡಬೇಕೆಂದಾದರೆ ಅದು ಮೋದಿ ಮತ್ತು ಅಮಿತ್‍ಶಾ ಅವರಿಗೆ ಕೊಡಬೇಕು.

-ವಿ.ಎಸ್.ಉಗ್ರಪ್ಪ, ವಿಧಾನಪರಿಷತ್ ಸದಸ್ಯ

ಮತ್ತೊಂದು ಮೋಟಮ್ಮರನ್ನು ತಯಾರು ಮಾಡಲು ಸಾಧ್ಯವಿಲ್ಲ: 

ನೂರಾರು ಶಾಸಕರನ್ನು ತಯಾರು ಮಾಡಬಹುದು. ಆದರೆ ಮತ್ತೊಬ್ಬ ಮೋಟಮ್ಮ ಅವರನ್ನು ತಯಾರು ಮಾಡಲು ಸಾಧ್ಯವಿಲ್ಲ. ಸ್ತ್ರೀಶಕ್ತಿ ಮೂಲಕ ಹೆಣ್ಣು ಕುಟುಂಬದ ಕಣ್ಣು, ಸಮಾಜದ ಶಕ್ತಿ ಎಂದು ತೋರಿಸಿಕೊಟ್ಟವರು ಮೋಟಮ್ಮ. ಜೆಡಿಎಸ್‍ನ ನಿಂಗಯ್ಯ ಅವರು ಅಸೆಂಬ್ಲಿಯಲ್ಲಿ ಬಾಯಿ ತೆರೆದಿದ್ದೇ ನೋಡಿಲ್ಲ. ಅವರ ಬಾಯಿ ಸ್ವಿಚ್ ಆಫ್ ಆಗಿದೆ. ಚುನಾವಣೆಯಲ್ಲಿ ಮೋಟಮ್ಮ ಗೆದ್ದರೆ ವಿಧಾನಸಭೆಯ ಮೂರನೇ ಮಹಡಿಗೆ ಪ್ರವೇಶಿಸಲಿದ್ದಾರೆ.

-ಡಿ.ಕೆ.ಶಿವಕುಮಾರ್, ಸಚಿವ
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X