Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಪ್ರತಿ ಗ್ರಾಮಕ್ಕೆ ವಿದ್ಯುತ್...

ದೇಶದ ಪ್ರತಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದ ಪ್ರಧಾನಿ ಮೋದಿ: ಆದರೆ ವಾಸ್ತವವೇನು ?

ವಾರ್ತಾಭಾರತಿವಾರ್ತಾಭಾರತಿ30 April 2018 4:06 PM IST
share
ದೇಶದ ಪ್ರತಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿದೆ ಎಂದ ಪ್ರಧಾನಿ ಮೋದಿ: ಆದರೆ ವಾಸ್ತವವೇನು ?

ಹೊಸದಿಲ್ಲಿ, ಎ.30: ಪ್ರತಿಯೊಂದು ಮನೆಗೂ ವಿದ್ಯುಚ್ಛಕ್ತಿ ಸೌಲಭ್ಯ ನೀಡಿ ಭಾರತೀಯರ ಜೀವನವನ್ನು ಸುಧಾರಿಸಲಾಗುವುದು ಎಂಬ ಭರವಸೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಬಂದಿದ್ದರು. ಈ ತಿಂಗಳೊಳಗಾಗಿ 18,000ಕ್ಕೂ ಅಧಿಕ ಗ್ರಾಮಗಳಿಗೆವಿದ್ಯುಚ್ಛಕ್ತಿ ಒದಗಿಸುವ ಗುರಿ ಸರಕಾರಕ್ಕಿದೆ ಹಾಗೂ ಅದು ಈ ಗುರಿಯನ್ನು  ಇನ್ನೇನು ಮುಟ್ಟಲಿದೆ ಎಂದೇ ಹೇಳಲಾಗುತ್ತಿದೆ.

ಆದರೂ ದೇಶದ 3.2 ಕೋಟಿ ಮನೆಗಳು ಕತ್ತಲಲ್ಲಿರುತ್ತವೆ. ಗ್ರಾಮವೊಂದರ ಶೇ.10ರಷ್ಟು ಮನೆಗಳು, ಶಾಲೆಗಳು ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯುಚ್ಛಕ್ತಿ ಸಂಪರ್ಕವಿದ್ದರೆ ಆ ಗ್ರಾಮ ವಿದ್ಯುತ್ತೀಕರಣಗೊಂಡಿದೆ ಎಂಬುದು ಸರಕಾರದ ಲೆಕ್ಕಾಚಾರವಾಗಿದೆ.

ಆದರೆ  ಹೊಸದಾಗಿ ವಿದ್ಯುಚ್ಛಕ್ತಿ ಸಂಪರ್ಕ ಪಡೆದಿರುವ ಗ್ರಾಮಗಳಲ್ಲಿ ಶೇ.8ಕ್ಕಿಂತ ಕಡಿಮೆ ಮನೆಗಳಿಗೆ ವಿದ್ಯುತ್ ಸಂಪರ್ಕವೊದಗಿಸಲಾಗಿದೆ. ಸರಕಾರಿ ಅಂಕಿಅಂಶಗಳ ಪ್ರಕಾರ  ಕಳೆದ ಅಕ್ಟೋಬರ್ ತಿಂಗಳಲ್ಲಿ  ಗುರುತಿಸಲ್ಪಟ್ಟ 3.68 ಕೋಟಿ ಮನೆಗಳಲ್ಲಿ ಶೇ.13ರಷ್ಟು ಮನೆಗಳಿಗೆ  ವಿದ್ಯುತ್ ಸಂಪರ್ಕವೊದಗಿಸಲಾಗಿದೆ. ಸರಕಾರದ ಮುಂದಿನ ಗುರಿಯನ್ನು ತಲುಪಬೇಕಾದರೆ ಈಗ ಅದು ಪಡುತ್ತಿರುವ ಶ್ರಮದ ಮೂರು ಪಟ್ಟು ಅಧಿಕ ಶ್ರಮವಹಿಸಬೇಕಾಗುತ್ತದೆ ಎಂದು ವರದಿಯೊಂದು ತಿಳಿಸುತ್ತದೆ. ಆದರೂ 2019ರೊಳಗಾಗಿ ಎಲ್ಲಾ ಮನೆಗಳಿಗೂ ವಿದ್ಯುತ್ ಸಂಪರ್ಕ ಒದಗಿಸಲು ಸರಕಾರ ಸಫಲವಾಗಬಹುದೆಂದು ಅನಿಸುತ್ತಿಲ್ಲ. ಅದಕ್ಕೆ ಇನ್ನೂ ಹಲವು ವರ್ಷಗಳೇ ಬೇಕಾಗಬಹುದು ಎಮದು ತಜ್ಞರೊಬ್ಬರು ವಿವರಿಸುತ್ತಾರೆ.

2000ರಿಂದೀಚೆಗೆ ದೇಶ ವಿದ್ಯುತ್ತೀಕರಣದಲ್ಲಿ ಸಾಕಷ್ಟು ಪ್ರಗತಿ ಕಂಡಿದೆ. 2016ರಲ್ಲಿ ದೇಶದ ಶೇ.82ರಷ್ಟು ಜನಸಂಖ್ಯೆಗೆ ವಿದ್ಯುತ್ ತಲುಪಿತ್ತು.  ಈ ಶತಮಾನದ ಆಗಮನಕ್ಕಿಂತ ಮುಂಚೆ ಅದರ ಕೇವಲ ಶೇ.43ರಷ್ಟು ಜನಸಂಖ್ಯೆಗೆ ವಿದ್ಯುತ್ ತಲುಪಿತ್ತು. ಆದರೂ 2016ರಲ್ಲಿ ವಿಶ್ವದ ಕಾಲುಭಾಗದಷ್ಟು ಜನಸಂಖ್ಯೆಯ ಬಳಿ ವಿದ್ಯುತ್ ಸಂಪರ್ಕವಿಲ್ಲದೇ ಇದ್ದರೆ ಅದರಲ್ಲಿ ಭಾರತೀಯರ ಸಂಖ್ಯೆ 2.39 ಕೋಟಿಯಷ್ಟಾಗಿತ್ತು.

ವಿದ್ಯುತ್ ಸಚಿವಾಲಯದ ಅಂದಾಜಿನ ಪ್ರಕಾರ ಭಾರತದಲ್ಲಿ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕವೊದಗಿಸಲು ವಿದ್ಯುತ್ ಉತ್ಪಾದನಾ ಸಾಮರ್ಥ್ಯ 28 ಗಿಗಾವಾಟ್ ಆಗಬೇಕಿದೆ. ಸದ್ಯ ವಿದ್ಯುಚ್ಛಕ್ತಿ ಸಂಪರ್ಕ ಹೊಂದದ ಮನೆಗಳು ದೇಶದ 24 ರಾಜ್ಯಗಳಲ್ಲಿ ಹರಡಿಕೊಂಡಿವೆ. ದೇಶದಲ್ಲಿಯೇ ಅತ್ಯಧಿಕ ಸಂಖ್ಯೆಯ ಸಂಸದರನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಶೇ 42ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲವಾಗಿದೆ ಎಂದು ಸರಕಾರಿ ಅಂಕಿಅಂಶಗಳೇ ಹೇಳುತ್ತವೆ. ಪ್ರಧಾನಿ ನರೇಂದ್ರ ಮೋದಿಯ ವಾರಣಾಸಿ ಕ್ಷೇತ್ರವಿರುವ  ರಾಜ್ಯವಾದ ಉತ್ತರ ಪ್ರದೇಶವು  2014ರ ಬಿಜೆಪಿ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿತ್ತು ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು.

ವಿದ್ಯುತ್ ವಿತರಣಾ ವ್ಯವಸ್ಥೆ ರಾಜ್ಯ ಸರಕಾರಗಳ ಅಧೀನದಲ್ಲಿ ಬರುತ್ತಿದ್ದು, ಅವುಗಳು ತಮ್ಮ ವಿದ್ಯುತ್ ವಿತರಣಾ ಕಂಪೆನಿಗಳ ಮೂಲಕ ಸರಕಾರಕ್ಕೆ ಆರ್ಥಿಕ ನಷ್ಟದ ಹೊರತಾಗಿಯೂ  ಗ್ರಾಮೀಣ ಮನೆಗಳು ಹಾಗೂ ರೈತರಿಗೆ ರಿಯಾಯಿತಿದರದಲ್ಲಿ ವಿದ್ಯುತ್ ಒದಗಿಸಿ ಅದನ್ನು ರಾಜಕೀಯ ಅಸ್ತ್ರವನ್ನಾಗಿಸಿದೆಯೆಂಬುದು ಸುಳ್ಳಲ್ಲ. ಮಾರ್ಚ್ 2015ರಲ್ಲಿ ವಿವಿಧ ರಾಜ್ಯಗಳ ವಿದ್ಯುತ್ ವಿತರಣಾ ಕಂಪೆನಿಗಳು ಸುಮಾರು  6.17 ಬಿಲಿಯನ್ ಡಾಲರ್ ನಷ್ಟ ಅನುಭವಿಸಿವೆ ಎಂದು ವಿದ್ಯುತ್ ಇಲಾಖೆಯ ಇತ್ತೀಚಿಗಿನ ವರದಿ ತಿಳಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X