Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಬಿಜೆಪಿ ಸೋಲಿಸಿ, ಮೋದಿಗೆ ಪಾಠ ಕಲಿಸಿ’:...

‘ಬಿಜೆಪಿ ಸೋಲಿಸಿ, ಮೋದಿಗೆ ಪಾಠ ಕಲಿಸಿ’: ತೆಲುಗು ಭಾಷಿಕರಿಗೆ ಆಂಧ್ರ ಕಾಂಗ್ರೆಸ್ ಸಮಿತಿ ಕರೆ

ವಾರ್ತಾಭಾರತಿವಾರ್ತಾಭಾರತಿ30 April 2018 9:13 PM IST
share
‘ಬಿಜೆಪಿ ಸೋಲಿಸಿ, ಮೋದಿಗೆ ಪಾಠ ಕಲಿಸಿ’: ತೆಲುಗು ಭಾಷಿಕರಿಗೆ ಆಂಧ್ರ ಕಾಂಗ್ರೆಸ್ ಸಮಿತಿ ಕರೆ

ಬೆಂಗಳೂರು, ಎ.30: ರಾಜ್ಯ ವಿಧಾನ ಸಭಾ ಚುನಾವಣೆ ಮಹತ್ವವಾಗಿದ್ದು, ಇದರ ಫಲಿತಾಂಶ ದೇಶದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ, ಕರ್ನಾಟಕ ರಾಜ್ಯದಲ್ಲಿರುವ ತೆಲುಗು ಭಾಷಿಕರು ಬಿಜೆಪಿಗೆ ಮತ ನೀಡಬಾರದು ಎಂದು ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಕರೆ ನೀಡಿದೆ.

ಸೋಮವಾರ ನಗರದ ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ, ಕರ್ನಾಟಕ ತೆಲುಗು ಸಂಘಗಳ ಸಂಯುಕ್ತ ಸಮಾವೇಶದಲ್ಲಿ ಆಂಧ್ರ ಪ್ರದೇಶ ಕಾಂಗ್ರೆಸ್ ಸಮಿತಿ ಮುಖಂಡರು, ಬಿಜೆಪಿಯನ್ನು ತೀರಸ್ಕರಿಸಬೇಕೆಂದು ತೀರ್ಮಾನ ಕೈಗೊಂಡರು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ರಘುವೀರ ರೆಡ್ಡಿ, ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಠೇವಣಿ ಸಿಗದಂತೆ ಮಾಡಬೇಕು. ಇದರಿಂದ ಆಂಧ್ರಕ್ಕೆ ಮೋಸ ಮಾಡಿರುವ ಪ್ರಧಾನಿ ನರೇಂದ್ರ ಮೋದಿಗೆ ಪಾಠ ಕಲಿಸಿದಂತೆ ಆಗಲಿದೆ, ಜೊತೆಗೆ ಆಂಧ್ರಪ್ರದೇಶಕ್ಕೆ ನ್ಯಾಯ ಸಿಗಲಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ನಿಜ ಹೇಳುವ ಅಭ್ಯಾಸವೇ ಇಲ್ಲ ಎಂದು ಟೀಕಿಸಿದ ಅವರು, ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ತೆಲುಗು ಭಾಷಿಕರು ಇದ್ದಾರೆ. ಬಿಜೆಪಿ ಸೋಲಿಸಿ, ಮೋದಿಗೆ ಪಾಠ ಕಲಿಸಿ ಎಂದು ನಾವು ಮೂಲೆ ಮೂಲೆಯಲ್ಲಿ ಪ್ರಚಾರ ಆರಂಭಿಸುವುದಾಗಿ ತಿಳಿಸಿದರು.

ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಮಾತನಾಡಿ, ಬೆಂಗಳೂರಿನಲ್ಲಿ ತೆಲುಗು ಭಾಷಿಕರು ಹೆಚ್ಚಿದ್ದಾರೆ. ಅಷ್ಟೇ ಅಲ್ಲದೆ, ಶೇಕಡ 45 ರಷ್ಟು ಜನ ತೆಲುಗು ಭಾಷಿಕ ಶಾಸಕರಿದ್ದಾರೆ. ಇಲ್ಲಿನ ಬೃಹತ್ ಕಟ್ಟಡಗಳು, ದೊಡ್ಡ ದೊಡ್ಡ ವಿದ್ಯಾಸಂಸ್ಥೆಗಳು, ಹೊಟೇಲ್ ಗಳೆಲ್ಲಾ ತೆಲುಗು ಭಾಷಿಕರ ಮಾಲಕತ್ವದಲ್ಲಿದೆ ಎಂದರು.

ಬೆಂಗಳೂರಿನಲ್ಲಿ ತೆಲುಗು ಭಾಷಿಕರು ಅಭಿವೃದ್ಧಿ ಹೊಂದಲು ಕಾಂಗ್ರೆಸ್ ಸರಕಾರವೇ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅನೇಕ ಕೊಡುಗೆ ನೀಡಿದ್ದು, ದೇಶಕ್ಕೆ ಈ ಸರಕಾರ ಮಾದರಿಯಾಗಿದೆ. ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲು ತೆಲುಗು ಭಾಷಿಕರ ಪಾತ್ರ ಬಹುದೊಡ್ಡದು ಎಂದು ನುಡಿದರು.

ಕೇಂದ್ರದ ಮಾಜಿ ಸಚಿವ ಎಂ.ಎಂ.ಪಲ್ಲಂ ರಾಜು ಮಾತನಾಡಿ, ಆಂಧ್ರಪ್ರದೇಶಕ್ಕೆ ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ ಸಂಪೂರ್ಣ ವಿಫಲವಾಗಿದೆ. ಇಂತಹ ಮಾತು ತಪ್ಪಿದ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.

ಸಮಾವೇಶದಲ್ಲಿ ಕೇಂದ್ರದ ಮಾಜಿ ಸಚಿವ ಜೈಪಾಲ್ ರೆಡ್ಡಿ, ಸಚಿವ ರೋಷನ್ ಬೇಗ್, ಆಂಧ್ರದ ಕಾಂಗ್ರೆಸ್ ಹಿರಿಯ ಮುಖಂಡರಾದ ಟಿ.ಸುಬ್ಬರಾಮಿ ರೆಡ್ಡಿ, ಶ್ರೀರಾಮ್ ರೆಡ್ಡಿ, ಸಂಪಂಗಿ, ಸೀತಾರಾಮನ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X