Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ಸಂಬಂಧವಿಲ್ಲದ ಮದುವೆಯನ್ನು...

ಲೈಂಗಿಕ ಸಂಬಂಧವಿಲ್ಲದ ಮದುವೆಯನ್ನು ರದ್ದುಗೊಳಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ30 April 2018 9:38 PM IST
share
ಲೈಂಗಿಕ ಸಂಬಂಧವಿಲ್ಲದ ಮದುವೆಯನ್ನು ರದ್ದುಗೊಳಿಸಿದ ಹೈಕೋರ್ಟ್

ಮುಂಬೈ,ಎ.30: ಪತಿ-ಪತ್ನಿಯ ನಡುವೆ ಯಾವುದೇ ಲೈಂಗಿಕ ಸಂಬಂಧವಿರದಿದ್ದರೆ ಅದು ಅವರ ಮದುವೆಯನ್ನು ರದ್ದುಗೊಳಿಸಲು ಕಾರಣವಾಗುತ್ತದೆ ಎಂದು ಬಾಂಬೆ ಉಚ್ಚ ನ್ಯಾಯಾಲಯವು ತೀರ್ಪು ನೀಡಿದೆ.

ಕೊಲ್ಲಾಪುರದ ದಂಪತಿ ಒಂಭತ್ತು ವರ್ಷಗಳ ಹಿಂದೆ ತಾವು ಮದುವೆ ಯಾದಾಗಿನಿಂದಲೂ ಕಾನೂನು ಸಮರದಲ್ಲಿ ತೊಡಗಿಕೊಂಡಿದ್ದರು. ಪತಿ ಖಾಲಿಹಾಳೆಗಳ ಮೇಲೆ ತನ್ನ ಸಹಿ ಪಡೆದುಕೊಂಡು ಮೋಸದಿಂದ ತನ್ನನ್ನು ಮದುವೆಯಾಗಿದ್ದ ಎಂದು ಮಹಿಳೆ ಆರೋಪಿಸಿದ್ದಳು. ಮದುವೆಯನ್ನು ರದ್ದುಗೊಳಿಸುವಂತೆ ಆಕೆ ಕೋರಿಕೊಂಡಿದ್ದರೆ ಪತಿ ಅದನ್ನು ವಿರೋಧಿಸಿದ್ದ.

ಮೋಸ ನಡೆದಿತ್ತು ಎನ್ನುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾ.ಮೃದುಲಾ ಭಾಟ್ಕರ್ ಹೇಳಿದರಾದರೂ,ದಂಪತಿಯ ನಡುವೆ ಲೈಂಗಿಕ ಸಂಬಂಧವಿತ್ತೆನ್ನಲು ಯಾವುದೇ ಸಾಕ್ಷ್ಯಾಧಾರವಿಲ್ಲದ್ದರಿಂದ ಮದುವೆಯನ್ನು ರದ್ದುಗೊಳಿಸಿ ಆದೇಶಿಸಿದರು.

ಗಂಡು-ಹೆಣ್ಣಿನ ನಡುವಿನ ಲೈಂಗಿಕ ಸಂಬಂಧವನ್ನು ಕ್ರಮಬದ್ಧ ಗೊಳಿಸುವುದು ಮದುವೆಯ ಮುಖ್ಯ ಉದ್ದೇಶಗಳಲ್ಲೊಂದಾಗಿದೆ. ಆದರೆ ಇಂತಹ ಸಂಬಂಧವಿಲ್ಲದಿದ್ದಾಗ ಮದುವೆಯ ಉದ್ದೇಶವೇ ವಿಫಲಗೊಳ್ಳುತ್ತದೆ. ಒಂದೇ ಒಂದು ಬಾರಿ ದೈಹಿಕ ಸಂಪರ್ಕವೇ ರ್ಪಟ್ಟಿದ್ದರೂ ಮದುವೆಯು ಸಿಂಧುವಾಗುತ್ತದೆ ಎಂದು ಹೇಳಿದ ನ್ಯಾ.ಭಾಟ್ಕರ್,ಈ ಪ್ರಕರಣದಲ್ಲಿ ಮದುವೆಯ ಬಳಿಕ ಗಂಡ-ಹೆಂಡತಿ ಒಂದೇ ಒಂದು ದಿನವೂ ಜೊತೆಯಾಗಿ ವಾಸವಾಗಿಲ್ಲ ಮತ್ತು ತಮ್ಮಿಬ್ಬರ ನಡುವೆ ದೈಹಿಕ ಸಂಪರ್ಕವಿತ್ತು ಎಂದು ಪತಿಯು ಹೇಳಿಕೊಂಡಿದ್ದರೂ ಅದಕ್ಕೆ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ಈ ಮದುವೆಯು ಅಸಿಂಧು ವಾಗಿದೆ ಎಂದರು.

 ತಾವು ಲೈಂಗಿಕ ಸಂಬಂಧವನ್ನು ಹೊಂದಿದ್ದೆವು ಮತ್ತು ತನ್ನ ಪತ್ನಿ ಗರ್ಭಿಣಿ ಸಹ ಆಗಿದ್ದಳು ಎಂದು ಪತಿ ಪ್ರತಿಪಾದಿಸಿದ್ದನಾದರೂ,ಇದನ್ನು ಸಾಬೀತುಗೊಳಿಸುವ ಸ್ತ್ರೀರೋಗ ತಜ್ಞರ ಸಾಕ್ಷ್ಯವಿಲ್ಲ. ಗರ್ಭ ಪರೀಕ್ಷೆಯ ದಾಖಲೆಯನ್ನೂ ಸಲ್ಲಿಸಿಲ್ಲ ಎಂದು ಬೆಟ್ಟು ಮಾಡಿದ ನ್ಯಾಯಾಲಯವು, ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ದಂಪತಿಗೆ ಸಲಹೆ ನೀಡಲು ಪ್ರಯತ್ನಿಸಿ ತಾನು ವಿಫಲಗೊಂಡಿದ್ದೇನೆ ಎಂದು ತಿಳಿಸಿತು.

 ಈ ಗಂಡ-ಹೆಂಡತಿ ಪರಸ್ಪರರ ವಿರುದ್ಧ ದ್ವೇಷ,ಪ್ರತೀಕಾರ ಭಾವನೆಗಳಿಂದ ತಮ್ಮ ಬದುಕಿನ ಒಂಭತ್ತು ವರ್ಷಗಳನ್ನು ಹಾಳು ಮಾಡಿಕೊಂಡಿದ್ದಾರೆ. ಈ ನಿಲುವು ಅವರ ಮುಂದಿನ ಬದುಕನ್ನೂ ಹಾಳು ಮಾಡುತ್ತಿತ್ತು ಎಂದು ನ್ಯಾ.ಭಾಟ್ಕರ್ ಹೇಳಿದರು.

 2009ರಲ್ಲಿ ಮಹಿಳೆ 21 ಮತ್ತು ಪುರುಷ 24 ವರ್ಷ ಪ್ರಾಯದಲ್ಲಿದ್ದಾಗ ಈ ಪ್ರಕರಣ ನಡೆದಿತ್ತು. ಆತ ಖಾಲಿಹಾಳೆಗಳ ಮೇಲೆ ತನ್ನ ಸಹಿ ಪಡೆದಿದ್ದ ಮತ್ತು ವಿವಾಹ ನೋಂದಣಾಧಿಕಾರಿಗಳ ಬಳಿಗೂ ಕರೆದೊಯ್ದಿದ್ದ, ಆದರೆ ಅವು ಮದುವೆಯ ದಾಖಲೆಗಳಾಗಿದ್ದವು ಎನ್ನುವುದು ತನಗೆ ತಿಳಿದಿರಲಿಲ್ಲ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X