Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೇ 3 ರಿಂದ ಮತದಾನದ ಚೀಟಿ ವಿತರಣೆ

ಮೇ 3 ರಿಂದ ಮತದಾನದ ಚೀಟಿ ವಿತರಣೆ

ಬೆಂಗಳೂರಿನಲ್ಲಿ 91 ಲಕ್ಷಕ್ಕೂ ಅಧಿಕ ಮತದಾರರು

ವಾರ್ತಾಭಾರತಿವಾರ್ತಾಭಾರತಿ30 April 2018 9:52 PM IST
share
ಮೇ 3 ರಿಂದ ಮತದಾನದ ಚೀಟಿ ವಿತರಣೆ

ಬೆಂಗಳೂರು, ಎ.30: ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 91,13,095 ಮತದಾರರಿದ್ದು, ಮೇ 3ರಿಂದ ಮತದಾನದ ಚೀಟಿ ವಿತರಣೆ ಪ್ರಕ್ರಿಯೆ ಆರಂಭವಾಗಲಿದೆ.

ಸೋಮವಾರ ನಗರದ ಐಪಿಸಿ ತರಬೇತಿ ಕೇಂದ್ರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್, ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ್ದ ಸಂದರ್ಭದಲ್ಲಿ 46,04,190 ಪುರುಷರು, 41,92,706 ಮಹಿಳೆಯರು, 1,439 ಇತರರು ಸೇರಿ ಒಟ್ಟು 87,98,335 ಮತದಾರರಿದ್ದರು. ಜ.23ರಿಂದ ಎ.14ರವರೆಗೆ ನಡೆದ ನಿರಂತರ ಪರಿಷ್ಕರಣೆ ವೇಳೆ ಒಟ್ಟು 4,39,226 ಹೊಸ ಮತದಾರರು ಸೇರ್ಪಡೆಯಾಗಿದ್ದಾರೆ.

ಅದೇ ರೀತಿ, ವಿವಿಧ ಕಾರಣಗಳಿಂದ 85,248 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಮತದಾರರ ಪಟ್ಟಿಯಲ್ಲಿ ತಿದ್ದುಪಡಿಯಾದ ಮತದಾರರು 39,129 ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೊಂದು ಕ್ಷೇತ್ರಕ್ಕೆ ಸ್ಥಳಾಂತರಗೊಂಡವರು 11,878 ಮಂದಿ ಇದ್ದಾರೆ ಎಂದು ವಿವರಿಸಿದರು.
ಮತದಾರರ ಹೆಸರು, ಕ್ರಮಸಂಖ್ಯೆ, ಮತಗಟ್ಟೆ ವಿಳಾಸವನ್ನು ಒಳಗೊಂಡ ಮತದಾರರ ಚೀಟಿ (ವೋಟರ್ ಸ್ಲಿಪ್), ಮತದಾರರ ಮಾರ್ಗದರ್ಶಿ ಪುಸ್ತಿಕೆ ಹಾಗೂ ಗುರುತಿನ ಚೀಟಿಗಳ ವಿತರಣಾ ಕಾರ್ಯ ಮೇ 3ರಿಂದ 5ರವರೆಗೆ ನಡೆಯಲಿದೆ. ನಗರದಲ್ಲಿ ಒಟ್ಟು 8,278 ಮತಗಟ್ಟೆ ಅಧಿಕಾರಿಗಳಿದ್ದು, ಅವರು ಮನೆಮನೆಗೂ ಹೋಗಿ ವಿತರಿಸುತ್ತಾರೆ ಎಂದು ಹೇಳಿದರು.

ತರಬೇತಿ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ 55 ಸಾವಿರ ಮಂದಿಗೆ ಮೇ.7ರಂದು ತರಬೇತಿ ನಡೆಸಲಾಗುತ್ತದೆ. ಮತ ಎಣಿಕೆ ಮೇಲ್ವಿಚಾರಕರು ಹಾಗೂ ಸಹಾಯಕ ಮೇಲ್ವಿಚಾರಕರಿಗೆ ಮೇ 8ರಂದು ತರಬೇತಿ ಆಯೋಜಿಸಲಾಗಿದೆ. ಚುನಾವಣಾ ಕರ್ತವ್ಯ ನಿರ್ವಹಿಸಲಿರುವ ಸಿಬ್ಬಂದಿಗೆ ಅಂಚೆ ಮೂಲಕ ಮತದಾನದ ವ್ಯವಸ್ಥೆ ಮಾಡಲಾಗಿದೆ. ಮೇ 7ರಂದು ನಡೆಯುವ ತರಬೇತಿ ದಿನವೇ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಮತ ಎಣಿಕೆಯ ಮೂರು ದಿನಗಳ ಮೊದಲೇ ಇವುಗಳನ್ನು ತಲುಪಿಸಬೇಕು ಎಂದು ವಿವರಿಸಿದರು.

ಸಿಬ್ಬಂದಿ ವಿರುದ್ಧ ಎಫ್‌ಐಆರ್

ಮೊದಲ ಹಂತದ ತರಬೇತಿ ಕಾರ್ಯಕ್ರಮಕ್ಕೆ 21,776 ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳ ಪೈಕಿ 1,500 ಮಂದಿ ಗೈರು ಹಾಜರಾಗಿದ್ದರು. ಇವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರಿಗಾಗಿ ಮೇ.5ರಂದು ಮತ್ತೊಮ್ಮೆ ತರಬೇತಿ ಆಯೋಜಿಸಲಾಗಿದ್ದು, ಇದಕ್ಕೆ ಗೈರು ಹಾಜರಾದರೆ, ಕ್ರಮ ಜರುಗಿಸಲಾಗುತ್ತದೆ ಎಂದು ಮಂಜುನಾಥ ಪ್ರಸಾದ್ ಎಚ್ಚರಿಕೆ ನೀಡಿದರು.

ನಗರ ಜಿಲ್ಲೆಯಲ್ಲಿ ಮತದಾನದ ದಿನ ಹಾಗೂ ಮತ ಎಣಿಕೆ ದಿನದ ಮುನ್ನ 48 ಗಂಟೆಗಳಿಂದ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

-ಎನ್.ಮಂಜುನಾಥ ಪ್ರಸಾದ್, ಜಿಲ್ಲಾ ಚುನಾವಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X