Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಳ್ವಾಸ್ ಕಾಲೇಜಿಗೆ ದ್ವಿತೀಯ...

ಆಳ್ವಾಸ್ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಶೇ. 98.95 ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ30 April 2018 10:46 PM IST
share
ಆಳ್ವಾಸ್ ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಶೇ. 98.95 ಫಲಿತಾಂಶ

ಮೂಡುಬಿದಿರೆ, ಎ. 30: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆಳ್ವಾಸ್ ಪಿಯು ಕಾಲೇಜು ಅತ್ಯನ್ನತ ಸಾಧನೆ ಮಾಡಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಹತ್ತರ ಸ್ಥಾನದಲ್ಲಿ ಒಟ್ಟು 36 ಸ್ಥಾನಗಳನ್ನು ಆಳ್ವಾಸ್ ವಿದ್ಯಾರ್ಥಿಗಳು ಪಡೆಯುವ ಮೂಲಕ ರಾಜ್ಯದಲ್ಲೇ ಗರಿಷ್ಟ ಸ್ಥಾನವನ್ನು ಪಡೆದಿದ್ದಾರೆ.

ಒಟ್ಟು 5,825 ಮಂದಿ ಪರೀಕ್ಷೆ ಬರೆದಿದ್ದು, 5,764 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡಾ 98.95 ಫಲಿತಾಂಶವನ್ನು ಪಡೆದುಕೊಂಡಿದೆ.

ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್‌ನ ಚೇತನ್ ಪೈ 593 ಅಂಕದೊಂದಿಗೆ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ಲಕ್ಷ್ಮೀ ನಾರಾಯಣ ರೆಡ್ಡಿ 592 ಅಂಕದೊಂದಿಗೆ ರಾಜ್ಯಕ್ಕೆ ಚತುರ್ಥ ಸ್ಥಾನ ಮತ್ತು ಭರತ್ ಗಜಾನನ ಹೆಗಡೆ ಹಾಗೂ ಪೃಥ್ವೀ ಗಣಪತಿ ಹೆಗಡೆ 591 ಅಂಕ ಗಳಿಸಿ ರಾಜ್ಯಕ್ಕೆ 5ನೇ ಸ್ಥಾನವನ್ನು ಗಳಿಸಿಕೊಳ್ಳುವ ಜೊತೆಗೆ ಆಳ್ವಾಸ್ ರಾಜ್ಯದಲ್ಲಿಯೇ ವಾಣಿಜ್ಯ ವಿಭಾಗದಲ್ಲಿ ಒಟ್ಟು 5 ಸ್ಥಾನವನ್ನು ಪಡೆದುಕೊಂಡಿದೆ.

ವಿಜ್ಞಾನ ವಿಭಾಗದಲ್ಲಿ ಮಿಲಿಷಾ ರೋಡ್ರಿಗಸ್ 593 ಅಂಕದೊಂದಿಗೆ ರಾಜ್ಯಕ್ಕೆ ಚತುರ್ಥ ಸ್ಥಾನ ಹಾಗೂ ವರ್ಷಿನಿ ಕೆ.ಎಸ್, ಹರೀಶ್ ಡಿ.ಜಿ, ಶ್ವೇತಾ ಹೆಗಡೆ ತಲಾ 592 ಅಂಕ ಗಳಿಸಿ ರಾಜ್ಯಕ್ಕೆ 5ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಕಲಾ ವಿಭಾಗದಲ್ಲಿ ಕ್ಷೇತ್ರಮಯ್ಯುಂ ಸಂಜಯ್ ಸಿಂಗ್ 568, ಹೇಮಾ ಪಿ.ಬಿ 564, ಅಂಧ ವಿದ್ಯಾರ್ಥಿಗಳಾದ ಸಾತ್ವಿಕ್ ಶೆಟ್ಟಿ 540, ದೀಕ್ಷಿತ್ 519, ಅಂಕಿತಾ ಶೆಟ್ಟಿ 497 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 5 ನೇ ಸ್ಥಾನ ಗಳಿಸಿರುವ ಹರೀಶ್ ಡಿ.ಜಿ ಪರಿಶಿಷ್ಟ ಜಾತಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಆಳ್ವಾಸ್‌ಗೆ ಕೀರ್ತಿ ತಂದಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಹರ್ಷಿತಾ .ಎಂ.ಶೆಟ್ಟಿ 575, ಕಾವ್ಯಾ ಎನ್ ಬೆಂಗಳೂರು 571, ಕೀರ್ತನಾ ಎಂ.ಕೆ 576 ಅಂಕ ಪಡೆಯುದರ ಮೂಲಕ ವಿಶಿಷ್ಟ ಸಾಧನೆ ಗೈದಿದ್ದಾರೆ.

ಒಟ್ಟು ಫಲಿತಾಂಶದಲ್ಲಿ 98 ಶೇಕಡಾಕ್ಕಿಂತ ಮೇಲ್ಪಟ್ಟು 28 ವಿದ್ಯಾರ್ಥಿಗಳು, 95%ಕ್ಕಿಂತ ಮೇಲ್ಪಟ್ಟು 403 ವಿದ್ಯಾರ್ಥಿಗಳು, 90%ಕ್ಕಿಂತ ಮೇಲ್ಪಟ್ಟು 1462, 85 %ಕ್ಕಿಂತ ಮೇಲ್ಪಟ್ಟು 2,644 ವಿದ್ಯಾರ್ಥಿಗಳು ಹಾಗೂ ಪ್ರಥಮ ದರ್ಜೆಯಲ್ಲಿ 2,786, ದ್ವಿತೀಯ ದರ್ಜೆಯಲ್ಲಿ 299, ತೃತೀಯ ದರ್ಜೆಯಲ್ಲಿ 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

16 ವಿದ್ಯಾರ್ಥಿಗಳು 4 ವಿಷಯಗಳಲ್ಲಿ 100 ಅಂಕ ಹಾಗೂ, 34 ವಿದ್ಯಾರ್ಥಿಗಳು 3 ವಿಷಯಗಳಲ್ಲಿ 100 ಅಂಕ ಪಡೆದಿರುತ್ತಾರೆ. ಕನ್ನಡ 23, ಹಿಂದಿ 15, ಸಂಸ್ಕೃತ 29, ಭೌತಶಾಸ್ತ್ರ 56, ರಸಾಯನಶಾಸ್ತ್ರ 79, ಗಣಿತ 216, ಜೀವಶಾಸ್ತ್ರ 18, ಕಂಪ್ಯೂಟರ್ ಸೈನ್ಸ್ 41, ಸಂಖ್ಯಾಶಾಸ್ತ್ರ 61, ಇಲೆಕ್ಟ್ರಾನಿಕ್ಸ್ 30, ಅರ್ಥಶಾಸ್ತ್ರ 6, ವ್ಯವಹಾರ ಅಧ್ಯಯನ 29, ಅಕೌಂಟೆನ್ಸಿ 99, ಬೇಸಿಕ್ ಮ್ಯಾಥ್ಸ್‌ನಲ್ಲಿ 22 ವಿದ್ಯಾರ್ಥಿಗಳು ತಲಾ 100 ಅಂಕ ಪಡೆಯುವುದರ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

ಶುಭಾಂಕರ್‌ಗೆ ಸಿಎಯ ಬಯಕೆ

ಬೆಳಗಾವಿ ಜಿಲ್ಲೆಯ ಅಭಯ ಕುಮಾರ್ ದಂಪತಿಯ ಪುತ್ರನಾಗಿರುವ ಶುಭಾಂಕರ್ ಚೌಗಲೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಉಚಿತ ಶಿಕ್ಷಣ ಯೋಜನೆಯಡಿ ದ್ವಿತೀಯ ಪಿಯುಸಿ ವ್ಯಾಸಂಗ ಪೂರೈಸಿದ್ದಾರೆ. ತನ್ನ ಪೋಷಕರ ಹಾಗೂ ಉಪನ್ಯಾಸಕ ವೃಂದದವರ ನಿರಂತರ ಪ್ರೋತ್ಸಾಹವನ್ನು ಸ್ಮರಿಸುವ ಶುಭಾಂಕರ್, ಪದವಿಯೊಂದಿಗೆ ಸಿಎ ಆಗುವ ಇಚ್ಛೆಯನ್ನು ವ್ಯಕ್ತಪಡಿಸಿದರು.

ಚೇತನ್ ಪೈ ಸಿಎ ಆಗುವಾಸೆ
ಕಾರ್ಕಳದ ಮೀಯಾರು ನಿವಾಸಿಯಾಗಿರುವ ಚಂದ್ರಕಾಂತ ಪೈ ದಂಪತಿಯ ಪುತ್ರ ಚೇತನ್ ಪೈ ಪಿಯುಸಿಯಲ್ಲಿ ಶೇ. 98.83 ಅಂಕ ಪಡೆದಿದ್ದು, 590 ಅಂಕಗಳ ನಿರೀಕ್ಷೆಯಲ್ಲಿದ್ದು, ಅದಕ್ಕಿಂತ ಹೆಚ್ಚುವರಿ ಮೂರು ಅಂಕಗಳನ್ನು ಪಡೆದು, ರಾಜ್ಯದಲ್ಲಿ ವಾಣಿಜ್ಯ ವಿಭಾಗದಲ್ಲಿ ಮೂರು ಸ್ಥಾನ ಪಡೆದು ಸಾಧನೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮುಂದೆ ಸಿಎ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಮೆಲಿಶಾಗೆ ನಾಲ್ಕನೇ ಸ್ಥಾನ

ಆಳ್ವಾಸ್ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಮೆಲಿಶಾ ರೊಡ್ರಿಗಸ್ 595 ಅಂಕಗಳಿಸಿರುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ. ಕಿನ್ನಿಗೋಳಿಯ ಮೈಕಲ್ ರೊಡ್ರಿಗಸ್ ದಂಪತಿಯ ಪುತ್ರಿಯಾಗಿರುವ ಈಕೆ ಎಂಬಿಬಿಎಸ್ ಕಲಿತು, ವೈದ್ಯೆಯಾಗಿ ವೃತ್ತಿ ಜೀವನ ಪ್ರಾರಂಭಿಸುವ ಕನಸು ಹೊಂದಿದ್ದಾರೆ. ಹೆತ್ತವರ ಪ್ರೋತ್ಸಾಹ, ಉಪನ್ಯಾಸಕರ ನಿರಂತರ ಮಾರ್ಗದರ್ಶನವನ್ನು ಈಕೆ ಸ್ಮರಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X