Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಾಯುವುದಕ್ಕಾಗಿ ಸ್ವಿಟ್ಸರ್‌ಲ್ಯಾಂಡ್‌ಗೆ...

ಸಾಯುವುದಕ್ಕಾಗಿ ಸ್ವಿಟ್ಸರ್‌ಲ್ಯಾಂಡ್‌ಗೆ ಹೋಗಲಿದ್ದಾರೆ ಈ ಹಿರಿಯ ವಿಜ್ಞಾನಿ

ವಾರ್ತಾಭಾರತಿವಾರ್ತಾಭಾರತಿ30 April 2018 10:47 PM IST
share
ಸಾಯುವುದಕ್ಕಾಗಿ ಸ್ವಿಟ್ಸರ್‌ಲ್ಯಾಂಡ್‌ಗೆ ಹೋಗಲಿದ್ದಾರೆ ಈ ಹಿರಿಯ ವಿಜ್ಞಾನಿ

ಸಿಡ್ನಿ, ಎ. 30: ಆಸ್ಟ್ರೇಲಿಯದ ಅತಿ ಹಿರಿಯ ವಿಜ್ಞಾನಿ 104 ವರ್ಷದ ಡೇವಿಡ್ ಗುಡಾಲ್ ತನ್ನ ಬದುಕನ್ನು ಮುಗಿಸುವುದಕ್ಕಾಗಿ ಮೇ ತಿಂಗಳ ಮೊದಲ ಭಾಗದಲ್ಲಿ ಸ್ವಿಟ್ಸರ್‌ಲ್ಯಾಂಡ್‌ಗೆ ತೆರಳಲಿದ್ದಾರೆ.

ಅವರನ್ನು ಗುಣಪಡಿಸಲಾಗದ ಕಾಯಿಲೆಯೇನೂ ಬಾಧಿಸುತ್ತಿಲ್ಲ. ಆದರೆ, ಅವರ ಜೀವನದ ಗುಣಮಟ್ಟ ಕುಸಿದಿದೆ. ಹಾಗಾಗಿ, ಜೀವನವನ್ನು ಕೊನೆಗೊಳಿಸಲು ಸ್ವಿಟ್ಸರ್‌ಲ್ಯಾಂಡ್‌ನ ಬಸೆಲ್‌ನಲ್ಲಿರುವ ಸಾಯಲು ನೆರವು ನೀಡುವ ಸಂಸ್ಥೆಯೊಂದರ ನೆರವು ಕೋರಿದ್ದಾರೆ.

‘‘ಈ ವಯಸ್ಸನ್ನು ತಲುಪಿರುವುದಕ್ಕೆ ನಾನು ವಿಷಾದಿಸುತ್ತೇನೆ’’ ಎಂದು ಈ ತಿಂಗಳ ಆದಿ ಭಾಗದಲ್ಲಿ ತನ್ನ ಹುಟ್ಟು ಹಬ್ಬದ ದಿನದಂದು ‘ಎಬಿಸಿ’ ಟಿವಿಯೊಂದಿಗೆ ಮಾತನಾಡಿದ ಅವರು ಹೇಳಿದ್ದರು.

‘‘ನಾನು ಸಂತೋಷವಾಗಿಲ್ಲ. ನಾನು ಸಾಯಲು ಬಯಸಿದ್ದೇನೆ. ಆದರೆ, ಇದೇನೂ ಬೇಸರದ ವಿಷಯವಲ್ಲ. ಬೇಸರದ ವಿಷಯವೆಂದರೆ, ಸಾಯುವುದರಿಂದ ಜನರನ್ನು ತಡೆಯುವುದು. ನನ್ನಂಥ ವೃದ್ಧ ವ್ಯಕ್ತಿ ಆತ್ಮಹತ್ಯೆಗೆ ಸಹಾಯ ಪಡೆಯುವ ಹಕ್ಕು ಸೇರಿದಂತೆ ಪೂರ್ಣ ಪೌರತ್ವ ಹಕ್ಕುಗಳನ್ನು ಹೊಂದಬೇಕು ಎನ್ನುವುದು ನನ್ನ ತರ್ಕವಾಗಿದೆ’’ ಎಂದಿದ್ದರು.

ಆಸ್ಟ್ರೇಲಿಯದಲ್ಲಿ ದಯಾಮರಣ ನಿಷಿದ್ಧವಾಗಿರುವುದರಿಂದ ಅವರು ಈ ಕ್ರಮ ತೆಗೆದುಕೊಂಡಿದ್ದಾರೆ.

ಇತ್ತೀಚಿನವರೆಗೂ ಕೆಲಸದಲ್ಲಿ ಸಕ್ರಿಯ

ಡೇವಿಡ್ ಗುಡಾಲ್ ಪರ್ತ್‌ನ ಎಡಿತ್ ಕೋವನ್ ವಿಶ್ವವಿದ್ಯಾನಿಲಯದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಇತ್ತೀಚಿನವರೆಗೂ ತನ್ನ ಕೆಲಸದಲ್ಲಿ ಸಕ್ರಿಯರಾಗಿದ್ದರು.

2016ರಲ್ಲಿ ನಡೆದ ಘಟನೆಯೊಂದು ಜಾಗತಿಕ ಗಮನವನ್ನು ಸೆಳೆದಿತ್ತು. ತನ್ನ 102ನೆ ವರ್ಷದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಕೆಲಸ ಮಾಡಲು ಗುಡಾಲ್ ಅನರ್ಹರಾಗಿದ್ದಾರೆ ಎಂಬುದಾಗಿ ಆಡಳಿತ ಮಂಡಳಿ ಘೋಷಿಸಿತು.

ಇದನ್ನು ಗುಡಾಲ್ ವಿರೋಧಿಸಿದರು. ಇದೊಂದು ದೊಡ್ಡ ವಿವಾದವಾಗಿ ಪರಿಣಮಿಸಿತು ಹಾಗೂ ಜಾಗತಿಕ ವಿಜ್ಞಾನಿಗಳ ಸಮುದಾಯ ಅವರನ್ನು ಬೆಂಬಲಿಸಿತು.

ಅಂತಿಮವಾಗಿ ವಿಶ್ವವಿದ್ಯಾನಿಲಯ ತನ್ನ ಆದೇಶವನ್ನು ಹಿಂದಕ್ಕೆ ಪಡೆದುಕೊಂಡಿತು.

ಅವರು ಡಝನ್‌ಗಟ್ಟಲೆ ಸಂಶೋಧನಾ ಪ್ರಬಂಧಗಳನ್ನು ಸಿದ್ಧಪಡಿಸಿದ್ದಾರೆ. ಇತ್ತೀಚಿನವರೆಗೂ ಪರಿಸರಕ್ಕೆ ಸಂಬಂಧಿಸಿದ ಪತ್ರಿಕೆಗಳನ್ನು ವಿಮರ್ಶಿಸಿದ್ದಾರೆ ಹಾಗೂ ಸಂಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X