ಫಿಲೋಮಿನಾ ಕಾಲೇಜ್ಗೆ ಶೇ. 90 ಫಲಿತಾಂಶ
ಪುತ್ತೂರು, ಎ. 30: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಶೇ.90 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 612 ವಿದ್ಯಾರ್ಥಿಗಳು ಹಾಜರಾಗಿದ್ದು 101 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 316 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಕೃತಿ ಎ.ಟಿ. 584 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರೆನಿಟಾ ಮೆಲ್ರಿಯಾ ಲೋಬೊ 579 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾಳೆ. ಕಲಾ ವಿಭಾಗದಲ್ಲಿ ಪುನೀತ್ ಕುಮಾರ್ ಟಿ. 505 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಕಾಲೇಜಿನ ಕಲಾ ವಿಭಾಗದಲ್ಲಿ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಲಭಿಸಿದೆ.
ಕಲಾ ವಿಭಾಗದಲ್ಲಿ ಪುನೀತ್ ಕುಮಾರ್ ಟಿ.(505), ವಾಣಿಜ್ಯ ವಿಭಾಗದಲ್ಲಿ ರೆನಿಟಾ ಮೆಲ್ರಿಯಾ ಲೋಬೊ(579), ವಿಜ್ಞಾನ ವಿಭಾಗದಲ್ಲಿ ಕೃತಿ ಎ.ಟಿ.(584) ಕಾಲೇಜ್ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.