Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗೆಲುವಿಗಾಗಿ ಮುಂಬೈ-ಆರ್‌ಸಿಬಿ ಹೋರಾಟ

ಗೆಲುವಿಗಾಗಿ ಮುಂಬೈ-ಆರ್‌ಸಿಬಿ ಹೋರಾಟ

ವಾರ್ತಾಭಾರತಿವಾರ್ತಾಭಾರತಿ1 May 2018 12:26 AM IST
share
ಗೆಲುವಿಗಾಗಿ ಮುಂಬೈ-ಆರ್‌ಸಿಬಿ ಹೋರಾಟ

ಬೆಂಗಳೂರು, ಎ.30: ಐಪಿಎಲ್ ಟ್ವೆಂಟಿ-20 ಟೂರ್ನಮೆಂಟ್‌ನಲ್ಲಿ ಗೆಲುವಿಗಾಗಿ ಹಾತೊರೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮಂಗಳವಾರ ಇಲ್ಲಿ ಮುಖಾಮುಖಿಯಾಗಲಿವೆ.

ತನ್ನ ತವರು ಮೈದಾನ ಪುಣೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶರಣಾಗಿರುವ ಮುಂಬೈ ಇಂಡಿಯನ್ಸ್ ತಂಡ ವಿರಾಟ್ ಕೊಹ್ಲಿ,ಮೆಕಲಮ್ ಹಾಗೂ ಎಬಿಡಿವಿಲಿಯರ್ಸ್ ರಂತಹ ಹೊಡಿಬಡಿ ದಾಂಡಿಗರನ್ನು ಹೊಂದಿರುವ ಆರ್‌ಸಿಬಿಯನ್ನು ಎದುರಿಸಲಿದೆ.

ತವರು ಮೈದಾನದಲ್ಲಿ ಚೆನ್ನೈ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಸತತ ಸೋಲುಂಡಿರುವ ಆರ್‌ಸಿಬಿ ತಂಡದ ಆತ್ಮವಿಶ್ವಾಸಕ್ಕೆ ಧಕ್ಕೆ ಉಂಟಾಗಿದೆ. ಆದರೆ, ಟೂರ್ನಿಯಲ್ಲಿ ಸ್ಪರ್ಧೆಯಲ್ಲಿ ಉಳಿಯಬೇಕಾದರೆ ಶಕ್ತಿ ಮೀರಿ ಪ್ರದರ್ಶನ ನೀಡಬೇಕಾಗಿದೆ.

ಟೂರ್ನಿಯಲ್ಲಿ ಉಭಯ ತಂಡಗಳು ಒಂದೇ ರೀತಿಯ ಪರಿಸ್ಥಿತಿ ಎದುರಿಸುತ್ತಿವೆ. ರೋಹಿತ್ ಶರ್ಮ ನೇತೃತ್ವದ ಮುಂಬೈ ಹಾಗೂ ಕೊಹ್ಲಿ ನಾಯಕತ್ವದ ಬೆಂಗಳೂರು ತಂಡ ಏಳು ಪಂದ್ಯಗಳ ಪೈಕಿ ಕೇವಲ ಎರಡರಲ್ಲಿ ಜಯ ಸಾಧಿಸಿವೆ. ಉತ್ತಮ ರನ್‌ರೇಟ್ ಹಿನ್ನೆಲೆಯಲ್ಲಿ ಮುಂಬೈ ತಂಡ ಆರ್‌ಸಿಬಿಗಿಂತ ಮುಂದಿದ್ದು, ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ನಾಳೆ ಸೋಲುವ ತಂಡ ಪ್ಲೇ-ಆಫ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಪರದಾಡಬೇಕಾಗುತ್ತದೆ.

 ಮುಂಬೈ ತಂಡ ವಾಂಖಡೆ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿರುದ್ಧ ಆಡಿರುವ ಕಳೆದ ಪಂದ್ಯದಲ್ಲಿ 46 ರನ್‌ಗಳಿಂದ ಜಯ ಸಾಧಿಸಿತ್ತು. ರೋಹಿತ್ ಶರ್ಮ ಹಾಗೂ ಎವಿನ್ ಲೂವಿಸ್ ಕ್ರಮವಾಗಿ 94 ಹಾಗೂ 65 ರನ್ ದಾಖಲಿಸಿದ್ದರು. ಆರಂಭಿಕ ಆಟಗಾರ ಸೂರ್ಯಕುಮಾರ್ ಯಾದವ್(7 ಪಂದ್ಯ, 274 ರನ್)ಹೊರತುಪಡಿಸಿ ಮುಂಬೈನ ಉಳಿದ ಆಟಗಾರರು ಸ್ಥಿರ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ. ನಾಯಕ ರೋಹಿತ್ 5 ಪಂದ್ಯಗಳಲ್ಲಿ 20 ರನ್ ಗಳಿಸಲೂ ವಿಫಲರಾಗಿದ್ದಾರೆ.

ಏಳು ಪಂದ್ಯಗಳಲ್ಲಿ ಒಟ್ಟು 196 ರನ್ ಗಳಿಸಿರುವ ರೋಹಿತ್ ಮೇಲೆ ಮುಂಬೈ ವಿಶ್ವಾಸ ಇಟ್ಟುಕೊಂಡಿದೆ. ಪಾಂಡ್ಯ ಸಹೋದರರಾದ ಹಾರ್ದಿಕ್ ಹಾಗೂ ಕೃನಾಲ್ ಬೌಲಿಂಗ್‌ನಲ್ಲಿ ಕಾಣಿಕೆ ನೀಡಿದ್ದಾರೆ. ಆದರೆ ಬ್ಯಾಟಿಂಗ್‌ನಲ್ಲಿ ಏಳು ಪಂದ್ಯಗಳಲ್ಲಿ ಕ್ರಮವಾಗಿ 61 ಹಾಗೂ 113 ರನ್ ಗಳಿಸಿದ್ದಾರೆ.

ಕಳೆದ ಪಂದ್ಯದಲ್ಲಿ ಕೀರೊನ್ ಪೊಲಾರ್ಡ್ ಬದಲಿಗೆ ತಂಡ ಸೇರಿಕೊಂಡಿದ್ದ ಜೆಪಿ ಡುಮಿನಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿರಲಿಲ್ಲ. ಡುಮಿನಿ ಬ್ಯಾಟಿಂಗ್‌ಗೆ ಇಳಿಯುವ ಮೊದಲೇ ಮುಂಬೈ ಗೆಲುವಿನ ದಡ ಸೇರಿತ್ತು.

  ಮುಂಬೈ ಬೌಲಿಂಗ್ ವಿಭಾಗದಲ್ಲಿ ಸಂಘಟಿತ ಪ್ರದರ್ಶನ ನೀಡಲು ವಿಫಲವಾಗುತ್ತಾ ಬಂದಿದೆ. ಯುವ ಆಟಗಾರ ಮಾಯಾಂಕ್ ಮರ್ಕಂಡೆ ಲೆಗ್ ಸ್ಪಿನ್ ಮೂಲಕ ಏಳು ಪಂದ್ಯಗಳಲ್ಲಿ 10 ವಿಕೆಟ್‌ಗಳನ್ನು ಕಬಳಿಸಿ ಗಮನ ಸೆಳೆಯುತ್ತಿದ್ದಾರೆ.

ವೇಗದ ಬೌಲರ್‌ಗಳಾದ ಜಸ್‌ಪ್ರೀತ್ ಬುಮ್ರಾ ಹಾಗೂ ಮುಸ್ತಫಿಝರ್ರಹ್ಮಾನ್ ಕ್ರಮವಾಗಿ ಏಳು ಹಾಗೂ ಆರು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಒಂದು ವೇಳೆ ಮುಂಬೈ ಕೊಹ್ಲಿ ಹಾಗೂ ಮೆಕಲಮ್‌ರನ್ನು ಬೇಗನೆ ಔಟ್ ಮಾಡಿದರೆ ಮೇಲುಗೈ ಸಾಧಿಸಬಹುದು. ಮತ್ತೊಂದೆಡೆ, ಕೇವಲ ಎರಡರಲ್ಲಿ ಗೆಲುವು, ಐದು ಪಂದ್ಯಗಳಲ್ಲಿ ಸೋತಿರುವ ಆರ್‌ಸಿಬಿ ಏಳನೇ ಸ್ಥಾನದಲ್ಲಿದೆ. ಜ್ವರದಿಂದಾಗಿ ಕಳೆದ ಪಂದ್ಯದಿಂದ ಹೊರಗುಳಿದಿದ್ದ ಎಬಿಡಿ ವಿಲಿಯರ್ಸ್ ಆಡುವ 11ರ ಬಳಗಕ್ಕೆ ವಾಪಸಾಗುವ ಸಾಧ್ಯತೆಯಿದೆ. ಈ ವರ್ಷದ ಐಪಿಎಲ್‌ನಲ್ಲಿ ದಕ್ಷಿಣ ಆಫ್ರಿಕದ ಡಿವಿಲಿಯರ್ಸ್ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಚೆನ್ನೈ ವಿರುದ್ಧ 30 ಎಸೆತಗಳಲ್ಲಿ 68 ರನ್ ಗಳಿಸಿರುವ ಡಿವಿಲಿಯರ್ಸ್ ಡೇರ್ ಡೆವಿಲ್ಸ್ ವಿರುದ್ಧ 39 ಎಸೆತಗಳಲ್ಲಿ 90 ರನ್ ಗಳಿಸಿದ್ದಾರೆ.

ಕೊಹ್ಲಿ ಕ್ರಮವಾಗಿ ಮುಂಬೈ ಹಾಗೂ ಕೆಕೆಆರ್ ವಿರುದ್ಧ ಕ್ರಮವಾಗಿ 92 ಹಾಗೂ 68 ರನ್ ಗಳಿಸಿದ್ದು, ಮೊದಲಿನ ಲಯಕ್ಕೆ ಮರಳುತ್ತಿದ್ದಾರೆ. ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಈ ತನಕ ಒಟ್ಟು 194 ರನ್ ಗಳಿಸಿದ್ದು, ಉತ್ತಮ ಪ್ರದರ್ಶನ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X