ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ: ಗುಲಾಂ ನಬಿ ಅಝಾದ್

ಕಲಬುರಗಿ, ಮೇ 1: ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಆದುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ ಎಂದು ಕೇಂದ್ರದ ಮಾಜಿ ಸಚಿವ ಗುಲಾಂ ನಬೀ ಅಝಾದ್ ಹೇಳಿದ್ದಾರೆ.
ಮಂಗಳವಾರ ಇಲ್ಲಿನ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದ ಅವರು, ಮುಸ್ಲಿಮರೆಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
‘ಹಿಂದೂಗಳಿಗೆ ಬೈಯ್ದರೆ ಬಿಜೆಪಿಗೆ ಲಾಭವಾಗುತ್ತದೆ. ಹೀಗಾಗಿ ಹಿಂದೂಗಳನ್ನು ಬೈಯ್ಯುವ ಬದಲು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿ ಎಂದ ಅವರು, ತ್ರಿವಳಿ ತಲಾಕ್ ಕಾಯ್ದೆ ಜಾರಿಗೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ನುಡಿದರು.
Next Story





