Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆಯಲ್ಲಿ 15,89,500 ರೂ....

ದ.ಕ.ಜಿಲ್ಲೆಯಲ್ಲಿ 15,89,500 ರೂ. ಮುಟ್ಟುಗೋಲು: ಸಸಿಕಾಂತ್ ಸೆಂಥಿಲ್

ಚುನಾವಣೆಯ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ1 May 2018 5:46 PM IST
share
ದ.ಕ.ಜಿಲ್ಲೆಯಲ್ಲಿ 15,89,500 ರೂ. ಮುಟ್ಟುಗೋಲು: ಸಸಿಕಾಂತ್ ಸೆಂಥಿಲ್

ಮಂಗಳೂರು, ಮೇ 1: ಚುನಾವಣಾ ಮಾದರಿ ನೀತಿ ಸಂಹಿತೆಯಂತೆ ದ.ಕ. ಜಿಲ್ಲೆಯಲ್ಲಿ ಈವರೆಗೆ 15,89,500 ರೂ. ವನ್ನು ಮುಟ್ಟುಗೋಲು ಹಾಕಲಾಗಿದೆ. ಆ ಪೈಕಿ 8,84,500 ರೂ.ವನ್ನು ಸೂಕ್ತ ದಾಖಲೆ ಪರಿಶೀಲಿಸಿದ ಬಳಿಕ ಜಿಲ್ಲಾ ಪರಿಹಾರ ಸಮಿತಿಯ ಮೂಲಕ ಬಿಡುಗಡೆ ಮಾಡಲಾಗಿದೆ. ಅದಲ್ಲದೆ 23,784.825 ಲೀ. ಮದ್ಯ ಹಾಗೂ 6 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮತದಾನ ಪ್ರಕ್ರಿಯೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಇವಿಎಂಗಳನ್ನು ಚುನಾವಣೆಗೆ ಸಿದ್ಧಪಡಿಸಲು ಆವಶ್ಯವಿರುವ ಮತಪತ್ರ ಮತ್ತು ಮತಗಟ್ಟೆಯಲ್ಲಿ ಟೆಂಡರ್ಡ್‌ ಮತಪತ್ರವಾಗಿ ಉಪಯೋಗಿಸಲು ಆವಶ್ಯವುಳ್ಳ ಮತಪತ್ರಗಳನ್ನು ಮುಖ್ಯ ಚುನಾವಣಾಧಿಕಾರಿಯ ಅನುಮೋದನೆ ಪಡೆದು ಬೆಂಗಳೂರಿನ ಸರಕಾರಿ ಮುದ್ರಣಾಲಯದಲ್ಲಿ ಮುದ್ರಿಸಿಕೊಳ್ಳಲಾಗಿದ್ದು, ಮೇ 2 ರಂದು ಈ ಮುದ್ರಿತ ಮತಪತ್ರವು ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ಮಂಗಳೂರು ತಲುಪಲಿದೆ ಎಂದರು.

ರಾಜ್ಯ ವಿಧಾನ ಸಭೆಗೆ ಮೇ 12ರಂದು ನಡೆಯುವ ಚುನಾವಣೆಯ ಮತ ಎಣಿಕೆಯು ಮೇ 15ರಂದು ಬೋಂದೆಲ್‌ನಲ್ಲಿರುವ ಮಹಾತ್ಮಾಗಾಂಧಿ ಶತಾಬ್ಧಿ ಹಿ.ಪ್ರಾ. ಸರಕಾರಿ ಶಾಲೆ ಮತ್ತು ಸಂಯುಕ್ತ ಕಾಲೇಜಿನಲ್ಲಿ ನಡೆಯಲಿದೆ. ಬೋಂದೆಲ್‌ನ ಶಾಲೆಯಲ್ಲಿ, ಬೆಳ್ತಂಗಡಿ, ಮೂಡುಬಿದಿರೆ, ಮಂಗಳೂರು ನಗರ ಉತ್ತರ ಕ್ಷೇತ್ರಕ್ಕೆ ತಲಾ 3 ಭದ್ರತಾ ಕೊಠಡಿ, ತಲಾ 2 ಮತಗಳ ಎಣಿಕೆ ಕೊಠಡಿಯನ್ನು ಕಾಯ್ದಿರಿಸಲಾಗಿದೆಯಲ್ಲದೆ ತಲಾ 14 ಮೇಜುಗಳನ್ನು ಅಳವಡಿಸಲಾಗಿದೆ. ಬೋಂದೆಲ್‌ನ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳೂರು ನಗರ ದಕ್ಷಿಣ, ಮಂಗಳೂರು, ಬಂಟ್ವಾಳ, ಪುತ್ತೂರು ಸುಳ್ಯ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಅದಕ್ಕಾಗಿ 14 ಭದ್ರತಾ ಕೊಠಡಿಗಳು, 8 ಮತ ಎಣಿಕೆ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಸಸಿಕಾಂತ್ ಸೆಂಥಿಲ್ ಹೇಳಿದರು.

ಜಿಲ್ಲೆಯಲ್ಲಿ 380 ಜನಸೇವಾ ಮತದಾರರಿದ್ದು, ಎ. 28ರಂದು ಇಟಿಪಿಬಿಎಸ್ ಮೂಲಕ ಅಂಚೆ ಮತಪತ್ರವನ್ನು ಆಯಾಯ ಚುನಾವಣಾಧಿಕಾರಿಗಳು ರವಾನಿಸಿರುತ್ತಾರೆ. 10,980 ಮತಗಟ್ಟೆ ಅಧಿಕಾರಿಗಳನ್ನು 2ನೆ ಮಿಶ್ರಣದಿಂದ ಜಿಲ್ಲೆಗೆ ನಿಯೋಜಿಸಲ್ಪಟ್ಟ ವೀಕ್ಷಕರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಯ ಕೋರ್ಟ್ ಹಾಲ್‌ನಲ್ಲಿ ಮತಗಟ್ಟೆ ತಂಡ ರಚಿಸಲಾಗಿದೆ ಎಂದ ಜಿಲ್ಲಾಧಿಕಾರಿ, ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಸಂಬಂಧಿಸಿ ಆನ್‌ಲೈನ್ ಮೂಲಕ ಈವರೆಗೆ 165 ದೂರುಗಳನ್ನು ದಾಖಲಿಸಲಾಗಿದೆ. ಅದನ್ನು ಚುನಾವಣಾ ಆಯೋಗದ ‘ಸಮಧಾನ್’ ಪೋರ್ಟಲ್‌ನಲ್ಲಿ ಅಳವಡಿಸಿ ನಿಯಮಾನುಸಾರ ಪರಿಶೀಲಿಸಿ 160 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. 5 ದೂರುಗಳು ತನಿಖೆಯ ಹಂತದಲ್ಲಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X