ಕಡಬ: ರಸ್ತೆ ಅಪಘಾತ; ಐದು ಮಂದಿಗೆ ಗಾಯ

ಕಡಬ, ಮೇ 1: ಇನ್ನೋವಾ ಹಾಗೂ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಐವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ - ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿ ಆರ್ಐ ಸಮೀಪ ಮಂಗಳವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಐವರು ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Next Story





