ಶಿವಮೊಗ್ಗ: ಓಮ್ನಿ ಢಿಕ್ಕಿ; ಬೈಕ್ ಸವಾರ ಮೃತ್ಯು

ಶಿವಮೊಗ್ಗ, ಮೇ 1: ಓಮ್ನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ ಘಟನೆ ವರದಿಯಾಗಿದೆ.
ಸಾಗರ ಪಟ್ಟಣದ ನಿವಾಸಿ ವೆಂಕಟೇಶ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ಸಾಗರ ಪಟ್ಟಣದ ನ್ಯೂ ಸಾಗರ್ ಸಾಮಿಲ್ ಮುಂಭಾಗ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಮಾರುತಿ ಓಮ್ನಿ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್‍ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಸಂಬಂಧ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





