ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಪೋಷಕರೇ ಕಾರಣ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಬಲ್ಲಿಯಾ, ಮೇ 1: ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಪೋಷಕರೇ ಕಾರಣವಾಗಿದ್ದು, ಅವರು ತಮ್ಮ ಮಕ್ಕಳನ್ನು ಸ್ವತಂತ್ರವಾಗಿ ತಿರುಗಾಡಲು ಬಿಡಬಾರದು ಎಂದು ಉತ್ತರ ಪ್ರದೇಶದ ಶಾಸಕ ಸುರೇಂದ್ರ ಸಿಂಗ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಹಿಂದೆ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, “ಮೂರು ಮಕ್ಕಳ ತಾಯಿಯನ್ನು ಅತ್ಯಾಚಾರಗೈಯಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿಕೆ ನೀಡಿದ್ದ ಈ ಶಾಸಕ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸುದ್ದಿಯಾದವರು.
“ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಿಗೆ ಯುವಜನರ ಪೋಷಕರೇ ಕಾರಣವಾಗಿದ್ದು, 15 ವರ್ಷದವರೆಗೆ ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ತಮ್ಮ ಮಕ್ಕಳನ್ನು ನೋಡಿಕೊಳ್ಳುವುದು ಪೋಷಕರ ಕರ್ತವ್ಯವಾಗಿದೆ. ಆದರೆ ಅವರು ತಮ್ಮ ಮಕ್ಕಳನ್ನು ಸ್ವತಂತ್ರವಾಗಿರಲು ಬಿಡುತ್ತಾರೆ. ಅತ್ಯಾಚಾರಗಳಿಗೆ ಇದೇ ಮುಖ್ಯ ಕಾರಣ" ಎಂದು ಸುರೇಂದ್ರ ಸಿಂಗ್ ಹೇಳಿದ್ದಾರೆ.
ಮಕ್ಕಳಿಗೆ ಪೋಷಕರು ಮೊಬೈಲನ್ನೂ ನೀಡಬಾರದು ಎಂದೂ ಅವರು ಹೇಳಿದರು.
Next Story





