ಶಿರಸಿ: ಕಾಂಗ್ರೆಸ್ ಅಭ್ಯರ್ಥಿ, ಉದ್ಯಮಿ ಭೀಮಣ್ಣ ನಾಯ್ಕ ಮನೆ ಮೇಲೆ ಐಟಿ ದಾಳಿ
ಶಿರಸಿ, ಮೇ 2: ಜಿಲ್ಲೆಯ ಖ್ಯಾತ ಉದ್ಯಮಿ ಹಾಗೂ ಶಿರಸಿ-ಸಿದ್ದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಅವರ ಮನೆಯ ಮೇಲೆ ಮಂಗಳವಾರ ರಾತ್ರಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಶಿರಸಿಯ ಅಯ್ಯಪ್ಪ ನಗರದ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಿಢೀರ್ ದಾಳಿ ನಡೆಸಿದ್ದು, ಉದ್ಯಮಿ ಆಗಿರುವ ಭೀಮಣ್ಣ ನಾಯ್ಕ್ ಗೆ ಸಂಬಂಧಿಸಿದಂತೆ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಹುಬ್ಬಳ್ಳಿಯಿಂದ ಬಂದ 8 ಮಂದಿ ಅಧಿಕಾರಿಗಳ ತಂಡ ಭೀಮಣ್ಣ ನಾಯ್ಕ ಮನೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಈ ಸಂದರ್ಭ ಭೀಮಣ್ಣ ಸಿದ್ದಾಪುರ ತಾಲ್ಲೂಕಿನ ಹಳ್ಳಿಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.
Next Story