ಪ್ರಮೋದ್ ಮಧ್ವರಾಜ್‌ರಿಂದ ಕಾರ್ಯಕರ್ತರ ನಿರ್ಲಕ್ಷ್ಯ : ರಘುಪತಿ ಭಟ್

ಉಡುಪಿ, ಮೇ 2: ಪ್ರಮೋದ್ ಮಧ್ವರಾಜ್ ಶಾಸಕರಾಗಿದ್ದ ಅವಧಿಯಲ್ಲಿ ತೋರಿದ ಅಗೌರವ ಹಾಗೂ ನಿರ್ಲಕ್ಷದಿಂದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ವನ್ನು ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇದು ಚುನಾವಣೆಗೆ ನಿಲ್ಲುವ ರಾಜಕೀಯ ನಾಯಕರಿಗೆ ಒಂದು ಪಾಠ ಎಂದು ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ರಘುಪತಿ ಭಟ್ ಹೇಳಿದ್ದಾರೆ.
ಉಡುಪಿ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳುವ ಸಮಾರಂಭದಲ್ಲಿ ಅವರು ಮಾತನಾಡುತಿ ದ್ದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡ ಬಿರ್ತಿ ರಾಜೇಶ್ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಬಿಜೆಪಿ ಮುಖಂಡರಾದ ದಿನಕರ ಬಾಬು, ಪ್ರಭಾಕರ ಪೂಜಾರಿ, ಪ್ರತಾಪ್ ಹೆಗ್ಡೆ, ಎ.ರತ್ನಾಕರ್, ಸಂತೋಷ್ ಹೆಗ್ಡೆ, ಅಶೋಕ್, ಪೃಥ್ವಿರಾಜ್ ಹೆಗ್ಡೆ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.
ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು.
Next Story





