Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಶಿವಸೇನಾ ಅಭ್ಯರ್ಥಿಯನ್ನು...

ಉಡುಪಿ: ಶಿವಸೇನಾ ಅಭ್ಯರ್ಥಿಯನ್ನು ಬೆಂಬಲಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ3 May 2018 10:36 PM IST
share

ಉಡುಪಿ, ಮೇ 3: ಹಿಂದೂಗಳ ಸುರಕ್ಷತೆಗಾಗಿ ಡೋಂಗಿ ಹಿಂದುತ್ವವಾದಿಗಳನ್ನು ದೂರವಿಟ್ಟು ಈ ಬಾರಿ ಶಿವಸೇನಾ ಅಭ್ಯರ್ಥಿಗಳನ್ನು ಬೆಂಬಲಿಸಿ ಮತ ನೀಡುವಂತೆ ಶಿವಸೇನಾ ಕರಾವಳಿ ಕರ್ನಾಟಕದ ಅಧ್ಯಕ್ಷ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಿವಸೇನಾ ಅಭ್ಯರ್ಥಿ ಮಧುಕರ ಮುದ್ರಾಡಿ ಮತದಾರ ರಲ್ಲಿ ವಿನಂತಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ವಿವಿದೆಡೆಗಳಲ್ಲಿ ಈ ಬಾರಿ ಒಟ್ಟು 40 ಮಂದಿ ಶಿವಸೇನಾ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ ಎಂದರು. ಹಿಂದುತ್ವವನ್ನು ಕೇವಲ ಚುನಾವಣೆಗಾಗಿ ಬಳಸಿ ಬಳಿಕ ಹಿಂದೂಗಳನ್ನು ಕಡೆಗಣಿಸುವ ಬಿಜೆಪಿ ಇಂದು ಇನ್ನೊಂದು ಕಾಂಗ್ರೆಸ್ ಆಗಿ ಹೋಗಿದೆ ಎಂದರು.

ದೇಶದಲ್ಲಿ ಹಿಂದುತ್ವಕ್ಕಾಗಿ ಹೋರಾಡಿದ ಪ್ರವೀಣ್‌ಬಾಯ್ ತೊಗಾಡಿಯಾ, ಪ್ರಮೋದ್ ಮುತಾಲಿಕ್, ಎಲ್.ಕೆ. ಅಡ್ವಾಣಿ ಅವರು ಮಾಡಿದ ತಪ್ಪಾದರೂ ಏನು ಎಂದು ಪ್ರಶ್ನಿಸಿದರು. ಉಡುಪಿ ಕ್ಷೇತ್ರದಲ್ಲಿ ಎರಡು ಪ್ರಮುಖ ರಾಜಕೀಯ ಪಕ್ಷಗಳು ಕಳಂಕಿತರಿಗೆ ಟಿಕೆಟ್ ನೀಡಿವೆ. ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ಎರಡು ಸಲ ನಿಂತು ಗೆದ್ದಾಗಲೂ ಶಾಸಕರಾಗಿ ಉಡುಪಿಯ ಘನತೆಯನ್ನು ಹಾಳು ಮಾಡಿದ್ದಾರೆ. ಕ್ಷೇತ್ರದ ಹೆಸರಿಗೆ ಕಳಂಕ ತಂದಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಇತ್ತೀಚೆಗೆ ಅವ್ಯವಹಾರದ ಆರೋಪ ಮಾಡಲಾಗಿದೆ ಎಂದು ಮಧುಕರ ಮುದ್ರಾಡಿ ತಿಳಿಸಿದರು.

ಉಡುಪಿಯಲ್ಲಿ ತನ್ನ ಸ್ಪರ್ಧೆಗೆ ಶ್ರೀರಾಮಸೇನೆ ಸಂಪೂರ್ಣ ಬೆಂಬಲ ನೀಡುತ್ತಿದೆ. ಶೀಘ್ರವೇ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ಶ್ರೀಸಿದ್ಧಲಿಂಗ ಸ್ವಾಮೀಜಿ ತನ್ನ ಪರವಾಗಿ ಪ್ರಚಾರಕ್ಕೆ ಬರಲಿದ್ದಾರೆ. ಕ್ಷೇತ್ರದ ಯುವ ಮತದಾರರ ಒಲವು ತಮ್ಮ ಪರವಾಗಿ ಇದೆ ಎಂದು ಮಧುಕರ ಮುದ್ರಾಡಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಆನಂದ ಶೆಟ್ಟಿ, ಜಿಲ್ಲಾಧ್ಯಕ್ಷ ಗೌತಮ್ ಪ್ರಭು, ರಾಮಸೇನೆಯ ಜಿಲ್ಲಾಧ್ಯಕ್ಷ ದಿನೇಶ್ ಪಾಂಗಾಳ, ಶಿವಸೇನೆ ವಕ್ತಾರ ಜಯರಾಮ ಎ.ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X