Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಣಕ್ಕಾಗಿ ಮತಗಳನ್ನು ಮಾರಿಕೊಳ್ಳಬೇಡಿ :...

ಹಣಕ್ಕಾಗಿ ಮತಗಳನ್ನು ಮಾರಿಕೊಳ್ಳಬೇಡಿ : ನಟ ಹುಚ್ಚ ವೆಂಕಟ್ ಕರೆ

ವಾರ್ತಾಭಾರತಿವಾರ್ತಾಭಾರತಿ3 May 2018 11:57 PM IST
share
ಹಣಕ್ಕಾಗಿ ಮತಗಳನ್ನು ಮಾರಿಕೊಳ್ಳಬೇಡಿ : ನಟ ಹುಚ್ಚ ವೆಂಕಟ್ ಕರೆ

ಮಡಿಕೇರಿ, ಮೇ.3 :ಮತದಾನದ ಮೂಲಕ ಈ ನಾಡಿನ ಭವಿಷ್ಯ ಬರೆಯುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದ್ದು, ಹಣ, ಆಮಿಷಗಳಿಗಾಗಿ ಮತಗಳನ್ನು ಮಾರಿಕೊಳ್ಳಬೇಡಿ ಎಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಕ್ಷೇತರ ಅಭ್ಯರ್ಥಿ ಹಾಗೂ ನಟ ಹುಚ್ಚ ವೆಂಕಟ್ ಕರೆ ನೀಡಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆಯ ಹಂತದಲ್ಲಿ ಆಮಿಷಗಳಿಗೆ ಯಾರು ತಮ್ಮನ್ನು ತಾವು ಮಾರಿಕೊಳ್ಳುತ್ತಾರೋ, ಅವರು ನನ್ನ ಎಕ್ಕಡಕ್ಕೆ ಸಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣೆಯ ಸಂದರ್ಭ ಮತಗಳಿಗಾಗಿ ಚುನಾವಣಾ ಆಯೋಗ ನಿಗದಿ ಮಾಡಿರುವ 28 ಲಕ್ಷ ರೂ.ಗಳಷ್ಟು ಹಣವನ್ನು ನಾನು ಪ್ರಚಾರಕ್ಕಾಗಿ ಖರ್ಚು ಮಾಡಲಾರೆ. ವೇದಿಕೆ ಹತ್ತಿ ಪ್ರಚಾರವನ್ನು ಕೂಡ ಮಾಡುವುದಿಲ್ಲವೆಂದ ಹುಚ್ಚ ವೆಂಕಟ್, ಚುನಾವಣೆಗೆಂದು ಹಣವನ್ನು ವ್ಯಯ ಮಾಡುವ ಬದಲು ಅದನ್ನು ಸಮಾಜಕ್ಕೆ, ಬಡ ಜನರಿಗೆ ವಿನಿಯೋಗಿಸುವುದು ಸೂಕ್ತವೆಂದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋತರೆ ಮುಂದಿನ ಬಾರಿ ಮಂಡ್ಯದಿಂದ ಲೋಕಸಭಾ ಚುಣಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದರು.

ಚುನಾವಣೆಯನ್ನು ಎದುರಿಸಲು ಇತರರು ಮಾಡುವಂತೆ ನಾನು ಕುಕ್ಕರ್, ಹಣ, ಮದ್ಯ, ಸೀರೆಯನ್ನು ಮತದಾರರಿಗೆ ನೀಡಲಾರೆ. ಇದರ ಬದಲಿಗೆ  ಜನರ ಸೇವೆಯ ಮೂಲಕ ಈ ಸಮಾಜಕ್ಕೆ ನನ್ನ ಬೆವರು ಮತ್ತು ರಕ್ತವನ್ನು ನೀಡುತ್ತೇನೆ. ನನ್ನ ಬಗ್ಗೆ ನಂಬಿಕೆ ಇದ್ದರೆ ಮತ ಹಾಕುತ್ತಾರೆ. ಇಲ್ಲವೆಂದರೂ ಸಾಮಾಜಿಕ ಕಳಕಳಿಯಿಂದ ಹಿಂದೆ ಸರಿಯುವುದಿಲ್ಲವೆಂದರು.

ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಾನು, ತಂದೆಯ ಪಾದರಕ್ಷೆಯನ್ನೆ ನನ್ನ ಚುನಾವಣಾ ಚಿಹ್ನೆಯಾಗಿ ಮಾಡಿಕೊಂಡಿರುವುದಾಗಿ ಹುಚ್ಚ ವೆಂಕಟ್  ಸ್ಪಷ್ಟಪಡಿಸಿದರು.

ಪ್ರಕಾಶ್ ರೈಗೆ ಕೆಲಸವಿಲ್ಲ
ನಟ ಪ್ರಕಾಶ್ ರೈಗೆ ಮಾಡಲು ಕೆಲಸವಿಲ್ಲದ ಕಾರಣ ದೇಶದ ಪ್ರಧಾನಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿ ಶ್ರಮ ಪಟ್ಟು ಕಾರ್ಯ ನಿರ್ವಹಿಸುವಾಗ ಅವರನ್ನು ತುಳಿಯುವ ಕೆಲಸ ಮಾಡಬಾರದು. ಪ್ರಧಾನಿ ಮೋದಿಯವರ ಬಗ್ಗೆ ಮಾತನಾಡಬೇಕಾದರೆ ಯೋಗ್ಯತೆ ಇರುಬೇಕು ಎಂದು ಹುಚ್ಚ ವೆಂಕಟ್ ಇದೇ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X