Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸೌಹಾರ್ದ ಮಂಗಳೂರು ’ ಸಿಪಿಐ(ಎಂ)...

‘ಸೌಹಾರ್ದ ಮಂಗಳೂರು ’ ಸಿಪಿಐ(ಎಂ) ಪ್ರಣಾಳಿಕೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ4 May 2018 8:03 PM IST
share
‘ಸೌಹಾರ್ದ ಮಂಗಳೂರು ’ ಸಿಪಿಐ(ಎಂ) ಪ್ರಣಾಳಿಕೆ ಬಿಡುಗಡೆ

ಮಂಗಳೂರು, ಮೇ 4: ಸ್ವಚ್ಛ, ಸುಂದರ, ಸಮೃದ್ಧ ಸೌಹಾರ್ದ ಮಂಗಳೂರು ಎಂಬ ಧ್ಯೇಯ ದೊಂದಿಗೆ ಸಿಪಿಐ (ಎಂ) ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಕುಮಾರ್ ಬಜಾಲ್ ಪ್ರಣಾಳಿಕೆಯನ್ನು ಸುದ್ದಿಗೋಷ್ಠಿಯಲ್ಲಿಂದು ಬಿಡುಗಡೆಗೊಳಿಸಿದ್ದಾರೆ.

ಚುನಾವಣಾ ಪ್ರಣಾಳಿಕೆಯ ಜೊತೆಗೆ ಎಡಿಬಿ-ಕುಡ್ಸೆಂಪ್ ಯೋಜನೆಯಲ್ಲಿ 360 ಕೋಟಿ ರೂ ಅವ್ಯವಹಾರದ ತನಿಖೆಯನ್ನು ನಗರಾಭಿವೃದ್ಧಿ ಸಚಿವ ರೋಶನ್‌ಬೇಗ್ ಸಿಓಟಿ ತನಿಖೆಗೆ ಒಪ್ಪಿಸುವುದಾಗಿ ತಿಳಿಸಿದ ಬಳಿಕ ಅವರ ಮೇಲೆ ಒತ್ತಡ ತರುವ ಮೂಲಕ ಸಿಒಡಿ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಈ ರೀತಿಯ ಭ್ರಷ್ಟಾಚಾರ ಪ್ರಕರಣಗಳು, ನಗರದ ಮಾರುಕಟ್ಟೆಗಳ ಅಭಿವೃದ್ಧಿಯಾಗದೆ ಇರುವುದು. ಬಸ್ ನಿಲ್ಧಾಣಗಳ ಅಭಿವೃದ್ಧಿ ಕುಂಠಿತವಾಗಿರುವುದು. ಸುಮಾರು 10 ಸಾವಿರದಷ್ಟು ನಿವೇಶನ ರಹಿತರಿದ್ದರೂ ಅವರಿಗೆ ನಿವೇಶನ ಒದಗಿಸುವ ಕೆಲಸ ಆಗಿಲ್ಲ. ನಗರದಲ್ಲಿ ಪಾರ್ಕಿಂಗ್ ರೆನ್ ನೆನೆಗುದಿಗೆ ಬಿದ್ದಿದೆ ಈ ಎಲ್ಲಾ ಅಂಶಗಳು ಈ ಬಾರಿಯ ಚುನಾವಣೆಯಲ್ಲಿ ನಿರ್ಣಾಯಕವಾಗಲಿದೆ ಎಂದು ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

‘ಸೌಹಾರ್ದ ಮಂಗಳೂರು ’ಪ್ರಣಾಳಿಕೆ:- ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿ, ಖಾಸಗಿ ಅಸ್ಪತ್ರೆಗಳ ದರ ನಿಯಂತ್ರಣಕ್ಕೆ ಕ್ರಮ, ನಗರ ಪ್ರದೇಶಗಳಲ್ಲಿ ಒಳಚರಂಡಿ, ಮೂಲಭೂತ ಸೌಲಭ್ಯಗಳ ನಿರ್ಮಾಣ, ನಗರದಲ್ಲಿ ಪಾರ್ಕಿಂಗ್ ಫುಟ್ ಪಾತ್ ನಿರ್ಮಾಣ, ಟ್ರಾಫಿಕ್ ಸಮಸ್ಯೆಗೆ ಪರಿಹಾರ, ಡೊನೇಶನ್ ಹಾವಳಿಗೆ ಕಡಿವಾಣ, ಎಡಿಬಿ -ಕುಡೆಂಪ್ 360 ಕೋಟಿ ರೂ ಹಗರಣದ ತನಿಖೆ ಮತ್ತು ತಪ್ಪಿತಸ್ಥಿರಿಗೆ ಶಿಕ್ಷೆ , ಮಾದಕ ದ್ರವ್ಯ ಜಾಲಕ್ಕೆ ಕಡಿವಾಣ, ಉದ್ಯೋಗ ಸೃಷ್ಟಿ, ಬೀಡಿ ಕಾರ್ಮಿಕರ ನ್ಯಾಯಯುತ ಬೇಡಿಕೆಗೆ ಪರಿಹಾರ, ನಿರ್ಮಾಣ ಕ್ಷೇತ್ರದ ಕಾರ್ಮಿಕರಿಗೆ ಸೌಲಭ್ಯ ಪಡೆಯಲು ನಿಯಮಗಳ ಸರಳೀಕರಣ, ನಿರಂತರ ನೀರು ಪೂರೈಕೆ, ಪ್ರತಿ ವಾರ್ಡ್‌ಗೆ ಸುಸಜ್ಜಿತ ಸಮುದಾಯ ಆರೋಗ್ಯ ಕೇಂದ್ರ, ಜೂಜು, ಸ್ಕಿಲ್ ಗೇಮ್  ಮೇಲೆ ಕಡಿವಾಣ, ತ್ಯಾಜ್ಯ ವಿಲೇವಾರಿ ತೆರಿಗೆ ರದ್ದು, ವಸತಿ ರಹಿತರಿಗೆ ಮನೆ, ಸರಕಾರಿ ಜಾಗದಲ್ಲಿ ವಾಸಿಸುವವರಿಗೆ ಹಕ್ಕು ಪತ್ರ, ಸ್ವಯಂ ಗೋಷಿತ ಆಸ್ತಿ ತೆರಿಗೆ ರದ್ದು, ಪರಿಸರ ಸ್ನೇಹಿ ಕೈಗಾರಿಕೆಗಳ ಸ್ಥಾಪನೆ ಯೊಂದಿಗೆ ಉದ್ಯೋಗ ಸೃಷ್ಟಿ ಮೊದಲಾದ ಅಂಶಗಳನ್ನು ಪ್ರಣಾಳಿಕೆ ಹೊಂದಿದೆ.

ಮಂಗಳೂರಿನ ಪ್ರಮುಖ ವಾಣಿಜ್ಯ ಕೇಂದ್ರವಾದ ಸೆಂಟ್ರಲ್ ಮಾರ್ಕೆಟ್, ಮೀನುಗಾರಿಕಾ ಧಕ್ಕೆ ಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಾ ಬರಲಾಗಿದೆ. ಜಿಲ್ಲಾ ಆಸ್ಪತ್ರೆಯನ್ನು ಖಾಸಗಿಯವರ ಕೈಯಿಂದ ಮುಕ್ತಗೊಳಿಸಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ ಗುರಿಯಾಗಿದೆ ಎಂದು ಸುನಿಲ್ ಕುಮಾರ್ ಬಜಾಲ್ ತಿಳಿಸಿದ್ದಾರೆ.

ಮಂಗಳೂರಿನ ಜನತೆಯ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಾ ಬಂದಿರುವ ಸಿಪಿಐ (ಎಂ)ನ್ನು ಜನ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ಎರಡರಿಂದಲೂ ಭ್ರಮ ನಿರಸನಗೊಂಡು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಜನರು ಬದಲಾವಣೆ ಮತ್ತು ಹೊಸ ಮುಖವನ್ನು ಬಯಸುತ್ತಿರುವುದನ್ನು ಪ್ರಚಾರದ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ಆದುದರಿಂದ ಈ ಬಗ್ಗೆ ಕ್ಷೇತ್ರದಲ್ಲಿ ಸಿಪಿಐ(ಎಂ)ಗೆಲುವಿಗೆ ಪೂರಕ ವಾತವರಣ ನಿರ್ಮಾಣವಾಗಿದೆ ಎಂದು ಸುನಿಲ್ ಬಜಾಲ್ ತಿಳಿಸಿದ್ದಾರೆ.

ಸುದ್ದಿಗೊಷ್ಠಿಯಲ್ಲಿ ಜೆ.ಬಾಲಕೃಷ್ಣ ಶೆಟ್ಟಿ,ಸಂತೋಷ್ ಬಜಾಲ್,ಜಯಂತಿ ಬಿ.ಶೆಟ್ಟಿ,ಸಂತೋಷ್ ಶಕ್ತಿ ನಗರ,ಯೋಗೀಶ್ ಜಪ್ಪಿನ ಮೊಗರು ಮೊದಲಾದದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X