Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ನವಜಾತ ಗಂಡು ಶಿಶು ಮಾರಾಟ...

ಶಿವಮೊಗ್ಗ: ನವಜಾತ ಗಂಡು ಶಿಶು ಮಾರಾಟ ಪ್ರಕರಣ; ಇಬ್ಬರು ಮಹಿಳೆಯ ಬಂಧನ

ವಾರ್ತಾಭಾರತಿವಾರ್ತಾಭಾರತಿ4 May 2018 10:01 PM IST
share
ಶಿವಮೊಗ್ಗ: ನವಜಾತ ಗಂಡು ಶಿಶು ಮಾರಾಟ ಪ್ರಕರಣ; ಇಬ್ಬರು ಮಹಿಳೆಯ ಬಂಧನ

ಶಿವಮೊಗ್ಗ, ಮೇ 4 : ಇಲ್ಲಿನ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಜನಿಸಿದ ನವಜಾತ ಗಂಡು ಶಿಶುವನ್ನು ಬೆಂಗಳೂರಿನ ದಂಪತಿಗೆ 30 ಸಾವಿರ ರೂ.ಗೆ ಮಾರಾಟ ಮಾಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುವ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 

ಹೋಟೆಲ್‍ವೊಂದರಲ್ಲಿ ಕೆಲಸ ಮಾಡುವ, ಶಿವಮೊಗ್ಗದ ಶಾಂತಿನಗರದ ನಿವಾಸಿ ಭಾಗ್ಯಮ್ಮ (45) ಹಾಗೂ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಭದ್ರಾವತಿಯ ನಿವಾಸಿ ವಾಣಿ (40) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಮಗು ಖರೀದಿಸಿದ್ದ ಬೆಂಗಳೂರಿನ ಜೆ.ಪಿ.ನಗರದ ದಂಪತಿ ವಿಳಾಸವನ್ನು ಪತ್ತೆ ಹಚ್ಚಿದ್ದು, ಅವರಿಂದ ಮಗುವನ್ನು ವಶಕ್ಕೆ ಪಡೆಯುವ ಕೆಲಸವನ್ನು ಪೊಲೀಸರು ನಡೆಸಿದ್ದಾರೆ. ಈಗಾಗಲೇ ದಂಪತಿಯು ಮಗುವಿನೊಂದಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಮಾಹಿತಿ ಲಭ್ಯವಾಗಿದೆ. 

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಜಿ.ಸುರೇಶ್ ಮತ್ತವರ ಸಿಬ್ಬಂದಿಗಳಾದ ಕಾನೂನು ಪರಿವೀಕ್ಷಣಾಧಿಕಾರಿ ವಾಣಿಶ್ರೀ, ಸಾಂಸ್ಥಿಕ ರಕ್ಷಣಾಧಿಕಾರಿ ಗಾಯಿತ್ರಿಯವರು ಮಗು ಮಾರಾಟ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾದ ಅಧಿಕಾರಿ-ಸಿಬ್ಬಂದಿಗಳಾಗಿದ್ದಾರೆ. ಮಗು ಮಾರಾಟಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇದರ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. 

ಪ್ರಕರಣದ ಹಿನ್ನೆಲೆ: ಶಿವಮೊಗ್ಗದ ಶಾಂತಿನಗರದ ನಿವಾಸಿ, ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುವರಾಜೇಶ್ವರಿ ಕೋಂ ಅಪ್ಪಣ್ಣ (28) ಎಂಬ ಮಹಿಳೆಗೆ ಎಪ್ರಿಲ್ 12 ರಂದು ಹೆರಿಗೆ ನೋವು ಕಾಣಿಸಿಕೊಂಡಿತ್ತು.  ಮನೆಯಲ್ಲಿ ಯಾರು ಇಲ್ಲದ ಕಾರಣದಿಂದ ಅದೇ ಏರಿಯಾದ ನಿವಾಸಿ ಭಾಗ್ಯಮ್ಮರವರು ರಾಜೇಶ್ವರಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. 

ರಾಜೇಶ್ವರಿಗೆ ಹೆರಿಗೆಯಾಗಿದ್ದು, ಅವರಿಗೆ ಪ್ರಜ್ಞೆ ಬಂದ ವೇಳೆ ಜನಿಸಿದಾಗಲೇ ಮಗು ಮೃತಪಟ್ಟಿತ್ತು ಎಂದು ಜೊತೆಗೆ ಬಂದ ಆರೋಪಿಗಳಾದ ಭಾಗ್ಯಮ್ಮ ಹಾಗೂ ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್ ವಾಣಿಶ್ರೀಯವರು ತಿಳಿಸಿದ್ದರು. ಇವರ ಮಾತನ್ನು ರಾಜೇಶ್ವರಿ ನಂಬಿದ್ದರು. ತದನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದು, ತುಮಕೂರಿನಲ್ಲಿರುವ ಸಂಬಂಧಿ ಮನೆಗೆ ತೆರಳಿ ವಿಶ್ರಾಂತಿ ಪಡೆದುಕೊಂಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಶಿವಮೊಗ್ಗಕ್ಕೆ ಹಿಂದಿರುಗಿದ್ದರು ಎನ್ನಲಾಗಿದೆ. 

ಮಾಹಿತಿ: ಇತ್ತೀಚೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಗೆ ಅನಾಮಧೇಯ ಕರೆಯೊಂದು ಬಂದಿದ್ದು, ಮಗು ಮಾರಾಟ ಮಾಡಿರುವ ಕುರಿತಂತೆ ಸವಿವರವಾದ ಮಾಹಿತಿಯನ್ನು ವ್ಯಕ್ತಿಯೋರ್ವರು ನೀಡಿದ್ದರು. ಇದರ ಆಧಾರದ ಮೇಲೆ ಮಕ್ಕಳ ರಕ್ಷಣಾಧಿಕಾರಿ ಹಾಗೂ ಅವರ ತಂಡ ಶಾಂತಿನಗರದ ರಾಜೇಶ್ವರಿ ಮನೆಗೆ ತೆರಳಿ ಮಾಹಿತಿ ಕಲೆ ಹಾಕಿತ್ತು. ಅವರು ನೀಡಿದ್ದ ಮಾಹಿತಿಯನುಸಾರ ಆರೋಪಿ ಭಾಗ್ಯಮ್ಮರನ್ನು ವಿಚಾರಣೆ ನಡೆಸಿದ ವೇಳೆ, ಮಗು ಮಾರಾಟ ಮಾಡಿರುವ ವಿಷಯ ಬಾಯ್ಬಿಟ್ಟಿದ್ದಳು. 

ಆಸ್ಪತ್ರೆಯ ಸೆಕ್ಯುರಿಟಿ ಗಾರ್ಡ್ ಜೊತೆ ಸೇರಿಕೊಂಡು ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಅಶ್ವಿನ್‍ಕುಮಾರ್ ದಂಪತಿಗೆ 30 ಸಾವಿರ ರೂ. ಪಡೆದು ಮಗುವನ್ನು ಮಾರಾಟ ಮಾಡಿದ್ದಾಗಿ ಭಾಗ್ಯಮ್ಮ ತಿಳಿಸಿದ್ದು, ದಂಪತಿಯ ದೂರವಾಣಿ ಸಂಖ್ಯೆಯನ್ನು ಕೂಡ ತಿಳಿಸಿದ್ದಳು. ಇದರ ಆಧಾರದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮಗು ಖರೀದಿಸಿದ್ದ ದಂಪತಿಯನ್ನು ಸಂಪರ್ಕಿಸಿ, ಮಗುವನ್ನು ಕರೆತರುವಂತೆ ಸೂಚಿಸಿದ್ದರು. ಜೊತೆಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆರೋಪಿತ ಮಹಿಳೆಯರಿಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ. 

ನಾಲ್ವರ ಮೇಲೆ ಕೇಸ್ ದಾಖಲು 

ಮಗು ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಗು ಮಾರಾಟ ಮಾಡಿದ್ದ ಇಬ್ಬರು ಮಹಿಳೆಯರು ಹಾಗೂ ಮಗು ಖರೀದಿಸಿದ್ದ ಬೆಂಗಳೂರಿನ ದಂಪತಿಯ ವಿರುದ್ದ ಪ್ರಕರಣ ದಾಖಲಾಗಿದೆ. ಮಗು ಮಾರಾಟ ಮಾಡಿದ್ದ ಆಪಾದಿತೆಯರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. 

ಮಗು ಮಾರಾಟ ಜಾಲದ ಶಂಕೆ?

ಈ ಹಿಂದೆಯೂ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಗು ಮಾರಾಟ ಹಾಗೂ ನಾಪತ್ತೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಆಸ್ಪತ್ರೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡ ನಂತರ ಇತ್ತೀಚೆಗೆ ಈ ದಂಧೆಗೆ ಕಡಿವಾಣ ಬಿದ್ದಿತ್ತು. ಆದರೆ ಗುಪ್ತವಾಗಿ ಮಗು ಮಾರಾಟ ಜಾಲ ಕಾರ್ಯಾಚರಿಸುತ್ತಿರುವ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದವು. ಇದೀಗ ಆ ಆರೋಪ ಸಾಬೀತುಪಡಿಸುವಂತೆ ಮಗು ಮಾರಾಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಗು ಮಾರಾಟದ ಹಿಂದೆ ದೊಡ್ಡ ಜಾಲವೇ ಕಾರ್ಯಾಚರಿಸುತ್ತಿರುವ ಹಾಗೂ ಈಗಾಗಲೇ ಸಾಕಷ್ಟು ಮಕ್ಕಳನ್ನು ಮಾರಾಟ ಮಾಡಲಾಗಿರುವ ಶಂಕೆಗಳು ವ್ಯಕ್ತವಾಗುತ್ತಿವೆ. ಪೊಲೀಸರ ನಿಷ್ಪಕ್ಷಪಾತ ತನಿಖೆಯಿಂದಷ್ಟೆ ಸತ್ಯಾಂಶಗಳು ಬೆಳಕಿಗೆ ಬರಬೇಕಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X