ಮೈಸೂರು: ಮನುಗನಹಳ್ಳಿ ಚೆಕ್‍ಪೋಸ್ಟ್ ಬಳಿ 50 ಲಕ್ಷ ರೂ. ಹಣ ಪತ್ತೆ; ಪ್ರಕರಣ ದಾಖಲು

ಮೈಸೂರು,ಮೇ.4: ಮೈಸೂರು ತಾಲೂಕು ಮನುಗನಹಳ್ಳಿ ಚೆಕ್ ಪೋಸ್ಟ್ ಬಳಿ 50 ಲಕ್ಷ ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮೈಸೂರು-ಹುಣಸೂರು ರಸ್ತೆಯ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಮನುಗನಹಳ್ಳಿ ಚೆಕ್ ಪೋಸ್ಟ್ ಬಳಿ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ಈ ಹಣ ದೊರೆತಿದೆ.
ಬಸ್‍ನಲ್ಲಿ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಎಚ್ಚೆತ್ತ ಚೆಕ್ ಪೋಸ್ಟ್ ಸಿಬ್ಬಂದಿಗಳು, ಬಸ್‍ಗಳನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಕೆಎಸ್‍ಆರ್‍ಟಿಸಿ ಬಸ್ ನಲ್ಲಿ ತಪಾಸಣೆ ಮಾಡಿದಾಗ ಬ್ಯಾಗ್‍ವೊಂದರಲ್ಲಿ 50 ಲಕ್ಷ ರೂ. ಹಣ ಸಿಕ್ಕಿದೆ.
ಇಷ್ಟೊಂದು ಹಣ ಯಾರು-ಎಲ್ಲಿಗೆ ಸಾಗಿಸುತ್ತಿದ್ದರು ಎಂಬುವುದರ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಕೊಂಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Next Story





