Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಧಾನಿ ಮೋದಿ ದೇಶದಲ್ಲೇ ನಂ.1 ಮಹಾನ್...

ಪ್ರಧಾನಿ ಮೋದಿ ದೇಶದಲ್ಲೇ ನಂ.1 ಮಹಾನ್ ಸುಳ್ಳುಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ4 May 2018 11:20 PM IST
share
ಪ್ರಧಾನಿ ಮೋದಿ ದೇಶದಲ್ಲೇ ನಂ.1 ಮಹಾನ್ ಸುಳ್ಳುಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚನ್ನಗಿರಿ,ಮೇ.04: ಪ್ರಧಾನಿ ಮೋದಿಯವರು ಈ ದೇಶದಲ್ಲೇ ನಂ.1 ಮಹಾನ್ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಕಾಂಗ್ರೆಸ್ ಚನ್ನಗಿರಿ ತಾಲೂಕು ಸಂತೆಬೆನ್ನೂರು ಬ್ಲಾಕ್ ಚುನಾವಣಾ ಪ್ರಚಾರ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 'ಈ ದೇಶದ ಜನತೆಗೆ ಬಿಜೆಪಿ ಕೇಂದ್ರ ಸರ್ಕಾರದ ಪ್ರಧಾನಿ ಮೊದಿಯವರು ಕಳೆದ ನಾಲ್ಕು ವರ್ಷಗಳಿಂದ ಸುಳ್ಳನ್ನು ಹೇಳುತ್ತಾ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಜಮೀನಿನ ಡಿನೋಟಿಪಿಕೇಶನ್‍ ನಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿ ಜೈಲಿಗೆ ಹೋಗಿ ಬಂದಿರುವ ಸಂಗತಿ ಎಲ್ಲರಿಗೂ ತಿಳಿಸಿದೆ. ಆದರೆ, ಈ ಸಾವಿರಾರು ಕೋಟಿಗಳನ್ನು ಲೂಟಿ ಮಾಡಿರುವುದು ಮೋದಿಯವರ ಕುಮ್ಮಕ್ಕಿನಿಂದಲೇ ಎಂದು ಅವರು ನೇರವಾಗಿ ಆರೋಪ ಮಾಡಿದರು.

ಬಿಜೆಪಿ ಪಕ್ಷದ ಕತೆ ಒಂದು ರೀತಿ ಅಲಿಬಾಬಾ ಮತ್ತು 40 ಮಂದಿ ಕಳ್ಳರ ಕತೆಯಾಗಿದೆ. ಬಿಜೆಪಿ ನಾಯಕರು ಡೋಂಗಿ ರಾಜಕಾರಣ ಮಾಡುತ್ತಿದ್ದಾರೆ, ಇಂತಹ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ರಾಜ್ಯದ ಜನತೆ ಒಪ್ಪುವುದಿಲ್ಲ ಎಂದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ 5 ವರ್ಷಗಳಿಂದ ರಾಜ್ಯದ ಜನತೆಗೆ ಕೊಟ್ಟಂತಹ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಲಾಗಿದೆ. ಜೊತೆಗೆ ರಾಜ್ಯದ ದೀನ ದಲಿತರ ಮತ್ತು ಬಡವರ ಪರವಾದಂತಹ ಯೋಜನೆ ನೀಡಲಾಗಿದೆ. ಚನ್ನಗಿರಿ ಕ್ಷೇತ್ರದಲ್ಲಿ ವಡ್ನಾಳ್ ರಾಜಣ್ಣ ಅವರು ಸಾವಿರಾರು ಕೋಟಿಗಟ್ಟಲೆ ಅನುದಾನ ತರುವ ಮೂಲಕ ಕ್ಷೇತ್ರದ ಮತ್ತು ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಶ್ರಮವಹಿಸಿದೆ ಎಂದರು.

ಶಾಸಕ ವಡ್ನಾಳ್‍ ರಾಜಣ್ಣ ಮಾತನಾಡಿ, ಚನ್ನಗಿರಿ ಕ್ಷೇತ್ರದ ಇತಿಹಾಸದಲ್ಲೇ ಯಾರೊಬ್ಬರು ತರದಂತಹ ಅನುದಾನ ತಂದು ಕ್ಷೇತ್ರವನ್ನು ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಅದರಲ್ಲಿ ತಾಲೂಕಿನ ಜನತೆ ನೆಮ್ಮದಿಯಿಂದ ಬದುಕನ್ನು ಬದುಕಲು ಬೇಕಾದ 446 ಕೋಟಿ ವೆಚ್ಚದ ಸಾಸ್ವೆಹಳ್ಳಿ ಏತಾನೀರಾವರಿ ಯೋಜನೆ ನೀಡಿರುವ ಕೀರ್ತಿ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಕಳೆದ 5 ವರ್ಷಗಳಿಂದ ಮಾಡಿದಂತಹ ಅಭಿವೃದ್ಧಿ ಕೆಲಸಗಳೇ ಶ್ರೀರಕ್ಷೆಯಾಗಲಿದೆ ಎಂದರು.

ಈ ಸಂದರ್ಭ ಮಾಜಿ ಕೇಂದ್ರ ಸಚಿವ ಸಿಲಂ, ಜಿಪಂ ಸದಸ್ಯ ಎಂ. ಯೋಗೇಶ್,  ಜಿಲ್ಲಾ ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಶಶಿಕಲಾ, ತಾಲೂಕು ಅಧ್ಯಕ್ಷೆ ಉಮಾಬಸವರಾಜ್, ಬ್ಲಾಕ್ ಅಧ್ಯಕ್ಷ ಶ್ರೀನಿವಾಸ್, ಅಮಾನುಲ್ಲಾ, ಅಸಾದುಲ್ಲಾ, ಜಗಣ್ಣ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X