ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸೊರಕೆ

ಕಾಪು, ಮೇ 6: ಬಿಜೆಪಿ ಪಕ್ಷದ ಕಾರ್ಯಕರ್ತರು ಕಾಪು ಕ್ಷೇತ್ರದ ಬಗ್ಗೆ ಹಾಗೂ ಅಭಿವೃದ್ಧಿಯ ಕುರಿತು ಅಪಪ್ರಚಾರ ನಡೆಸುತ್ತಿದ್ದಾರೆ. ಕಾಪು ಕ್ಷೇತ್ರದ ಅಭಿವೃದ್ಧಿ ನಿಮ್ಮ ಕಣ್ಣ ಮುಂದೆಯೇ ಇದೆ. ಇದನ್ನು ಅರಿತುಕೊಂಡು ತಪ್ಪುಮಾಡದೇ ಮತ ಚಲಾಯಿಸಿ ಎಂದು ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಬೆಳಪುವಿನಲ್ಲಿ ಇಂದು ಮನೆ ಮನೆ ಮತ ಪ್ರಚಾರ ನಡೆಸಿ ಅವರು ಮಾತನಾ ಡುತ್ತಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜಹೀರ್, ನಿರಂಜನ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Next Story





