ಬೆಂಗಳೂರು: ಚುನಾವಣಾ ಪ್ರಕ್ರಿಯೆಗೆ ತಡೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು, ಮೇ 6: ವಿಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಕ್ರಿಯೆಗೆ ತಡೆ ನೀಡುವಂತೆ ಹಾಗೂ ಎಲ್ಲ ಅಭ್ಯರ್ಥಿಗಳ ನಾಮಪತ್ರ ಮರು ಪರಿಶೀಲನೆ ಮಾಡುವಂತೆ ಕೋರಿ ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಕೆ.ರವಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ರವಿವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರಕ್ಕೆ ಸುಮಾರು 18 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಎ.25ರಂದು ಚುನಾವಣಾ ಅಧಿಕಾರಿಗಳು ನಾಮಪತ್ರದ ಪರಿಶೀಲನೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಆರೋಪಿಸಿದರು.
ಕಾನೂನು ಪ್ರಕಾರ ನಾಮಪತ್ರಗಳನ್ನು ಪರಿಶೀಲಿಸಿದ ನಂತರ ಅಭ್ಯರ್ಥಿಗಳಿಗೆ ನೋಡಲು ಅವಕಾಶ ಮಾಡಿಕೊಡಬಹುದಿತ್ತು. ಆದರೆ, ನಾವು ಮನವಿ ಮಾಡಿದರೂ ಅದಕ್ಕೆ ಅವರು ಅವಕಾಶ ಕಲ್ಪಿಸಲಿಲ್ಲ. ಮರುದಿನವೇ ನಾನು ಮುಖ್ಯ ಚುನಾವವಣಾಧಿಕಾರಿಗೆ ಮನವಿ ಸಲ್ಲಿಸಿದೆ. ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಹೀಗಾಗಿ ನಾನು ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವೆ ಎಂದು ಅವರು ತಿಳಿಸಿದರು.
Next Story





