ಮಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆ

ಮಂಗಳೂರು, ಮೇ 6: ಮಂಗಳೂರು ನಗರ ಮತ್ತು ಹೊರ ವಲಯದಲ್ಲಿ ರವಿವಾರ ಸಂಜೆ ಹೊತ್ತಿಗೆ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಕೆಲವು ದಿನಗಳಿಂದ ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಜನತೆಗೆ ಇಂದು ಸಂಜೆ ಸುರಿದ ಅಕಾಲಿಕ ಮಳೆಯು ತಂಪೆರೆಗಿದೆ. ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇತ್ತು. ಸಂಜೆ 7 ಗಂಟೆಯ ಬಳಿಕ ನಗರದ ಕೆಲವು ಪ್ರದೇಶಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಒಂದು ತಾಸಿಗೂ ಹೆಚ್ಚು ಕಾಲ ಮಳೆಯಾಗಿದೆ.
Next Story





