ಹರಿಹರ: ಕಾಂಗ್ರೆಸ್ ಅಭ್ಯರ್ಥಿ ಎಸ್.ರಾಮಪ್ಪ ಪರ ಗುಲಾಂ ನಬಿ ಅಝಾದ್ ರೋಡ್ ಶೋ
ಹರಿಹರ,ಮೇ.06: ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಅಝಾದ್ ಅವರು ಹರಿಹರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ರಾಮಪ್ಪ ಪರ ಭಾನುವಾರ ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ಮೂಲಕ ಮತಯಾಚಿಸಿದರು.
ಹರಿಹರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗಾಂಧಿನಗರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್. ರಾಮಪ್ಪನವರ ಪರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂನಬಿ ಅಝಾದ್ ರವರು ಮತಯಾಚಿಸಿ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುತ್ತದೆ. ಕೇಂದ್ರದಲ್ಲಿ ಮೋದಿ ಸರ್ಕಾರದ ಯೋಜನೆಗಳು ಎಲ್ಲವೂ ಶೂನ್ಯವಾಗಿದೆ. ಕಾಂಗ್ರೆಸ್ ಬಡವರ ಕಾಳಜಿ ಪರ ಚಿಂತನೆ ಮಾಡುವ ಸರ್ಕಾರ. ಸಾಕಷ್ಟು ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಜಾರಿಗೆ ತಂದು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ. ಈ ಬಾರಿಯೂ ಕಾಂಗ್ರೆಸ್ ಗೆಲ್ಲಿಸಿ ನಿಮ್ಮ ಸೇವೆ ಮಾಡುವುದಕ್ಕೆ ಸಹಕರಿಸಿ. ಹರಿಹರ ವಿಧಾನಸಭಾ ಅಭ್ಯರ್ಥಿ ಎಸ್.ರಾಮಪ್ಪನವರನ್ನು ಮತದಾರರು ಅತ್ಯಂತ ಹೆಚ್ಚು ಮತಗಳಿಂದ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಎಸ್. ರಾಮಪ್ಪ, ಬಿ.ಕೆ. ಸೈಯದ್, ಅಬ್ದುಲ್ ಜಬ್ಬಾರ್, ನಾಗೇಂದ್ರಪ್ಪ, ಸಿಎನ್. ಹುಲಿಗೇಶ್ ಇದ್ದರು.





