Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಪ ರಾಷ್ಟ್ರಪತಿ ನಿರ್ಧಾರ ಪ್ರಶ್ನಿಸಿ...

ಉಪ ರಾಷ್ಟ್ರಪತಿ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದ ಕಾಂಗ್ರೆಸ್

ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಪದಚ್ಯುತಿ ನಿಲುವಳಿ ತಿರಸ್ಕಾರ

ವಾರ್ತಾಭಾರತಿವಾರ್ತಾಭಾರತಿ8 May 2018 12:17 PM IST
share
ಉಪ ರಾಷ್ಟ್ರಪತಿ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದ ಕಾಂಗ್ರೆಸ್

ಹೊಸದಿಲ್ಲಿ, ಮೇ 8: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪದಚ್ಯುತಿಗೆ ಆಗ್ರಹಿಸಿ ಕಾಂಗ್ರೆಸ್ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸನ್ನು ತಿರಸ್ಕೃರಿಸಿದ್ದ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯ ನಾಯ್ಡು ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಮಂಗಳವಾರ ವಾಪಸ್ ಪಡೆದಿದ್ದಾರೆ.

ಕಾಂಗ್ರೆಸ್‌ನ ಇಬ್ಬರು ರಾಜ್ಯಸಭಾ ಸದಸ್ಯರಾದ ಪಂಜಾಬ್‌ನ ಪ್ರತಾಪ್ ಸಿಂಗ್ ಬಾಜ್ವಾ ಹಾಗೂ ಗುಜರಾತ್‌ನ ಆಮೀ ಹರ್ಷದೇವ್ ಯಾಜ್ನಿಕ್ ರಾಜ್ಯಸಭೆಯ ಸಭಾಪತಿ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ನ್ಯಾ. ಎ.ಕೆ. ಸಿಕ್ರಿ, ನ್ಯಾ.ಎಸ್.ಐ. ಬೋಬ್ಡೆ, ಎನ್.ವಿ. ರಮಣ, ನ್ಯಾ. ಅರುಣ್ ಕೆ.ಮಿಶ್ರಾ ಹಾಗೂ ಆದಶ್ ಕೆ. ಗಿರಿ ಅವರನ್ನೊಳಗೊಂಡ ಪಂಚ ಸದಸ್ಯರ ನ್ಯಾಯ ಪೀಠ ಅರ್ಜಿಯ ವಿಚಾರಣೆ ನಡೆಸಬೇಕಾಗಿತ್ತು. ಅರ್ಜಿಯ ವಿಚಾರಣೆ ನಡೆಸಲು ಪಂಚ ಸದಸ್ಯರ ನ್ಯಾಯಪೀಠ ರಚನೆಗೆ ನಿರ್ದೇಶಿಸಿರುವ ಆಡಳಿತಾತ್ಮಕ ವಿವರವನ್ನು ನೀಡುವಂತೆ ಕಪಿಲ್ ಸಿಬಲ್ ನ್ಯಾಯಾಲಯವನ್ನು ವಿನಂತಿಸಿದರು. ಸಿಬಲ್ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ ಕಾರಣ ಸಿಬಲ್ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.

ಇಂತಹ ಆದೇಶ ನೀಡಿದ್ದು ಯಾರು: ಸಿಬಲ್ ಪ್ರಶ್ನೆ

  ‘‘ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಪದಚ್ಯುತಿಗೆ ಆಗ್ರಹಿಸಿ ಸಲ್ಲಿಸಿದ್ದ ನಿಲುವಳಿಯನ್ನು ತಿರಸ್ಕರಿಸಿದ್ದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ನಿರ್ಧಾರ ಪ್ರಶ್ನಿಸಿ ನಾವು ನಿನ್ನೆ ಅರ್ಜಿ ಸಲ್ಲಿಸಿದ್ದೆವು. ಇಂದು ಅರ್ಜಿ ವಿಚಾರಣೆಗೆ ಬಂದಿತ್ತು. ಆದರೆ, ಐವರು ನ್ಯಾಯಾಧೀಶರ ಪೀಠ ನಮ್ಮ ಅರ್ಜಿ ವಿಚಾರಣೆ ನಡೆಸಲಿದೆ ಎಂದು ನಿನ್ನೆ ಸಂಜೆ ನಮಗೆ ತಿಳಿಸಲಾಗಿತ್ತು. ಇಂತಹ ಆದೇಶ ಯಾರು ನೀಡಿದ್ದು?, ಆದೇಶದಲ್ಲಿ ಏನಿದೆ? ಎಂದು ಕಪಿಲ್ ಸಿಬಲ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X