ಬ್ಯಾರಿ ಅಕಾಡಮಿ : ‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಗೆ ಲೇಖನಗಳ ಆಹ್ವಾನ

ಮಂಗಳೂರು, ಮೇ 8: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬ್ಯಾರಿ ಭಾಷೆ, ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಗಾಗಿ ಪ್ರತೀ 2 ತಿಂಗಳಿಗೊಮ್ಮೆ ಪ್ರಕಟಿಸುವ ‘ಬೆಲ್ಕಿರಿ’ ದ್ವೈಮಾಸಿಕ ಸಂಚಿಕೆಯಲ್ಲಿ ಪ್ರಕಟಿಸಲು ಬ್ಯಾರಿ ಇತಿಹಾಸ/ಸಂಶೋಧನಾ ಲೇಖನಗಳು/ಬ್ಯಾರಿ ಪುಸ್ತಕ ಪರಿಚಯ/ಮರೆಯಬಾರದ ಬ್ಯಾರಿ ಮಹನೀಯರು/ಬ್ಯಾರಿ ಕತೆ/ಕವನ/ಚುಟುಕುಗಳನ್ನು ಆಹ್ವಾನಿಸಲಾಗಿದೆ. ಟೈಪ್ ಮಾಡಿ ಕಳುಹಿಸುವುದಾದರೆ ನುಡಿ ಫಾಂಟ್ನಲ್ಲಿ ಕಳುಹಿಸಬೇಕು. ಹೆಸರು ಮತ್ತು ವಿಳಾಸವಿಲ್ಲದ ಲೇಖನಗಳನ್ನು ಪ್ರಕಟಿಸಲಾಗುವುದಿಲ್ಲ. ಪ್ರಕಟಿತ ಲೇಖನಗಳ ಲೇಖಕರಿಗೆ ಗೌರವ ಸಂಭಾವನೆ ನೀಡಲಾಗುತ್ತದೆ.
ಲೇಖಕರು ಲೇಖನಗಳನ್ನು ತಮ್ಮ ಸಂಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆಯೊಂದಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಹ್ಯಾಮಿಲ್ಟನ್ ಕಾಂಪ್ಲೆಕ್ಸ್, 1ನೇ ಮಹಡಿ, ಸ್ಟೇಟ್ಬ್ಯಾಂಕ್, ಮಂಗಳೂರು 575001 ಈ ವಿಳಾಸಕ್ಕೆ ಅಥವಾ bearyacademy@yahoo.inಗೆ ಕಳುಹಿಸಿಕೊಡುವಂತೆ ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story