ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ
.gif)
ಮಂಗಳೂರು, ಮೇ 5: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದಾರೆ.
ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ರೋಡ್‌ಗಾಗಿ ಅವರು ಮಡಿಕೇರಿಯಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ ನಗರಕ್ಕೆ ಆಗಮಿಸಿದರು.
ಈ ನಡುವೆ ಮಂಗಳೂರು ನಗರದ ಖಾಸಗಿ ಹೊಟೇಲ್ ಒಂದರಲ್ಲಿ ಹಮ್ಮಿಕೊಂಡಿದ್ದ ಅಮಿತ್ ಶಾ ಅವರ ಸುದ್ದಿಗೋಷ್ಠಿಯನ್ನು ದಿಢೀರ್ ರದ್ದು ಮಾಡಲಾಯಿತು. ಸುದ್ದಿಗೋಷ್ಠಿ ನಿಗದಿಪಡಿಸಿದ್ದ ಸ್ಥಳಕ್ಕೆ ಆಗಮಿಸಿದ ಅಮಿತ್ ಶಾ ರೋಡ್ ಶೋ ಸಂದರ್ಭದಲ್ಲೇ ಸುದ್ದಿಗಾರರೊಂದಿಗೆ ಮಾತನಾಡುವುದಾಗಿ ತಿಳಿಸಿ ತೆರಳಿದರು.
ಅಮಿತ್ ಶಾ ನೇತೃತ್ವದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಪಿಕಾಡ್‌ನಿಂದ ತೊಕ್ಕೊಟ್ಟುವರೆಗೆ ರೋಡ್ ಶೋ ನಡೆಯಿತು. ರೋಡ್ ಶೋದಲ್ಲಿ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದು, ಮಂಗಳೂರು ಬಿಜೆಪಿ ಅಭ್ಯರ್ಥಿ ಸಂತೋಷ್ ರೈ ಬೋಳಿಯಾರ್ ಮತ್ತು ಬಿಜೆಪಿ ಮುಖಂಡರು ಅವರಿಗೆ ಸಾಥ್ ನೀಡಿದರು.
Next Story





