Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಏಕ ನಿವೇಶನ ನಿಯಮದ ಬಗ್ಗೆ ಬಿಜೆಪಿ ಸುಳ್ಳು...

ಏಕ ನಿವೇಶನ ನಿಯಮದ ಬಗ್ಗೆ ಬಿಜೆಪಿ ಸುಳ್ಳು ಮಾಹಿತಿ: ಮೇಯರ್ ಭಾಸ್ಕರ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ8 May 2018 4:48 PM IST
share
ಏಕ ನಿವೇಶನ ನಿಯಮದ ಬಗ್ಗೆ ಬಿಜೆಪಿ ಸುಳ್ಳು ಮಾಹಿತಿ: ಮೇಯರ್ ಭಾಸ್ಕರ ಮೊಯ್ಲಿ

ಮಂಗಳೂರು, ಮೇ 8: ಏಕ ನಿವೇಶನ ನಿಯಮಾವಳಿಯ ಕುರಿತು ಬಿಜೆಪಿ ಜನತೆಗೆ ಸುಳ್ಳು ಮಾಹಿತಿ ನೀಡುತ್ತಿದೆ. 2011ರಲ್ಲಿ ಏಕ ನಿವೇಶನ ಕುರಿತ ಕಾನೂನು ಜಾರಿಗೆ ತಂದಿದ್ದೇ ಬಿಜೆಪಿಗರು. ಅದನ್ನು ಮರೆತು ಇದೀಗ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮೇಯರ್ ಭಾಸ್ಕರ ಮೊಯ್ಲಿ ಆಪಾದಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ನಗರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿವೆ. ಆದರೆ ಬಿಜೆಪಿ ಆಧಾರರಹಿತ ಹೇಳಿಕೆ ನೀಡುವಲ್ಲಿ ನಿರತವಾಗಿದೆ ಎಂದು ಹೇಳಿದರು.

ಶಾಸಕ ಜೆ.ಆರ್.ಲೋಬೊ ಗ್ರಾಮೀಣ ಪ್ರದೇಶಕ್ಕೆ ಒತ್ತು ನೀಡಿ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಬಡವರಿಗೆ ಹಕ್ಕುಪತ್ರ ವಿತರಣೆ, ಮನೆ ನಿರ್ಮಾಣ, ನಗರದ ಮಾರ್ಕೆಟ್‌ಗಳ ಅಭಿವೃದ್ಧಿ ಸಹಿತ ಜನರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಿಕೊಡುವಲ್ಲಿ ಶ್ರಮಿಸಿದ್ದಾರೆ. ಮೊಯ್ದಿನ್ ಬಾವಾ ತನ್ನ ಕ್ಷೇತ್ರದಲ್ಲಿ ಸರಕಾರದ ಹಲವು ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಆದರೆ ಬಿಜೆಪಿಯ ಯೋಗೀಶ್ ಭಟ್ ನಾಲ್ಕು ಅವಧಿಯಲ್ಲಿ ಶಾಸಕರಾಗಿ ಮಾಡಿದ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ ಎಂದು ಭಾಸ್ಕರ ಮೊಯ್ಲಿ ಸವಾಲೆಸೆದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಗರೋತ್ಥಾನ ಎರಡನೇ ಹಂತದ ವಿಶೇಷ ಅನುದಾನದಡಿ 141 ಕಾಮಗಾರಿಗಳು ಮಂಜೂರಾಗಿದ್ದು, 117 ಕಾಮಗಾರಿಗಳು ಈಗಾಗಲೇ ಮುಗಿದಿವೆ. 17 ಕಾಮಗಾರಿಗಳು ಪ್ರಗತಿಯಲ್ಲಿವೆ. 7 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದ್ದು, ಅನುಷ್ಠಾನಕ್ಕೆ ಬಾಕಿಯಿದೆ. ಒಟ್ಟು ನಿಗದಿಯಾದ 10,000 ಲಕ್ಷ ರೂ. ಅನುದಾನದಲ್ಲಿ 9,600 ಲಕ್ಷ ರೂ. ಈಗಾಗಲೇ ಬಿಡುಗಡೆಯಾಗಿದೆ. ವಿವಿಧ ಕಾಮಗಾರಿಗಳಿಗೆ 6437.99 ಲಕ್ಷ ಖರ್ಚು ಮಾಡಲಾಗಿದೆ ಎಂದು ಮೇಯರ್ ಭಾಸ್ಕರ ಮೊಯ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಮಾಜಿ ಮೇಯರ್‌ಗಳಾದ ಹರಿನಾಥ್, ಮಹಾಬಲ ಮಾರ್ಲ, ಪಾಲಿಕೆಯ ಸಚೇತಕ ಶಶಿಧರ ಹೆಗ್ಡೆ, ಕಾಂಗ್ರೆಸ್ ಪ್ರಮುಖರಾದ ಸಂತೋಷ್ ಶೆಟ್ಟಿ, ದೀಪಕ್ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X